More

    ಪಿ.ಎಂ.ಕಿಸಾನ್ ಯೋಜನೆ ಆರ್ಥಿಕ ಸೌಲಭ್ಯಕ್ಕೆ ಇ-ಕೆವೈಸಿ ಕಡ್ಡಾಯ

    ಹಾವೇರಿ: ಪಿ.ಎಂ.ಕಿಸಾನ್ ಯೋಜನೆಯಡಿ ಮುಂಬರುವ ಆರ್ಥಿಕ ನೆರವು ಪಡೆಯಲು ರೈತರು ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಮಂಜುನಾಥ ಅಂತರವಳ್ಳಿ ತಿಳಿಸಿದ್ದಾರೆ.
    ಕೇಂದ್ರ ಸರ್ಕಾರ ಇ-ಕೆವೈಸಿ ಕಡ್ಡಾಯಗೊಳಿಸಿದ್ದು, ಇ-ಕೆವೈಸಿ ಮಾಡದಿದ್ದಲ್ಲಿ ಆರ್ಥಿಕ ನೆರವು ಸ್ಥಗಿತಗೊಳ್ಳಲಿರುವ ಕಾರಣ ಪಿ.ಎಂ.ಕಿಸಾನ್ ಯೋಜನೆಯ ಎಲ್ಲ ಫಲಾನುಭವಿಗಳು ಪೋಸ್ಟ್ ಆಫೀಸ್, ನಾಗರಿಕ ಸೇವಾ ಕೇಂದ್ರ(ಸಿಎಸ್‌ಸಿ) ಮತ್ತು ಗ್ರಾಮ ಒನ್ ಸೇವಾ ಕೇಂದ್ರದಲ್ಲಿ ಒಟಿಪಿ ಮುಖಾಂತರ ಹಾಗೂ ಬಯೋಮೆಟ್ರಿಕ್ ಆಧಾರಿತವಾಗಿ ಇ-ಕೆವೈಸಿಯನ್ನು ತಕ್ಷಣ ಮಾಡಬೇಕು. ಇದಲ್ಲದೇ ಗೂಗಲ್ ಪ್ಲೇಸ್ಟೋರ್‌ನಲ್ಲಿ ಲಭ್ಯವಿರುವ PM-KISAN Gol ಆ್ಯಪ್ ಮೂಲಕ ಸಹ ಇ-ಕೆವೈಸಿ ಮಾಡಿಕೊಳ್ಳಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts