More

    ಬಸ್ ಅಪಘಾತ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಗಾಯ; ಡಿಸಿ ಕಚೇರಿ ಎದುರು ದಿಢೀರ್ ಪ್ರತಿಭಟನೆ; ಬಸ್ ಕೊರತೆಯೇ ಸಮಸ್ಯೆಗೆ ಕಾರಣ ಆರೋಪ

    ಹಾವೇರಿ: ಸಾರಿಗೆ ಬಸ್ ಚಾಲಕನ ನಿರ್ಲಕ್ಷೃದಿಂದ ಬಸ್ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ತಾಲೂಕಿನ ದೇವಗಿರಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್‌ನ ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಸೋಮವಾರ ನಡೆದಿದೆ. ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಡಿಸಿ ಕಚೇರಿ ಎದುರು ಎಸ್‌ಎಫ್‌ಐ ನೇತೃತ್ವದಲ್ಲಿ ದಿಢೀರ್ ಪ್ರತಿಭಟನೆ ನಡೆಸಿದ ಪ್ರಸಂಗ ನಡೆಯಿತು.
    ರೇವಣಸಿದ್ದೇಶ ವಿ., ಆರ್.ಕಿರಣ, ಮೋಹನ ಎಚ್., ಪ್ರವೀಣ ರಾಠೋಡ ಗಾಯಗೊಂಡ ವಿದ್ಯಾರ್ಥಿಗಳು.
    ಬೆಳಗ್ಗೆ ವಿದ್ಯಾರ್ಥಿಗಳು ಹಾವೇರಿ ನಗರದಿಂದ ಬಸ್‌ನಲ್ಲಿ ಕಾಲೇಜ್ ಕಡೆಗೆ ತೆರಳುತ್ತಿದ್ದರು. ಈ ವೇಳೆ ದೇವಗಿರಿ ಬಳಿ ಬಸ್ ಚಾಲಕ ವಿದ್ಯಾರ್ಥಿಗಳು ಹತ್ತುವ ಮುಂಚೆಯೇ ಬಸ್ ಚಲಾಯಿಸಿದ್ದರು. ಅಲ್ಲದೇ ಎದುರಿಗೆ ವಿದ್ಯಾರ್ಥಿಗಳಿದ್ದ ಟಂಟಂಗೆ ಡಿಕ್ಕಿ ಹೊಡೆದಿದ್ದರು. ಇದರಿಂದಾಗಿ ಓರ್ವ ವಿದ್ಯಾರ್ಥಿಯ ತಲೆಗೆ ಪೆಟ್ಟು ಬಿದ್ದಿದೆ. ಇತರ ಮೂವರಿಗೆ ಗಾಯಗಳಾಗಿವೆ. ಈ ಕುರಿತು ಚಾಲಕ, ನಿರ್ವಾಹಕ ಹಾಗೂ ವಿದ್ಯಾರ್ಥಿಗಳ ನಡುವೆ ಕೆಲಕಾಲ ವಾಗ್ವಾದ ನಡೆಯಿತು. ನಂತರ ಡಿಸಿ ಕಚೇರಿ ಎದುರು ತೆರಳಿದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಯವರಿಗೆ ಮನವಿ ಪತ್ರ ಸಲ್ಲಿಸಿದರು.
    ಎಸ್‌ಎಫ್‌ಐ ರಾಜ್ಯಾಧ್ಯಕ್ಷ ಅಮರೇಶ ಕಡಗದ ಮಾತನಾಡಿ, ಸರ್ಕಾರ ಹಾಗೂ ಜಿಲ್ಲಾಡಳಿತ ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕ ಸೇವೆಗೆ ಸಮರ್ಪಕವಾಗಿ ಬಸ್ಸುಗಳನ್ನು ಬಿಡಬೇಕು. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹೆಚ್ಚುವರಿ ಬಸ್ ಸೌಲಭ್ಯ ಒದಗಿಸಬೇಕು. ಅನ್ಯಾಯಕ್ಕೆ ಒಳಗಾದ ವಿದ್ಯಾರ್ಥಿಗಳಿಗೆ ಸೂಕ್ತ ಪರಿಹಾರ ಒದಗಿಸಬೇಕು. ಈ ವಿಚಾರದಲ್ಲಿ ಗಂಭೀರವಾಗಿ ಚಿಂತನೆ ನಡೆಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಶಕ್ತಿ ಯೋಜನೆಯ ನೆಪದಲ್ಲಿ ಸಾರಿಗೆಯ ಹಲವು ಸಿಬ್ಬಂದಿ ನಿರ್ಲಕ್ಷೃ ತೋರುತ್ತಿದ್ದಾರೆ. ಕರ್ತವ್ಯ ಜವಾಬ್ದಾರಿ ಮರೆಮಾಚುತ್ತಿದ್ದಾರೆ. ವಿದ್ಯಾರ್ಥಿಗಳನ್ನು ಕಂಡರೆ ಬಸ್ ನಿಲ್ಲಿಸದೇ, ಮರ್ಯಾದೆ ಕೊಡದೇ ವರ್ತಿಸುತ್ತಿದ್ದಾರೆ. ಅಪಘಾತಕ್ಕೀಡಾದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಚಿಕಿತ್ಸೆ ಜತೆಗೆ 1 ಲಕ್ಷ ರೂ. ಪರಿಹಾರ ಒದಗಿಸಲು ಹಾಗೂ ತಪ್ಪಿತಸ್ಥರ ಸಿಬ್ಬಂದಿ ವಿರುದ್ಧ ಶಿಸ್ತುಕ್ರಮ ಜರುಗಿಸುವಂತೆ ವಿದ್ಯಾರ್ಥಿಗಳು ಆಗ್ರಹಿಸಿದರು.
    ಮಹೇಶ ಮರೋಳ, ಕಿರಣ ಬಿ, ಅಭಿಷೇಕ ಹಲಗೇರಿ, ನವೀನ, ಪ್ರಥಮೇಶ ಎಂ., ಕುಮುದಾ ಯಶೋದಾ, ಅಕ್ಷತಾ ಕೆ.ಆರ್., ಕೀರ್ತನಾ ಕೆ., ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
    ಅರ್ಧಕ್ಕರ್ದ ಬಸ್ ಟ್ರಿಪ್ ಕಡಿತ
    ದೇವಗಿರಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್ ರೂಟ್‌ನಲ್ಲಿ ನಿತ್ಯ 15ರಿಂದ 20 ಟ್ರಿಪ್ ಬಸ್ ಬರುತ್ತಿದ್ದವು. ಆದರೆ, ಶಕ್ತಿ ಯೋಜನೆ ಜಾರಿಯಾದ ಮೇಲೆ ಬಸ್ ಟ್ರಿಪ್ ಅರ್ಧಕ್ಕಿಂತ ಕಡಿಮೆಯಾಗಿವೆ. ಈ ಹಿಂದೆ ಜಿಲ್ಲಾಧಿಕಾರಿಯವರ ಆದೇಶದ ಮೇರೆಗೆ ಅರ್ಧ ಗಂಟೆಗೊಮ್ಮೆ ಬಸ್ ಬಿಡುತ್ತಿದ್ದರು. ಎರಡು ತಿಂಗಳಿಂದ ಅವರ ಆದೇಶವನ್ನು ಸಾರಿಗೆ ಸಂಸ್ಥೆ ಉಲ್ಲಂಘಿಸಿದೆ ಎಂದು ಎಸ್‌ಎಫ್‌ಐ ಜಿಲ್ಲಾ ಸಹ ಕಾರ್ಯದರ್ಶಿ ಬಸವರಾಜ ಬೋವಿ ಆರೋಪಿಸಿದರು. ಕೂಡಲೇ ವಿದ್ಯಾರ್ಥಿಗಳ ಸಭೆ ಕರೆದು ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿದರು.

    ಸಿನಿಮಾ

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_sticky', [[320, 50], [300, 50]], 'div-gpt-ad- 1719903699617-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_sticky --> <div id='div-gpt-ad-1719903699617-0' style='min-width: 300px; min-height: 50px;'> <script> googletag.cmd.push(function() { googletag.display('div-gpt-ad-1719903699617-0'); }); </script> </div>

    ಲೈಫ್‌ಸ್ಟೈಲ್

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_AP_300x250', [[300, 50], [250, 250], [300, 250], [200, 200]], 'div-gpt-ad-1719903811902-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_AP_300x250 --> <div id='div-gpt-ad-1719903811902-0' style='min-width: 200px; min-height: 50px;'> <script> googletag.cmd.push(function() { googletag.display('div-gpt-ad-1719903811902-0'); }); </script> </div>

    ಟೆಕ್ನಾಲಜಿ

    Latest Posts