More

    ಜೆಡಿಎಸ್ ಪಕ್ಷದ ಅಧ್ಯಕ್ಷ ಸ್ಥಾನ ತೊರೆಯಲು ಎಚ್ಡಿಕೆ ಚಿಂತನೆ?

    ಬೆಂಗಳೂರು:
    ಬದಲಾಗಿರುವ ರಾಜಕೀಯ ಸನ್ನಿವೇಶದಲ್ಲಿ ಜೆಡಿಎಸ್ ಅಧ್ಯಕ್ಷ ಸ್ಥಾನವನ್ನು ತೊರೆಯಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಚಿಂತನೆ ನಡೆಸಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.
    ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳು ಜೆಡಿಎಸ್ ಪಾಲಿಗೆ ಮಹತ್ವದ ಘಟ್ಟವಾಗಿದ್ದವು. ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‌ಗೆ ಆಗಿದ್ದ ಹಿನ್ನೆಡೆಯನ್ನು ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಮೂಲಕ ಉತ್ತಮ ಲಿತಾಂಶವನ್ನು ರಾಜ್ಯದಲ್ಲಿ ಪಡೆದಿರುವುದು ಜೆಡಿಎಸ್‌ಗೆ ಸಮಾಧಾನ ತಂದಿದೆ. ಆಡಳಿತರೂಢ ಕಾಂಗ್ರೆಸ್ ಪಕ್ಷ ಹೆಚ್ಚು ಸ್ಥಾನ ಪಡೆಯದಂತೆ ಚುನಾವಣೆಯಲ್ಲಿ ಕಟ್ಟಿ ಹಾಕಬೇಕು ಎನ್ನುವ ತಂತ್ರವೂ ಲಿಸಿದೆ. ಅಷ್ಟೆ ಅಲ್ಲ, ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಮಂತ್ರಿಯಾಗುವ ಮೂಲಕ ಜೆಡಿಎಸ್‌ಗೆ ಹೊಸ ಚೈತನ್ಯವೂ ಬಂದಿದೆ. ಕೇಂದ್ರದಲ್ಲಿ ಮಹತ್ವದ ಖಾತೆಯನ್ನು ನಿಭಾಹಿಸಬೇಕಾದ ಗುರುತರ ಹೊಣೆಗಾರಿಕೆಯೂ ಇರುವುದರಿಂದ ರಾಜ್ಯದಲ್ಲಿ ಪಕ್ಷ ಸಂಘಟನೆ ಜವಬ್ದಾರಿಯನ್ನು ಮತ್ತೊಬ್ಬರು ನಾಯಕರಿಗೆ ವಹಿಸುವುದು ಸೂಕ್ತ ಎನ್ನುವ ಇರಾದೆಯನ್ನು ಕುಮಾರಸ್ವಾಮಿ ಅವರು ವ್ಯಕ್ತಪಡಿಸಿದ್ದಾರೆ.
    ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾಗಿ ಸಮರ್ಥವಾಗಿ ಕಾರ್ಯ ನಿರ್ವಹಣೆ ಮಾಡುತ್ತಿರುವ ಜಿ.ಟಿ.ದೇವೇಗೌಡರಿಗೆ ಪಕ್ಷದ ಅಧ್ಯಕ್ಷ ಸ್ಥಾನ ವಹಿಸಿಕೊಡುವುದು ಸೂಕ್ತ ಎನ್ನುವ ಅಭಿಪ್ರಾಯಗಳು ಜೆಡಿಎಸ್‌ನಲ್ಲಿ ವ್ಯಕ್ತವಾಗಿದೆ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಕೂಡ ಇದೇ ಅಭಿಪ್ರಾಯವನ್ನು ಹೊಂದಿದ್ದಾರೆ ಎಂದು ಆಪ್ತ ಮೂಲಗಳು ಖಚಿತಪಡಿಸಿವೆ.
    ಮುಂಬರಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷವನ್ನು ಸಮರ್ಥವಾಗಿ ಮುನ್ನೆಡೆಸಿ ನಿರ್ವಹಣೆ ಮಾಡಬೇಕಾಗಿರುವುದರಿಂದ ಕುಮಾರಸ್ವಾಮಿ ಅವರು ಅನುಭವ ಹೊಂದಿರುವ ಹಿರಿಯರಿಗೆ ಜವಬ್ದಾರಿ ವಹಿಸುವ ನಿರ್ಧಾರಕ್ಕೆ ಬಂದಿದ್ದಾರೆ ಎಂದು ತಿಳಿದುಬಂದಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts