More

    ಹಣೆಗೆ ಬಿಂದಿ ಹಚ್ಚಿದ್ದಕ್ಕೆ ಶಾಲೆಯಲ್ಲಿ ಶಿಕ್ಷಕನಿಂದ ಥಳಿತ: ಮನೆಗೆ ಬಂದು ಪ್ರಾಣ ಬಿಟ್ಟ ವಿದ್ಯಾರ್ಥಿನಿ

    ಧನ್‌ಬಾದ್: ಹಣೆಗೆ ಬಿಂದಿ ಹಚ್ಚಿದ್ದಕ್ಕೆ ಶಿಕ್ಷಕಿಯೊಬ್ಬಳು ಥಳಿಸಿ, ಚಿತ್ರಹಿಂಸೆ ನೀಡಿದ ಕಾರಣಕ್ಕೆ ಜಾರ್ಖಂಡ್‌ನಲ್ಲಿ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧನ್‌ಬಾದ್ ಜಿಲ್ಲೆಯ ಶಾಲೆಯೊಂದರಲ್ಲಿ ನಡೆದಿದೆ.

    ಇದನ್ನೂ ಓದಿ: VIDEO| ತುಂಡು ತುಂಡಾಗಿ ಕತ್ತರಿಸಿದ ಮಹಿಳೆಯ ಮೃತದೇಹ ಪತ್ತೆ

    ಟೆತುಲ್ಮರಿಯ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಮೃತ ವಿದ್ಯಾರ್ಥಿನಿಯು 10ನೇ ತರಗತಿಯಲ್ಲಿ ಓದುತ್ತಿದ್ದಳು. ಹಣೆಯ ಮೇಲೆ ಬಿಂದಿ ಇಟ್ಟುಕೊಂಡು ಶಾಲೆಗೆ ಬಂದಿದ್ದಕ್ಕೆ ಶಿಕ್ಷಕನೊಬ್ಬ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡಿದ ಕಾರಣಕ್ಕೆ 10ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಳು.ಈ ಕುರಿತು ವಿದ್ಯಾರ್ಥಿನಿಯು ಆತ್ಮಹತ್ಯೆ ಪತ್ರಲ್ಲಿ ಉಲ್ಲೇಖಿಸಿದ್ದು, ಶಿಕ್ಷಕನು ತನಗೆ ಚಿತ್ರಹಿಂಸೆ ನೀಡಿದ್ದಾರೆ ಎಂದು ಆರೋಪಿಸಿದ್ದಾಳೆ. ಮಂಗಳವಾರ ಮೃತ ಬಾಲಕಿಯ ಪೋಷಕರು ಹಾಗೂ ಸ್ಥಳೀಯರು ಶಾಲಾ ಆಡಳಿತ ಮಂಡಳಿ ವಿರುದ್ಧ ಪ್ರತಿಭಟನೆ ನಡೆಸಿದ ನಂತರ ಘಟನೆಯು ಬೆಳಕಿಗೆ ಬಂದಿದೆ.

    ಇನ್ನು, ಪ್ರತಿಭಟನೆ ನಂತರ ಪೊಲೀಸರು ಆರೋಪಿ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದು, ಇದು ಗಂಭೀರ ವಿಷಯವಾಗಿದೆ. ಶಾಲೆಯು ಸಿಬಿಎಸ್‌ಇ ಮಂಡಳಿಗೆ ವ್ಯಾಪ್ತಿಗೆ ಒಳಪಟ್ಟಿಲ್ಲ. ತಾವು ಜಿಲ್ಲಾ ಶಿಕ್ಷಣ ಅಧಿಕಾರಿಗೆ ಈ ಬಗ್ಗೆ ತಿಳಿಸಿದ್ದು, ಈಗಾಗಲೇ ಸಂತ್ರಸ್ತೆಯ ಕುಟುಂಬವನ್ನು ಭೇಟಿ ಮಾಡಿದ್ದೇನೆ ಎಂದು ಎಂದು ಜಾರ್ಖಂಡ್‌ನ ಧನ್‌ಬಾದ್‌ನ ಮಕ್ಕಳ ಕಲ್ಯಾಣ ಸಮಿತಿ (ಸಿಡಬ್ಲ್ಯೂಸಿ) ಅಧ್ಯಕ್ಷ ಉತ್ತಮ್ ಮುಖರ್ಜಿ ಹೇಳಿದ್ದಾರೆ.

    ಇದನ್ನೂ ಓದಿ: ರಾಜ್ಯದಲ್ಲಿ ಟಾರ್ಗೆಟ್ ಕಿಲ್ಲಿಂಗ್, ಸರ್ಕಾರದ ನಡೆಯೇ ಅನುಮಾನಾಸ್ಪದ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕಿಡಿ

    ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ (ಎನ್‌ಸಿಪಿಸಿಆರ್‌) ಅಧ್ಯಕ್ಷ ಪ್ರಿಯಾಂಕ್ ಕಾನೂಂಗೊ ವಿದ್ಯಾರ್ಥಿನಿಯು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಮಂಗಳವಾರ ಟ್ವೀಟ್‌ ಮಾಡಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.(ಏಜೆನ್ಸೀಸ್​​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts