More

    ಮುಂದಿನ 4-5 ದಿನ ಈ ರಾಜ್ಯಗಳಲ್ಲಿ ಭಾರೀ ಮಳೆಯ ಮುನ್ಸೂಚನೆ! ಹೀಗಿದೆ ಐಎಂಡಿ ವರದಿ

    ನವದೆಹಲಿ: ಕೆಲವು ದಿನಗಳಿಂದ ದೇಶದ ಹಲವು ಭಾಗಗಳಲ್ಲಿ ಧಾರಕಾರ ಮಳೆ ಸುರಿಯುತ್ತಿದ್ದು, ನಗರ ಪ್ರದೇಶಗಳು ಜಲಾವೃತಗೊಂಡಿವೆ. ನಿರಂತರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಗುಜರಾತ್​, ಅರುಣಾಚಲ ಪ್ರದೇಶ ಸೇರಿದಂತೆ ಇತರೆ ರಾಜ್ಯಗಳು ಮಳೆಯ ಆರ್ಭಟಕ್ಕೆ ತತ್ತರಿಸಿವೆ. ಇನ್ನು ಮುಂದಿನ ದಿನಗಳಲ್ಲಿ ಹಲವಾರು ರಾಜ್ಯಗಳಲ್ಲಿ ಮಳೆಯ ರೌದ್ರಾವತಾರ ಮುಂದುವರೆಯುವ ಹಿನ್ನೆಲೆ ಭಾರತೀಯ ಹವಾಮಾನ ಇಲಾಖೆಯು ಹೊಸ ಪ್ರಕಟಣೆಯನ್ನು ಹೊರಡಿಸಿದೆ.

    ಇದನ್ನೂ ಓದಿ: ಬೆಂಗಳೂರಿನಲ್ಲಿ ಪ್ರೀತಿಯ ಪತ್ನಿಯ ಹುಟ್ಟು ಹಬ್ಬ ಆಚರಿಸಿದ ರೇಣುಕಾಚಾರ್ಯ

    ಕಳೆದ ವಾರ ಅಸ್ಸಾಂ ಮತ್ತು ಮೇಘಾಲಯ, ಅರುಣಾಚಲ ಪ್ರದೇಶ, ಬಿಹಾರ, ಹಿಮಾಲಯ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನ ಪ್ರತ್ಯೇಕ ಸ್ಥಳಗಳಲ್ಲಿ ವ್ಯಾಪಕ ಮಳೆಯಾಗಿದೆ. ಪೂರ್ವ ರಾಜಸ್ಥಾನ, ಹರಿಯಾಣ, ಛತ್ತೀಸ್‌ಗಢ, ಉತ್ತರಾಖಂಡ, ಉತ್ತರ ಪ್ರದೇಶ, ಒಡಿಶಾ, ಮಧ್ಯಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾ, ಗಂಗಾನದಿ ಪಶ್ಚಿಮ ಬಂಗಾಳ, ಮಧ್ಯ ಮಹಾರಾಷ್ಟ್ರ, ಕೊಂಕಣ, ಗೋವಾ, ತಮಿಳುನಾಡು, ದಕ್ಷಿಣ ಕರ್ನಾಟಕ, ತೆಲಂಗಾಣ, ಕರಾವಳಿ ಆಂಧ್ರ ಪ್ರದೇಶ ಮತ್ತು ಯಾನಂನಲ್ಲಿ ಬಿರುಸಿನ ಮಳೆಯಾಗಿದೆ.

    ಇನ್ನು ಈ ವಾರವೂ ಕೂಡ ಮಳೆಯ ಆರ್ಭಟ ಮುಂದುವರೆಯಲಿದ್ದು, ಗುಡುಗು, ಮಿಂಚು ಸಹಿತ ಧಾರಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪಂಜಾಬ್, ಹಿಮಾಚಲ ಪ್ರದೇಶ, ನೈರುತ್ಯ ಮತ್ತು ವಾಯುವ್ಯ ಮಧ್ಯಪ್ರದೇಶ, ಪೂರ್ವ ಉತ್ತರ ಪ್ರದೇಶ, ಛತ್ತೀಸ್‌ಗಢ, ಬಿಹಾರ, ಜಾರ್ಖಂಡ್, ದಕ್ಷಿಣ ಗುಜರಾತ್, ದಕ್ಷಿಣ ತೆಲಂಗಾಣ, ಆಂಧ್ರ ಪ್ರದೇಶ, ದಕ್ಷಿಣ ಕರ್ನಾಟಕ, ಉತ್ತರ ತಮಿಳುನಾಡು, ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಮಳೆ ಬೀಳಲಿದೆ ಎಂದು ಐಎಂಡಿ ಸೂಚಿಸಿದೆ,(ಏಜೆನ್ಸೀಸ್).

    ಈ ವಿಷಯದ ಬಗ್ಗೆ ಅನುಮಾನವೇ ಬೇಡ… ರೋಹಿತ್​ರನ್ನು ಕಪಿಲ್ ದೇವ್​​ಗೆ ಹೋಲಿಸಿದ ಮಾಜಿ ಕ್ರಿಕೆಟಿಗ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts