More

    ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ; ಜೆಡಿಎಸ್​ MLC ಸೂರಜ್​ ರೇವಣ್ಣ ಅರೆಸ್ಟ್

    ಹಾಸನ: ಯುವಕನೋರ್ವನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್​ ಡಾ. ಸೂರಜ್​ ರೇವಣ್ಣ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಂತ್ರಸ್ತ ನೀಡಿದ ದೂರನ್ನು ಆಧರಿಸಿ 377 (ಅಸ್ವಾಭಾವಿಕ ಅಪರಾಧ), 342 (ತಪ್ಪಾದ ಬಂಧನಕ್ಕೆ ಶಿಕ್ಷೆ) ಹಾಗೂ 506 (ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಸೂರಜ್​ರನ್ನು ಬಂಧಿಸಿದ್ದಾರೆ.

    ಸೂರಜ್​ ರೇವಣ್ಣ ಅವರು ತಮ್ಮ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಅರಕಲಗೂಡು ಮೂಲದ ಜೆಡಿಎಸ್​​ ಕಾರ್ಯಕರ್ತರೊಬ್ಬರು ಶನಿವಾರ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರಿನನ್ವಯ ಡಾ. ಸೂರಜ್​ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ.

    ಸಂತ್ರಸ್ತ ದೂರು ದಾಖಲಿಸಿದ ಬಳಿಕ ವಿಚಾರಣೆಗೆಂದು ಹಾಸನದ CEN ಪೊಲೀಸ್​ ಠಾಣೆಗೆ ಆಗಮಿಸಿದ ಸೂರಜ್​ರನ್ನು ವಿಚಾರಣೆಗೆ ಒಳಪಡಿಸಿದ ಅಧಿಕಾರಿಗಳು ಬಳಿಕ ಬಂಧಿಸಿದ್ದಾರೆ. ಇಂದು ಮಧ್ಯಾಹ್ನ ಸೂರಜ್​ರನ್ನು ನ್ಯಾಯಧೀಶರ ಮುಂದೆ ಹಾಜರುಪಡಿಸಲಾಗುವುದು. ಇತ್ತ ಸಂತ್ರಸ್ತನನ್ನು ಬೆಂಗಳೂರು ಬೌರಿಂಗ್​ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಪೊಲೀಸರು ವರದಿಗಾಗಿ ಕಾಯುತ್ತಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts