More

    ಸಿಎಂ, ಡಿಸಿಎಂ ಕುರ್ಚಿ ಕಿತ್ತಾಟ ಒಳ್ಳೆಯದಲ್ಲ; ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ

    ಹಾವೇರಿ: ರಾಜ್ಯ ಸರ್ಕಾರದಲ್ಲಿ ಸಿಎಂ. ಡಿಸಿಎಂ ಕುರ್ಚಿಗಾಘಿ ಕಚ್ಚಾಟ ನಡೆದಿದೆ. ಇಷ್ಟು ಅನುಭವ ಇರುವ ಸಿಎಂ, ಡಿಸಿಎಂ, ಮಂತ್ರಿಗಳಿದ್ದರೂ ಖುರ್ಚಿಗಾಗಿ ಕಿತ್ತಾಟ ಮಾಡುವುದು ರಾಜ್ಯದ ಹಿತದೃಷ್ಟಿಯಿಂದ ಸರಿಯಲ್ಲ. ಈ ಸರ್ಕಾರವನ್ನು ಜನಸಾಮಾನ್ಯರು ಅತ್ಯಂತ ಖಂಡನೀಯವಾಗಿ ನೋಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಬಿಳುತ್ತದೆ ಎಂದು ಬೊಮ್ಮಾಯಿ ಹಗಲುಗನಸು ಕಾಣುತ್ತಿದ್ದಾರೆ. ಕೇಂದ್ರ ಸರ್ಕಾರದ ಸ್ಥಿತಿ ಬಗ್ಗೆ ಯೋಚಿಸಲಿ ಎಂಬ ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿದ ಬೊಮ್ಮಾಯಿ, ಸಲೀಂ ಅಹ್ಮದ್ ವಿಧಾನ ಪರಿಷತ್ ಸದಸ್ಯರು ವಿಧಾನಸಭೆಯಲ್ಲಿ ಏನು ಆಗುತ್ತೆ..? ಮಂತ್ರಿ ಮಂತ್ರಿಗಳ ನಡುವೆ ಏನಾಗುತ್ತದೆ? ಸಿಎಂ, ಡಿಸಿಎಂ ನಡುವೆ ಏನಾಗುತ್ತಿದೆ ಎಂದು ತಿಳಿದುಕೊಳ್ಳಲಿ. ಅವರಿಗೆ ಎಲ್ಲವೂ ಗೊತ್ತಿದ್ದು ಹೀಗೆ ಹೇಳುತ್ತಿದ್ದಾರೋ ಅಥವಾ ಅವರ ಗಮನಕ್ಕೆ ಇಲ್ಲವೋ ನನಗೆ ಗೊತ್ತಿಲ್ಲ. ಸಲೀಂ ಅಹ್ಮದ್ ಬಗ್ಗೆ ನನಗೆ ಕನಿಕರ ಬರುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್ ನೆಲಕಚ್ಚುತ್ತಿದ್ದರೂ ಹೀಗೆ ಹೇಳಿದರೆ ನಾನು ಏನು ಹೇಳಲಿ ಎಂದು ಹೇಳಿದರು.
    ಶಾಸಕರಿಗೆ ನೀಡುವ ಬತ್ತೆ ಚಹಾ ಕುಡಿಯಲಿಕ್ಕೆ ಸಾಲುವುದಿಲ್ಲ ಎಂದು ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಯು.ಟಿ ಖಾದರ್ ಯಾವ ಆಧಾರದ ಮೇಲೆ ಹೇಳಿದ್ದಾರೆ ನನಗೆ ಗೊತ್ತಿಲ್ಲ. ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆಯಾಗಲಿ ಎಂದರು.
    ಡೆಂಘೆ ತಡೆಗೆ ಮುನ್ನೆಚ್ಚರಿಕೆ ವಹಿಸಿ
    ಒಂದು ಕಾಲದಲ್ಲಿ ಹೇಗೆ ಕಾಲರಾ, ಮಲೇರಿಯಾ ಹೆಚ್ಚಾಗಿತ್ತೋ ಹಾಗೆ ಈ ಸಲ ಡೆಂಘೆ ಬಂದಿದೆ. ಅಧಿಕಾರಿಗಳು ಯಾವುದೇ ಮುಂಜಾಗ್ರತಾ ಕ್ರಮ ತೆಗೆದು ಕೊಳ್ಳುವುದಿಲ್ಲ. ಹೀಗಾಗಿ ಉಲ್ಬಣವಾಗುತ್ತಿದೆ. ಡೆಂಘೆ ಮಹಾಮಾರಿ ಹಾವಳಿ ತಡೆಗೆ ಮತ್ತಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಡಿಸಿ, ಡಿಎಚ್‌ಒ, ಡಿಎಸ್‌ಗೆ ಆಗ್ರಹಿಸುತ್ತೇನೆ.
    ಡೆಂಘೆ ಡೆತ್ ಕೇಸ್ ಸಂಖ್ಯೆ ಮರೆಮಾಚುತ್ತಿದ್ದಾರೆ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿದ ಅವರು, ಡೆಂಘೆ ಜ್ವರದಿಂದ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ, ಅಧಿಕಾರಿಗಳು ಸರ್ಕಾರಿ ಆಸ್ಪತ್ರೆಯ ಸಂಖ್ಯೆಯನ್ನು ಮಾತ್ರ ಗಣನೆಗೆ ತೆಗೆದುಕೊಳ್ಳುತ್ತಿದ್ದಾರೆ. ಡೆಂಘೆ ಸೋಂಕಿತರು ಹುಬ್ಬಳ್ಳಿ, ದಾವಣಗೆರೆ ಸೇರಿದಂತೆ ವಿವಿಧ ಖಾಸಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ ಅವುಗಳನ್ನು ಲೆಕ್ಕಕ್ಕೆ ತೆಗೆದುಕೊಳ್ಳಬೇಕು ಎಂದು ಬೊಮ್ಮಾಯಿ ಆಗ್ರಹಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts