More

    ಗ್ಯಾರಂಟಿ ಯೋಜನೆ ಸರಿದೂಗಿಸಲು ಬೆಲೆ ಏರಿಕೆ

    ಹೊಸಪೇಟೆ: ರಾಜ್ಯ ಕಾಂಗ್ರೆಸ್ ಸರ್ಕಾರ ಹಾಲಿನ ದರ ಹೆಚ್ಚಿಸಿರುವುದನ್ನು ಖಂಡಿಸಿ ಬಿಜೆಪಿ ಮಂಡಲ ಹಾಗೂ ರೈತ ಮೋರ್ಚಾ ಕಾರ್ಯಕರ್ತರು ನಗರದ ತಹಸೀಲ್ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ವಿಶ್ವಜೀತ್ ಮಹೇತಾಗೆ ಮನವಿ ಸಲ್ಲಿಸಿದರು.

    ರೈತ ಮೋರ್ಚಾ ಜಿಲ್ಲಾ ಅಧ್ಯಕ್ಷ ಎಚ್.ರೇವಣ್ಣ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಖ್ಯ ಬೀದಿಯಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದ ಖಜಾನೆ ಖಾಲಿಯಾಗಿದೆ. ಗ್ಯಾರಂಟಿ ಯೋಜನೆಗಳನ್ನು ಸರಿದೂಗಿಸಲು ಬೆಲೆ ಏರಿಸಿ ಜನ ಸಾಮಾನ್ಯರ ಮೇಲೆ ಹೊರೆ ಬೀಳುವಂತೆ ಮಾಡಿದ್ದಾರೆ. ಬೆಲೆ ಏರಿಕೆಯನ್ನು ಹಿಂದಕ್ಕೆ ಪಡೆಯಬೇಕು ಎಂದು ಒತ್ತಾಯಿಸಿದರು.

    ಅಧಿಕಾರಕ್ಕೆ ಬಂದ ವರ್ಷದಲ್ಲಿಯೇ ಮುದ್ರಾಂಕ ನೋಂದಣಿ, ಸ್ಥಿರಾಸ್ತಿಗಳ ಮಾರ್ಗಸೂಚಿ ದರ, ಮೋಟಾರ್ ವಾಹನಗಳ ನೋಂದಣಿ ಶುಲ್ಕ, ವಾಣಿಜ್ಯ ವಿದ್ಯುತ್ ದರ, ಹಾಲಿನ ಬೆಲೆ ಮತ್ತು ರೈತರಿಗೆ ಬಿತ್ತನೆ ಬೀಜ ದರದ ಏರಿಕೆಯಿಂದ ಜನತೆಗೆ ತೊಂದರೆಯಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಮತಾಂಧರು ಮತ್ತು ಸಮಾಜ ದ್ರೋಹಿಗಳು ವಿಜ್ರಂಭಿಸುವAತಾಗಿದೆ ಎಂದು ಕಾರ್ಯಕರ್ತರು ಆಗ್ರಹಿಸಿದರು.

    ಮಂಡಲ ಅಧ್ಯಕ್ಷ ಶಂಕರ್ ಮೇಟಿ, ಪ್ರಮುಖರಾದ ಬಲಹುಣ್ಸಿ ರಾಮಾಣ್ಣ, ಕೆ.ಎಸ್.ರಾಘವೇಂದ್ರ, ಬೆಣಕಲ್ಲ ಪ್ರಕಾಶ್, ನಾಗರಾಜ್, ಸುರೇಶ್, ಬಾಬುರಾವ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts