More

    ಕೀಟ ಚಿಕ್ಕದು ಕಾಟ ದೊಡ್ಡದು

    ಅರಕೇರಾ: ಡೆಂಘೆ ವೈರಸ್‌ನಿಂದ ಹರಡುವ ಕಾಯಿಲೆಯಾಗಿದ್ದು, ಈಡಿಸ್ ಈಜಿಪ್ಟಿ ಸೊಳ್ಳೆ ಕಚ್ಚುವುದರಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ ಎಂದು ಆರೋಗ್ಯ ನಿರೀಕ್ಷಣಾಧಿಕಾರಿ ರಾಚನಗೌಡ ಪಾಟೀಲ್ ಹೇಳಿದರು.

    ಗಲಗ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಬಿ.ಗಣೇಕಲ್ ಗ್ರಾಮದಲ್ಲಿ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆಯಿಂದ ಹಮ್ಮಿಕೊಂಡಿದ್ದ ಡೆಂಘೆ ಹಾಗೂ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮದಲ್ಲಿ ಮಂಗಳವಾರ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಜನರನ್ನು ಡೆಂಘೆ ಮಾರಕವಾಗಿ ಕಾಡುತ್ತಿದ್ದು, ಇದರ ನಿಯಂತ್ರಣ ಪ್ರತಿಯೊಬ್ಬರ ಕರ್ತವ್ಯವಾಗಿದೆ. ಸೊಳ್ಳಗಳ ನಿಯಂತ್ರಣದಿಂದ ಸಾಂಕ್ರಾಮಿಕ ರೋಗಗಳಾದ ಡೆಂಘೆ, ಮಲೇರಿಯಾ, ಚಿಕೂನ್‌ಗುನ್ಯಾ ತಡೆಯಬಹುದು ಎಂದರು.

    ಮುಂಗಾರು ಸಂದರ್ಭದಲ್ಲಿ ಡೆಂಘೆ, ಮಲೇರಿಯಾ ಬಹಳ ವೇಗವಾಗಿ ಹರಡುತ್ತದೆ. ಸಾರ್ವಜನಿಕರು ಸುತ್ತಮುತ್ತಲ ಪರಿಸರದಲ್ಲಿ ನೀರು ನಿಲ್ಲದಂತೆ ಕ್ರಮ ವಹಿಸಬೇಕು. ಸ್ವಚ್ಛತೆ ಕಾಪಾಡಿಕೊಳ್ಳುವ ಮೂಲಕ ಮಾರಕ ರೋಗ ಹರಡದಂತೆ ಮುಂಜಾಗೃತೆ ವಹಿಸಬೇಕು ಎಂದರು.

    ಸಿಎಚ್‌ಒ ಸುಮಿನಾ ಸುಲ್ತಾನ್ ಮಾತನಾಡಿ, ಯಾವುದೇ ಜ್ವರ ಬಂದರೂ ಮೊದಲು ರಕ್ತ ಪರೀಕ್ಷೆ ಮಾಡಿಸಿಕೊಳ್ಳಬೇಕು. ಮಲಗುವಾಗ ಸೊಳ್ಳೆ ಪರದೆ ಉಪಯೋಗಿಸಬೇಕು. ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣುಗಳ ಭಾಗದಲ್ಲಿ ತೀವ್ರ ನೋವು, ಕೀಲು ನೋವು, ಚರ್ಮದ ಮೇಲೆ ಅಲ್ಲಲ್ಲಿ ರಕ್ತಸ್ರಾವದ ಗುರುತುಗಳು ಡೆಂೆ ಲಕ್ಷಣಗಳಾಗಿದ್ದು, ಕೂಡಲೇ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಗ್ರಾಪಂ ಸದಸ್ಯರು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಪಂ ಸಿಬ್ಬಂದಿ ಇತರರಿದ್ದರು.

    See also  ತ್ರಿದೋಷ ನಿವಾರಕ ಅಮೃತಬಳ್ಳಿ; ಇದರಿಂದ ಎಷ್ಟೆಲ್ಲ ಉಪಯೋಗವಿದೆ ಗೊತ್ತಾ...

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts