More

    ಕನ್ನಡಿಗರಿಗೆ ಉದ್ಯೋಗಕ್ಕಾಗಿ ಕರವೇ ಪ್ರತಿಭಟನೆ

    ಮಡಿಕೇರಿ:

    ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಕಡ್ಡಾಯ ಉದ್ಯೋಗಕ್ಕಾಗಿ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಮಡಿಕೇರಿಯಲ್ಲೂ ಸೋಮವಾರ ಪ್ರತಿಭಟನೆ ನಡೆಸಲಾಯಿತು.

    ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಕರವೇ ಕಾರ್ಯಕರ್ತರು ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವ ಸಂಬAಧ ಸಮಗ್ರ ಕಾಯ್ದೆ ರೂಪಿಸಬೇಕು. ಇತ್ತೀಚಿನ ದಿನಗಳಲ್ಲಿ ಇತರೆ ರಾಜ್ಯಗಳಿಂದ ಉದ್ಯೋಗ ಅರಸಿ ಬೆಂಗಳೂರಿನತ್ತ ವಲಸೆ ಬರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಖಾಸಗಿ ವಲಯಗಳಲ್ಲಿ ಕನ್ನಡೇತರರಿಗೆ ಹೆಚ್ಚಿನ ಉದ್ಯೋಗ ಅವಕಾಶ ಸಿಗುತ್ತಿದೆ. ಇದರಿಂದ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ. ಹಾಗಾಗಿ ಖಾಸಗಿ ವಲಯದಲ್ಲಿ ಸಿ ಮತ್ತು ಡಿ ಗ್ರೂಪ್‌ನಲ್ಲಿ ಕನ್ನಡಿಗರಿಗೆ ಶೇ. ೧೦೦ ರಷ್ಟು ಮೀಸಲಾತಿ ನೀಡಬೇಕು. ಇತರ ಗ್ರೂಪ್‌ಗಳಲ್ಲಿ ಶೇ. ೮೦ ರಷ್ಟು ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿದರು.

    ಈ ಸಂದರ್ಭ ಮಾತನಾಡಿದ ಕರವೇ ಕೊಡಗು ಜಿಲ್ಲಾಧ್ಯಕ್ಷ ದೀಪಕ್, ರಾಜ್ಯದಲ್ಲಿ ವಲಸಿಗರ ಸಂಖ್ಯೆ ಹೆಚ್ಚುತ್ತಿದೆ. ಇದರಿಂದ ಕನ್ನಡಿಗರಿಗೆ ಉದ್ಯೋಗವಿಲ್ಲದಂತಾಗಿದೆ. ಇದು ಹೀಗೆಯೇ ಮುಂದುವರೆದಲ್ಲಿ ಮುಂದೊAದು ದಿನ ತಮ್ಮ ನೆಲದಲ್ಲಿ ಕನ್ನಡಿಗರೇ ಅತಂತ್ರರಾಗಿ ನರಕಯಾತನೆ ಅನುಭವಿಸಬೇಕಾದ ಸ್ಥಿತಿ ಬಂದೊದಗಲಿದೆ. ಕೈಗಾರಿಕಾ ಉದ್ಯೋಗ ಸ್ಥಾಯಿ ಆದೇಶ ಕಾಯ್ದೆ ೧೯೪೬ರ ಅನ್ವಯ ರಾಜ್ಯ ಸರ್ಕಾರ ಬಲಿಷ್ಟವಾದ ಕಾನೂನು ರೂಪಿಸಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಒದಗಿಸಬೇಕು. ಹದಿನೈದು ವರ್ಷ ರಾಜ್ಯದಲ್ಲಿದ್ದವರಿಗೆ ಕನ್ನಡಿಗರೆಂದು ಪರಿಗಣಿಸುವ ನಿಯಮವಿದ್ದು, ಅಂತವರಿಗೆ ಕನ್ನಡ ಪರೀಕ್ಷೆ ನಡೆಸಿ ಉತ್ತೀರ್ಣರಾದರೆ ಮಾತ್ರ ಕನ್ನಡಿಗರೆಂದು ಪರಿಗಣಿಸಬೇಕು. ನಿಯಮ ಪಾಲಿಸದ ಸಂಸ್ಥೆಗಳ ಲೈಸೆನ್ಸ್ ರದ್ದು ಮಾಡಬೇಕು. ಸರ್ಕಾರ ನೀಡಿರುವ ಭೂಮಿ, ಸವಲತ್ತುಗಳನ್ನ ವಾಪಸ್ ಪಡೆದು ಕ್ರಿಮಿನಲ್ ಮೊಕದ್ದಮೆ ಹಾಕಬೇಕು.

    ರಾಜ್ಯ ಸರ್ಕಾರಿ ಸಂಸ್ಥೆ ಮತ್ತು ಸಾರ್ವಜನಿಕ ವಲಯದಲ್ಲಿ ಶೇ. ೧೦೦ರಷ್ಟು ಕನ್ನಡಿಗರಿಗೆ ಮೀಸಲಾತಿ ಕೊಡಬೇಕು. ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಗ್ರೂಪ್ ಸಿ ಹಾಗೂ ಡಿ ಹುದ್ದೆಗಳಲ್ಲಿ ಶೇ ೧೦೦ ಕನ್ನಡಿಗರಿಗೆ ಮೀಸಲಾತಿ ನೀಡಬೇಕು. ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಗ್ರೂಪ್ ಸಿ, ಡಿ ಹೊರತಾದ ಉಳಿದ ಉದ್ಯೋಗದಲ್ಲಿ ಶೇ ೯೦ ಮೀಸಲಾತಿ ನೀಡಬೇಕು. ಕನ್ನಡಿಗರಿಗೆ ಮೀಸಲಾತಿ ಕಲ್ಪಿಸಲು ವಿಫಲವಾಗುವ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಈ ಅಂಶವನ್ನ ಉದ್ದೇಶಿತ ಕಾನೂನಿನಲ್ಲಿ ಸೇರಿಸಬೇಕು. ರಾಜ್ಯ ಸರ್ಕಾರ ರೂಪಿಸುವ ಕಾನೂನು ಜಾರಿ ಮಾಡಲು ಕನ್ನಡ ಪ್ರಾಧಿಕಾರಕ್ಕೆ ಅಧಿಕಾರ ನೀಡಬೇಕು ಎಂದು ಒತ್ತಾಯಿಸಿದರು.

    ನಂತರ ಈ ಬೇಡಿಕೆಗಳ ಈಡೇರಿಕೆಗಾಗಿ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts