More

    ಸ್ಥಳೀಯಾಡಳಿತ ಚುನಾವಣೆಯಲ್ಲಿ ಕಾಂಗ್ರೆಸ್ ಮೂಲೆಗುಂಪು : ಬಿ.ಎಸ್.ಯಡಿಯೂರಪ್ಪ ಭವಿಷ್ಯ

    ಸುಳ್ಯ: ಸದ್ಯದಲ್ಲೇ ನಡೆಯುವ ಸ್ಥಳೀಯಾಡಳಿತ ಚುನಾವಣೆಗಳಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಒಂದಾಗಿ ಮುನ್ನಡೆದರೆ ಕಾಂಗ್ರೆಸ್ಸನ್ನು ಜನ ತಿರಸ್ಕರಿಸುವುದು ನಿಶ್ಚಿತ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭವಿಷ್ಯ ನುಡಿದರು.

    ನಗರದ ಅಂಬಟೆಡ್ಕದಲ್ಲಿ ಬಿಜೆಪಿ ಮಂಡಲ ಸಮಿತಿಯ ನೂತನ ಕಚೇರಿ ಉದ್ಘಾಟಿಸಿ ಮಾತನಾಡಿದರು.

    ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿ, ಬಿಜೆಪಿಗೆ ಸುಳ್ಯದಲ್ಲಿ ಒಂದು ಸ್ವಂತ ಕಟ್ಟಡ ಆಗಬೇಕು ಎಂದು ಹಿಂದಿನ ಎಲ್ಲ ಅಧ್ಯಕ್ಷರು ಪ್ರಯತ್ನಿಸಿದ್ದರು ಎಂದರು.

    ಮಾಜಿ ಸಚಿವ ಎಸ್.ಅಂಗಾರ ಮಾತನಾಡಿ, ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಜನಪರ ಕೆಲಸ ಮಾಡಿದ್ದು ಸುಳ್ಯದ ಅಭಿವೃದ್ಧಿಗೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದರು.

    ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಸ್ವಾಗತಿಸಿದರು. ಬಿಜೆಪಿ ಮಂಡಲ ಪ್ರಭಾರಿ ರವೀಂದ್ರ ಶೆಟ್ಟಿ ಉಳಿದೊಟ್ಟು, ಬಿಜೆಪಿ ಮಂಡಲ ಸಮಿತಿ ಮಾಜಿ ಅಧ್ಯಕ್ಷ ಹಾಗೂ ಅಟಲ್‌ಜಿ ಸೇವಾ ಟ್ರಸ್ಟ್‌ನ ಅಧ್ಯಕ್ಷ ಹರೀಶ್ ಕಂಜಿಪಿಲಿ ಉಪಸ್ಥಿತರಿದ್ದರು.

    ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ವಿನಯಕುಮಾರ್ ಕಂದಡ್ಕ, ಪ್ರದೀಪ್ ರೈ ಮನವಳಿಕೆ ಕಾರ್ಯಕ್ರಮ ನಿರೂಪಿಸಿದರು.

    ಸ್ಥಳ ನೀಡಿದವರಿಗೆ ಸನ್ಮಾನ

    ಕಚೇರಿಗಾಗಿ ಸ್ಥಳ ನೀಡಿದ ಮಧುಸೂದನ ಕುಂಭಕ್ಕೋಡು ಹಾಗೂ ಲತಾ ಮಧುಸೂದನ್ ಹಾಗೂ ಕಚೇರಿಗೆ ಕೊಠಡಿ ನೀಡಿದ್ದ ಕೃಷ್ಣ ಕಾಮತ್ ಅವರನ್ನು ಸನ್ಮಾನಿಸಲಾಯಿತು.

    ಮುಂದೆ ನಡೆಯುವ ಜಿಪಂ, ತಾಪಂ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಒಟ್ಟಾಗಿ ಸ್ಪರ್ಧೆ ನಡೆಸಲು ನಿರ್ಧರಿಸಿದ್ದು ಉಭಯ ಪಕ್ಷದ ಕಾರ್ಯಕರ್ತರು ಹುಮ್ಮಸ್ಸಿನಿಂದ ಚುನಾವಣೆ ತಯಾರಿಗೆ ಧುಮುಕಬೇಕು. ಹಾಗಿದ್ದರೆ ಪ್ರಸ್ತುತ ದುರಾಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ನೆಲಕಚ್ಚಲಿದೆ. ತೈಲ ಬೆಲೆ ಏರಿಸಿ ಜನರನ್ನು ಸಂಕಷ್ಟಕ್ಕೆ ದೂಡಿರುವ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕ ಪಾಠ ಕಲಿಸಬೇಕು.

    – ಬಿ.ಎಸ್.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts