More

    ಶ್ರೀಎಡನೀರು ಮಠದಲ್ಲಿ ಗುರು ಭವನ ಉದ್ಘಾಟನೆ: ಸನಾತನ ಸಂತ ಸಮಾಗಮ ಕಾರ್ಯಕ್ರಮ : ಡಿಸಿಎಂ ಡಿ.ಕೆ.ಶಿವಕುಮಾರ್ ಉಪಸ್ಥಿತಿ

    ವಿಜಯವಾಣಿ ಸುದ್ದಿಜಾಲ ಕಾಸರಗೋಡು

    ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ಶ್ರೀ ಎಡನೀರು ಮಠದಲ್ಲಿ ಸಂಪಾಜೆ ಕೀಲಾರು ಶ್ರೀ ಗೋಪಾಲಕೃಷ್ಣಯ್ಯ ಪ್ರತಿಷ್ಠಾನ ಸೇವಾ ರೂಪದಲ್ಲಿ ಶ್ರೀದೇವರಿಗೆ ಸಮರ್ಪಿಸಿರುವ ‘ಗುರು ಭವನ’ದ ಉದ್ಘಾಟನಾ ಸಮಾರಂಭ ಜುಲೈ 13ರಂದು ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಮಾರ್ಗದರ್ಶನದಲ್ಲಿ ಜರುಗಲಿರುವುದು. ಬೆಳಗ್ಗೆ 9ರಿಂದ ರಾತ್ರಿ 9ರ ವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಮಾರಂಭ ನಡೆಯಲಿದೆ.

    ಬೆಳಗ್ಗೆ 9ಕ್ಕೆ ಗಣಪತಿ ಹವನ ಪೂರ್ಣಾಹುತಿ, 9.30ಕ್ಕೆ ಸನಾತನ ಸಂತ ಸಮಾಗಮ ನಡೆಯುವುದು. ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ಶ್ರೀಪಾದರು, ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು, ಅದಮಾರು ಮಠದ ಶ್ರೀ ಈಶಪ್ರಿಯ ತೀರ್ಥ ಪಾದರು, ಚಿತ್ರಾಪುರ ಮಠದ ಶ್ರೀ ವಿದ್ಯೇಂದ್ರತೀರ್ಥ ಶ್ರೀಪಾದರು, ಉಪ್ಪಳ ಕೊಂಡೆವೂರು ಮಠದ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿ, ಮೂಡುಬಿದಿರೆ ಜೈನಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಸ್ವಾಮೀಜಿ, ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ, ಮಾಣಿಲ ಶ್ರೀಧಾಮದ ಶ್ರೀಮೋಹನದಾಸ ಸ್ವಾಮೀಜಿ, ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ, ಕಣಿಯೂರು ಮಠದ ಶ್ರೀ ಮಹಾಬಲೇಶ್ವರ ಸ್ವಾಮೀಜಿ ಸಂತ ಸಮಾಗಮದಲ್ಲಿ ಪಾಲ್ಗೊಳ್ಳುವರು.

    ಡಾ.ವೀರೇಂದ್ರ ಹೆಗ್ಗಡೆ ಅವರಿಂದ ಲೋಕಾರ್ಪಣೆ

    ಕೇಂದ್ರ ಪಶುಸಂಗೋಪನಾ ಮತ್ತು ಮೀನುಗಾರಿಕಾ ಸಚಿವ ಜಾರ್ಜ್ ಕುರಿಯನ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಅಖಿಲಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಆಶಯ ಭಾಷಣ ಮಾಡುವರು. ಮಧ್ಯಾಹ್ನ 1.30ರಿಂದ ಯಕ್ಷಗಾನ ಪ್ರದರ್ಶನ ನಡೆಯುವುದು. ಸಂಜೆ 4ಕ್ಕೆ ನಡೆಯುವ ಸಮಾರಂಭದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ.ವೀರೇಂದ್ರ ಹೆಗ್ಗಡೆ ಗುರುಭವನದ ಉದ್ಘಾಟನೆ ನೆರವೇರಿಸುವರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆ ವಹಿಸುವರು. ಸಂಸದರಾದ ರಾಜ್‌ಮೋಹನ್ ಉಣ್ಣಿತ್ತಾನ್, ಕ್ಯಾಪ್ಟನ್ ಬ್ರಿಜೇಶ್ ಚೌಟ ಉಪಸ್ಥಿತರಿರುವರು. ಸಂಜೆ 6ರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ನಡೆಯುವುದು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts