More

    ಧರ್ಮದ ಕಾರ್ಯಕ್ಕೆ ದೇವಿ ಅನುಗ್ರಹ : ಕನ್ಯಾನ ಸದಾಶಿವ ಶೆಟ್ಟಿ ಅಭಿಪ್ರಾಯ ;ಸ್ವರ್ಣ ಗೌರಿ ಪೂಜೆ, ಸ್ವರ್ಣ ಸಮರ್ಪಣೆ

    ವಿಜಯವಾಣಿ ಸುದ್ದಿಜಾಲ ಪಡುಬಿದ್ರಿ

    ಸ್ವರ್ಣ ಸಮರ್ಪಣೆ ನಮಗೆಲ್ಲ ಲಭಿಸಿದ ಸುವರ್ಣಾವಕಾಶ. ಅಮ್ಮನ ಅನುಗ್ರಹದಿಂದ ಇಂತಹ ಕಾರ್ಯಕ್ರಮಗಲ್ಲಿ ಭಾಗವಹಿಸುವ ಅವಕಾಶ ದೊರೆತಿರುವುದು ಸಂತಸ ತಂದಿದೆ. ಸರಸ್ವತಿ ಕೃಪೆಯಿಂದ ವಿದ್ಯಾಭ್ಯಾಸ ಮಾಡಿ, ಕರ್ಮ ಹಾಗೂ ಧರ್ಮದ ಕಾರ್ಯ ಮಾಡುವಲ್ಲಿ ದೇವಿಯ ಅನುಗ್ರಹವಾಗಿದೆ ಎಂದು ಮುಂಬೈ ಉದ್ಯಮಿ ಕುಳೂರು ಕನ್ಯಾನ ಸದಾಶಿವ ಶೆಟ್ಟಿ ಅಭಿಪ್ರಾಯಪಟ್ಟರು.

    ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರದ ಪ್ರಯುಕ್ತ ಮಾರಿಗುಡಿ ಅಭಿವೃದ್ಧಿ ಸಮಿತಿ ಮತ್ತು ಸ್ವರ್ಣ ಸಮರ್ಪಣಾ ಸಮಿತಿ ನೇತೃತ್ವದಲ್ಲಿ ಮಂಗಳವಾರ ನಡೆದ ಸ್ವರ್ಣ ಗೌರಿ ಪೂಜೆ ಮತ್ತು ಸ್ವರ್ಣ ಸಮರ್ಪಣಾ ಸಮಾರಂಭದ ಧಾರ್ಮಿಕ ಸಭೆ ಉದ್ಘಾಟಿಸಿ ಮಾತನಾಡಿದರು.
    ಸ್ವರ್ಣ ಗದ್ದುಗೆ ಮಾದರಿ ಅನಾವರಣಗೊಳಿಸಿದ ಮುಂಬೈ ಉದ್ಯಮಿ ಕೆ.ಎಂ.ಶೆಟ್ಟಿ ಮಾತನಾಡಿ, ಅಮ್ಮನ ಪ್ರೇರಣೆಯಿಂದ ಉತ್ತಮ ಸ್ಥಿತಿಗೇರಲು ಸಾಧ್ಯವಾಗಿದೆ. ದೇಗುಲ ನಿರ್ಮಾಣದಲ್ಲಿಯೂ ತೊಡಗಿಸಿಕೊಳ್ಳಲು ಅಮ್ಮನ ಅನುಗ್ರಹವಿದೆ ಎಂದರು.

    ಅಭಿನಂದನೆ ಸ್ವೀಕರಿಸಿದ ಉದ್ಯಮಿ ಕೆ.ಪ್ರಕಾಶ್ ಶೆಟ್ಟಿ ಮಾತನಾಡಿ, ಕಾಪುವಿನ ಜನ ಹೃದಯ ಶ್ರೀಮಂತಿಕೆ ಉಳ್ಳವರಾಗಿದ್ದು, ಅವರಲ್ಲಿರುವ ಒಗ್ಗಟ್ಟು, ಅಮ್ಮನ ಅನುಗ್ರಹಕ್ಕೂ ಪಾತ್ರರಾಗಿದೆ ಎಂದರು. ಅದಾನಿ ಸಮೂಹ ಸಂಸ್ಥೆಯ ದಕ್ಷಿಣ ಭಾರತ ಅಧ್ಯಕ್ಷ ಕಿಶೋರ್ ಆಳ್ವ, ದೇವಳದ ನೈರ್ಮಲ್ಯ ಕೇಂದ್ರ ನಿರ್ಮಾಣಕ್ಕೆ ಬೆಂಬಲ ಘೋಷಿಸಿದರು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಸರ್ಕಾರದ ಅನುದಾನಕ್ಕಾಗಿ ಪ್ರಯತ್ನಿಸಲಾಗುವುದು ಎಂದರು.

    ಕಾಪು ಶ್ರೀ ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ವಿನಯಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್, ತಹಸೀಲ್ದಾರ್ ಪ್ರತಿಭಾ ಆರ್., ಉದ್ಯಮಿಗಳಾದ ಎಂ.ಸುಧಾಕರ್ ಹೆಗ್ಡೆ ಮುಂಬೈ, ಪ್ರಭಾಕರ ಶೆಟ್ಟಿ, ಮುಂಬೈ ಹೈಕೋರ್ಟ್ ವಕೀಲ ಮಹೇಶ್ ಕೋಟ್ಯಾನ್, ಉದ್ಯಮಿ ಮಾನವ್ ಶಂಕರ್ ಜೋಷಿ, ಭಾರತ್ ಕೋ ಆಪರೇಟಿವ್ ಬ್ಯಾಂಕ್ ಕಾರ್ಯಾಧ್ಯಕ್ಷ ಸೂರ್ಯಕಾಂತ್ ಜೆ.ಸುವರ್ಣ, ಕೃಷ್ಣ ವೈ.ಶೆಟ್ಟಿ ಮುಂಬೈ, ಅಂತಾರಾಷ್ಟ್ರೀಯ ಸಮಿತಿ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ, ಡಾ.ಶಿವಾನಂದ್ ಶೆಟ್ಟಿ, ಒಮಾನ್ ಸಮಿತಿ ಅಧ್ಯಕ್ಷ ದಿವಾಕರ ಶೆಟ್ಟಿ ಮಸ್ಕತ್, ಪುಣೆ ಸಮಿತಿ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನಾ ಕುರ್ಕಿಲ್ ಬೆಟ್ಟು, ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿ ಅಧ್ಯಕ್ಷ ರವಿ ಸುಂದರ್ ಶೆಟ್ಟಿ, ಕೋಶಾಧಿಕಾರಿ ಎರ್ಮಾಳು ಚಂದ್ರಹಾಸ ಶೆಟ್ಟಿ ಪುಣೆ, ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷ ರಾಜಶೇಖರ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಕೋಶಾಧಿಕಾರಿ ಕೆ. ರವಿಕಿರಣ್, ಉಪಾಧ್ಯಕ್ಷರಾದ ಮಾಧವ ಆರ್.ಪಾಲನ್, ಮನೋಹರ್ ಶೆಟ್ಟಿ ಕಾಪು, ಗೌರವ ಸಲಹೆಗಾರ ನಡಿಕೆರೆ ರತ್ನಾಕರ ಶೆಟ್ಟಿ, ಆರ್ಥಿಕ ಸಮಿತಿ ಪ್ರಧಾನ ಸಂಚಾಲಕ ಉದಯ ಸುಂದರ ಶೆಟ್ಟಿ, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ಶೆಟ್ಟಿ ಬಾಲಾಜಿ ಉಪಸ್ಥಿತರಿದ್ದರು.
    ಪ್ರಧಾನ ಕಾರ್ಯಾಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಬೆಳಪು ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಕಾಪು ದಿವಾಕರ ಶೆಟ್ಟಿ ವಂದಿಸಿದರು. ಸತೀಶ್ ಶೆೆಟ್ಟಿ ಗುಡ್ಡೆಚ್ಚಿ ಕಾರ್ಯಕ್ರಮ ನಿರೂಪಿಸಿದರು.

    ಕಾರಣಿಕ ಹಾಗೂ ಪಾವಿತ್ರೃವಾಗಿರುವ ಮಾರಿಯಮ್ಮನ ಸನ್ನಿಧಿಯಲ್ಲಿ ಜೀರ್ಣೋದ್ಧಾರ ಸಮಿತಿ ಶ್ರಮದಿಂದ ಎಲ್ಲೆಡೆಯ ದಾನಿಗಳನ್ನು ಒಗ್ಗೂಡಿಸುವ ಕಾರ್ಯ ಬೇರೆಲ್ಲ ದೇವಸ್ಥಾನಗಳಲ್ಲಿ ಆಗದಂತಹ ರೀತಿಯಲ್ಲಿ ನಡೆದಿದೆ. ದೇವಿಯ ಅನುಗ್ರಹದಿಂದ ದಾನಿಗಳ ಸಹಕಾರದಿಂದ ಅಭೂತಪೂರ್ವವಾದ ದೇಗುಲ ನಿರ್ಮಾಣವಾಗಿದೆ.
    -ವಿನಯಕುಮಾರ್ ಸೊರಕೆ, ಮಾಜಿ ಸಚಿವ

    ಸಿನಿಮಾ

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_sticky', [[320, 50], [300, 50]], 'div-gpt-ad- 1719903699617-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_sticky --> <div id='div-gpt-ad-1719903699617-0' style='min-width: 300px; min-height: 50px;'> <script> googletag.cmd.push(function() { googletag.display('div-gpt-ad-1719903699617-0'); }); </script> </div>

    ಲೈಫ್‌ಸ್ಟೈಲ್

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_AP_300x250', [[300, 50], [250, 250], [300, 250], [200, 200]], 'div-gpt-ad-1719903811902-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_AP_300x250 --> <div id='div-gpt-ad-1719903811902-0' style='min-width: 200px; min-height: 50px;'> <script> googletag.cmd.push(function() { googletag.display('div-gpt-ad-1719903811902-0'); }); </script> </div>

    ಟೆಕ್ನಾಲಜಿ

    Latest Posts