More

    ಕಾಂಗ್ರೆಸ್‌ನಿಂದ ಜನರನ್ನು ದೋಚುವ ಕಾರ್ಯ : ನವೀನ್ ನಾಯಕ್

    ವಿಜಯವಾಣಿ ಸುದ್ದಿಜಾಲ ಕಾರ್ಕಳ

    ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಜನರನ್ನು ನಿರಂತರ ದೋಚುತ್ತಿದೆ. ಡೀಸೆಲ್ ಹಾಗೂ ಪೆಟ್ರೋಲ್ ದರ ಏರಿಸಿ ಜನತೆಗೆ ದೊಡ್ಡ ಹೊಡೆತ ನೀಡಿದೆ. ಪಂಚಾಯಿತಿಗಳಿಗೆ ಅನುದಾನ ನೀಡದೆ ಇವತ್ತು ಹಳ್ಳಿಗಳಲ್ಲಿ ಅಭಿವೃದ್ಧಿ ಕೆಲಸ ಆಗುತ್ತಿಲ್ಲ. ರಾಜ್ಯದಲ್ಲಿ ಯಾವುದೇ ಶಾಸಕರೂ ಅಭಿವೃದ್ಧಿ ಕಾರ್ಯಕ್ಕೆ ಗುದ್ದಲಿ ಪೂಜೆ ನೆರವೇರಿಸಿಲ್ಲ ಎಂದು ಕಾರ್ಕಳ ಬಿಜೆಪಿ ಮಂಡಲ ಅಧ್ಯಕ್ಷ ನವೀನ್ ನಾಯಕ್ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿ ವಿರೋಧಿಸಿ ಬಿಜೆಪಿ ಕಾರ್ಕಳ ವತಿಯಿಂದ ಬಸ್ ನಿಲ್ದಾಣದಲ್ಲಿ ಶುಕ್ರವಾರ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.

    ಬಿಜೆಪಿ ವಕ್ತಾರ ಸತೀಶ್ ಶೆಟ್ಟಿ ಮುಟ್ಲುಪಾಡಿ, ಬಿಜೆಪಿ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ್ ಕುಮಾರ್ ಶೆಟ್ಟಿ, ಗೇರು ನಿಗಮದ ಮಾಜಿ ಅಧ್ಯಕ್ಷ ಮಣಿರಾಜ ಶೆಟ್ಟಿ, ಬಿಜೆಪಿ ಹಿರಿಯ ಮುಖಂಡ ಕೆ.ಪಿ ಶೆಣೈ ಮಾತನಾಡಿದರು. ಜಿಲ್ಲಾ ಪದಾಧಿಕಾರಿಗಳಾದ ಉದಯ್ ಎಸ್.ಕೋಟ್ಯಾನ್, ಜಯರಾಂ ಸಾಲಿಯಾನ್, ಗಿರಿಧರ್ ನಾಯಕ್, ನಿತ್ಯಾನಂದ ಪೈ, ಹರೀಶ್ ನಾಯಕ್, ಪಕ್ಷದ ವಿವಿಧ ಪದಾಧಿಕಾರಿಗಳು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

    ರಸ್ತೆ ತಡೆದು ಪ್ರತಿಭನೆ

    ಮಾಜಿ ಕೌನ್ಸಿಲರ್ ಪ್ರಕಾಶ್ ರಾವ್ ತಳ್ಳುಗಾಡಿಗೆ ಬ್ಯಾನರ್ ಕಟ್ಟಿ ಪ್ರತಿಭಟಿಸಿದರೆ, ಹೆಬ್ರಿ ಬಿಜೆಪಿ ಪಕ್ಷದ ಪದಾಧಿಕಾರಿಗಳು ಲಾರಿಗೆ ಹಗ್ಗಕಟ್ಟಿ ಎಳೆದು ಪ್ರತಿಭಟನೆ ನಡೆಸಿದರು. ದ್ವಿಚಕ್ರ ವಾಹನವನ್ನು ತಳ್ಳುತ್ತ ಅನಂತಶಯನ ವೃತ್ತದಿಂದ ಬಸ್ ನಿಲ್ದಾಣದವರೆಗೆ ಪ್ರತಿಭಟನಾ ಮೆರವಣಿಗೆಯಲ್ಲಿ ಸಾಗಿದರು. ಮಹಿಳೆಯರು ಚೊಂಬು ಹಾಗೂ ತೆಂಗಿನಚಿಪ್ಪು ಹಿಡಿದು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕೆಲಹೊತ್ತು ರಸ್ತೆ ತಡೆದು ಪ್ರತಿಭಟಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts