More

    ಶೈಕ್ಷಣಿಕ ಕೊಡುಗೆ ವಿದ್ಯಾರ್ಥಿಗಳಿಗೆ ಸಹಕಾರಿ: ಶಾಸಕ ಹರೀಶ್ ಪೂಂಜ ಹೇಳಿಕೆ

    ಬೆಳ್ತಂಗಡಿ: ರೋಟರಿ ಕ್ಲಬ್ ಆಫ್ ಬೆಂಗಳೂರು ಮತ್ತು ಕೊಲೀನ್ಸ್ ಏರೋಸ್ಪೇಸ್ ಬೆಂಗಳೂರು ಸಹಭಾಗಿತ್ವದಲ್ಲಿ ಸುಮಾರು 40 ಲಕ್ಷ ರೂ. ಅನುದಾನದಲ್ಲಿ ನಿರ್ಮಾಣಗೊಂಡ ಅಳದಂಗಡಿ ಸರ್ಕಾರಿ ಪದವಿಪೂರ್ವ ಕಾಲೇಜಿನ ನೂತನ ವಿಜ್ಞಾನ ಪ್ರಯೋಗಾಲಯ ಕೊಠಡಿ ಮತ್ತು ಇತರ ಮೂಲಸೌಕರ್ಯಗಳ ಉದ್ಘಾಟನಾ ಸಮಾರಂಭ ಕಾಲೇಜಿನ ಸಭಾಭವನದಲ್ಲಿ ನಡೆಯಿತು.

    ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಿ ಉದ್ಘಾಟಿಸಿ ಮಾತನಾಡಿ, ಕೋಲೀನ್ಸ್ ಏರೋಸ್ಪೇಸ್ ಸಿಎಸ್‌ಆರ್ ನಿಧಿಯಿಂದ ನಿರ್ಮಾಣವಾದ ಈ ಪ್ರಾಜೆಕ್ಟ್ ಅಳದಂಗಡಿ ಕಾಲೇಜಿನ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಸಹಕಾರಿಯಾಗಿದೆ. ಈ ನಿಟ್ಟಿನಲ್ಲಿ ಕ್ಷೇತ್ರದ ಶಾಸಕನಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

    ಕಂಪನಿಯ ಸಿಎಸ್‌ಆರ್ ಲೀಡ್ ಅಮಿತ್ ಸಾವರ್ಕರ್ ವಿಜ್ಞಾನ ಕೊಠಡಿ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ನಿರ್ದಿಷ್ಟ ಗುರಿ ಇಟ್ಟುಕೊಂಡು ಕಲಿಕೆಯಲ್ಲಿ ಸಾಧನೆ ಮಾಡಿ ಸಮಾಜದಲ್ಲಿ ಉತ್ತಮ ಜವಾಬ್ದಾರಿಯುತ ವ್ಯಕ್ತಿಗಳಾಬೇಕು ಎಂದರು.

    ಕಂಪನಿಯ ಎಚ್‌ಆರ್ ಸೀನಿಯರ್ ಮೆನೇಜರ್ ನವೀನ್ ಶೆಟ್ಟಿ, ರೋಟರಿ ಕ್ಲಬ್ ಆಫ್ ಬೆಂಗಳೂರಿನ ಮಂಜುನಾಥ್ ಆನೇಕರ್, ರಂಗರಾವ್, ಛಲಮಣಿ, ಉಪ ಕಾರ್ಮಿಕ ಆಯುಕ್ತ ಗುರುಪ್ರಸಾದ್ ಎಚ್.ಎಲ್, ಸಿಬಿಸಿ ಉಪಾಧ್ಯಕ್ಷ ಸದಾನಂದ ಪೂಜಾರಿ ಉಂಗಿಲ ಬೈಲು, ಮುಖ್ಯಶಿಕ್ಷಕಿ ಶಾಂತಿಮರಿಯ ಉಪಸ್ಥಿತರಿದ್ದರು.

    ಕೊಲೀನ್ ಏರೋಸ್ಪೇಸ್ ಮತ್ತು ರೋಟರಿ ಕ್ಲಬ್ ಅಫ್ ಬೆಂಗಳೂರು ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲ ಸನ್ನಿ ಕೆ.ಎಂ ಸ್ವಾಗತಿಸಿದರು. ಜೀವಶಾಸ್ತ್ರ ಉಪನ್ಯಾಸಕ ಪ್ರಶಾಂತ್ ಕುಮಾರ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts