More

    ಜನರ ಕೆಲಸ ತಕ್ಷಣ ಮಾಡಿಕೊಡಿ

    ಹುಮನಾಬಾದ್: ಸರ್ಕಾರದ ಆದೇಶದಂತೆ ಸಾರ್ವಜನಿಕರ ಸಮಸ್ಯೆಗಳನ್ನು ಸ್ಥಳದಲ್ಲೇ ಇತ್ಯರ್ಥಪಡಿಸಲು ಜಿಲ್ಲಾಡಳಿತ ಇಂದು ಅವರ ಮನೆ ಬಾಗಿಲಿಗೆ ಬಂದಿದೆ ಎಂದು ಜಿಲ್ಲಾಧಿಕಾರಿ ಗೋವಿಂದರಡ್ಡಿ ಹೇಳಿದರು.

    ತಹಸಿಲï ಕಚೇರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಜನಸ್ಪಂದನ ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ್ದ ಅವರು, ಸರ್ಕಾರಿ ಕೆಲಸಗಳಿಗಾಗಿ ವಿನಕಾರಣ ಅಲೆದಾಡಿಸಬಾರದೆಂಬ ಉದ್ದೇಶದಿಂದ ಜನಸ್ಪಂದನ ಕಾರ್ಯಕ್ರಮದಲ್ಲಿ ಎಲ್ಲ ಇಲಾಖೆ ಅನುಷ್ಠಾನಾಧಿಕಾರಿಗಳ ಸಮ್ಮುಖದಲ್ಲಿ ತಾಲೂಕಿನ ಜನರ ಸಮಸ್ಯೆ ಆಲಿಸಿ ಸ್ಪಂದಿಸಿದ್ದೇವೆ. ಸಭೆಗೆ ಬರಲು ಆಗದವರು ತಮ್ಮ ಕಚೇರಿಗೆ ಬಂದರೆ ಸ್ಪಂದಿಸಿ ಕಾನೂನಿನಡಿ ಕೆಲಸ ಮಾಡಿಕೊಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

    ಪಟ್ಟಣದಲ್ಲಿ ವಾಹನಗಳಿಗೆ ನಂಬರ್ ಪ್ಲೇಟ್ ಹಾಕದೆ ಸಂಚರಿಸುತ್ತಿರುವುದು ಕಂಡು ಬಂದಿದೆ. ವಿವಿಧ ಬಡಾವಣೆಗಳಲ್ಲಿ ಕಸ ವಿಲೇವಾರಿ ಸೇರಿ ವಿವಿಧ ಕೆಲಸಗಳಿಗೆ ಬಳಸುವ ವಾಹನಗಳಿಗೆ ನಂಬರ್ ಪ್ಲೇಟ್ ಇಲ್ಲ. ಪುರಸಭೆ ಅಡಿ ಕೆಲಸ ನಿರ್ವಹಿಸುವ ವಾಹನಗಳಿಗೆ ನೋಂದಣೆ ಆಗಿದೆಯೋ ಇಲ್ಲವೋ ಎಂಬ ಅನುಮಾನವೂ ಇದೆ. ಸಂಚಾರ ನಿಯಮ ಮೀರಿ ಸಂಚರಿಸುತ್ತಿರುವ ಪುರಸಭೆ ವಾಹನಗಳ ಬಗ್ಗೆ ಸಂಬಂಧಿತರು ಗಮನಹರಿಸಿ ಸೂಕ್ತ ಕ್ರಮ ಜರುಗಿಸುವಂತೆ ಬೋರಂಪಳ್ಳಿ ಗ್ರಾಮದ ಆರ್‌ಟಿಐ ಕಾರ್ಯಕರ್ತ ಚಂದ್ರಕಾಂತ ಬಿರಾದಾರ ಕೋರಿದರು. ಸಂಬಂಧಿತ ಇಲಾಖೆಗೆ ಸೂಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿ ತಿಳಿಸಿದರು.

    ದುಬಲಗುಂಡಿ ಗ್ರಾಮದಲ್ಲಿ ಎಪಿಎಂಸಿ ಮಾರುಕಟ್ಟೆ ಮಂಜೂರಾಗಿದ್ದರೂ ಕಾಮಗಾರಿ ನನೆಗುದಿಗೆ ಬಿದ್ದಿದ್ದು, ಸಂಬಂಧಿತ ಅಧಿಕಾರಿಗಳಿಗೆ ಮೌಖಿಕಾಗಿ ತಿಳಿಸಿದರೂ ಸ್ಪಂದಿಸಿಲ್ಲ. ಇದರಿಂದ ಸುತ್ತಮುತ್ತಲಿನ ರೈತರಿಗೆ ತುಂಬ ತೊಂದರೆಯಾಗುತ್ತಿದೆ. ಕೂಡಲೆ ಕ್ರಮ ಕೈಗೊಳ್ಳಬೇಕೆಂದು ವರವಟ್ಟಿ(ಕೆ) ಗ್ರಾಮದ ದತ್ತಾತ್ರೆ ನಡುವಿನದೊಡ್ಡಿ ಲಿಖಿತ ಮನವಿ ಸಲ್ಲಿಸಿದರೆ, ರೈತ ಸಂಘದ ಮುಖಂಡ ಖಾಸೀಂ ಅಲಿ ಸಿ-ಫಾರ್ಮ್ ಪಡೆದ ರೈತರ ಸಮಸ್ಯೆಗೆ ಸ್ಪಂದಿಸಬೇಕು. ಕಾಡು ಹಾಂದಿಗಳಿಂದ ಸಾಕಷ್ಟು ಬೆಳೆಗಳು ಹಾಳಾಗುತ್ತಿದ್ದು, ರೈತರು ಗಾಯಗೊಂಡಿದ್ದಾರೆ. ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಸಂಬಂಧಿಸಿದ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಗೋವಿಂದರಡ್ಡಿ ಸೂಚಿಸಿದರು.

    ಪಡಿತರ ಚೀಟಿ, ವೃದ್ಧಾಪ್ಯ ವೇತನ ಇತರ ಸಮಸ್ಯೆಗಳಿಗೆ ಸ್ಪಂದಿಸಿದ ಡಿಸಿ, ಕೆಲವನ್ನು ಸ್ಥಳದಲ್ಲಿಯೇ ಪರಿಹರಿಸಿದರು. ಇತರ ಅರ್ಜಿಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಲಂಗೋಟಿ, ಸಹಾಯಕ ಆಯುಕ್ತ ಪ್ರಕಾಶ ಕುದರೆ, ತಹಸೀಲ್ದಾರ್ ಅಂಜುಂ ತಬಸ್ಸುಮ್, ಡಿವೈಎಸ್‌ಪಿ ಜೆ.ಎಸ್. ನ್ಯಾಮಗೌಡರ್, ಸಿಪಿಐ ಗುರು ಪಾಟೀಲ್, ಗ್ರೇಡ್-೨ ತಹಸೀಲ್ದಾರ್ ಮಂಜುನಾಥ ಪಂಚಾಳ, ಕಂದಾಯ ನಿರೀಕ್ಷಕ ರಾಹುಲ್ ಇತರರಿದ್ದರು.
    ಸಭೆಗೆ ಸಾರ್ಜಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲಿಲ್ಲ. ಹೀಗಾಗಿ ಕೇವಲ ೧೬ ಅರ್ಜಿ ಸಲ್ಲಿಕೆಯಾಗಿವೆ.

    ಪೊಲೀಸ್ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಗಮನಕ್ಕೆ ತಂದರೆ ತಕ್ಷಣ ಸ್ಪಂದಿಸಲಾಗುವುದು. ರಸ್ತೆ ಅಪಘಾತ, ಕಳ್ಳತನ ಇತರ ಅಪರಾಧ ತಡೆಗಟ್ಟುವಲ್ಲಿ ಇಲಾಖೆ ನಾನಾ ರೀತಿಯ ಜಾಗೃತಿ ಮೂಡಿಸುವಲ್ಲಿ ತೊಡಗಿದೆ. ಇದಕ್ಕೆ ಎಲ್ಲ ಅಧಿಕಾರಿಗಳು ಸಹಕರಿಸಬೇಕು.
    | ಚನ್ನಬಸವಣ್ಣ ಲಂಗೋಟಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts