More

    ಚಿಕನ್​​, ಫಿಶ್​​ ಕಬಾಬ್​ನಲ್ಲಿ ಕೃತಕ ಬಣ್ಣ ಬಳಕೆಗೆ ನಿಷೇಧ; ರಾಜ್ಯ ಸರ್ಕಾರದಿಂದ ಆದೇಶ

    ಬೆಂಗಳೂರು: ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಕಬಾಬ್‌ಗಳು ಗುಣಮಟ್ಟ ಪರೀಕ್ಷೆ ಆರೋಗ್ಯ ಇಲಾಖೆ ವರದಿ ಬಂದ ನಂತರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಫಿಶ್​, ಚಿಕನ್ ಕಬಾಬ್​ ಮೇಲೆ ಕೃತಕ ಬಣ್ಣ ಬಳಸುವುದನ್ನು ನಿಷೇಧಿಸಿದೆ.

    ಇದನ್ನು ಓದಿ: ಮೋದಿ 3.0 ಸರ್ಕಾರದಲ್ಲಿ ಜೆ.ಪಿ ನಡ್ಡಾ ಹೆಗಲಿಗೆ ಮತ್ತೊಂದು ದೊಡ್ಡ ಜವಾಬ್ದಾರಿ! ಏನದು ಗೊತ್ತಾ?

    ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ 39 ಕಬಾಬ್‌ಗಳ ಮಾದರಿಗಳನ್ನು ಸಂಗ್ರಹಿಸಿ ನಡೆಸಿದ ಪರೀಕ್ಷೆಯಲ್ಲಿ 08 ಕಬಾಬ್‌ನ ಮಾದರಿಗಳು ಕೃತಕ ಬಣ್ಣದಿಂದ (ಸನ್‌ಸೆಟ್ ಯೆಲ್ಲೋ -07 ಮಾದರಿಗಳು ಹಾಗೂ ಸನ್‌ಸೆಟ್ ಯೆಲ್ಲೋ ಮತ್ತು ಕಾರ್ಮೋನ್ ಹೊಂದಿರುವ ಮಾದರಿಗಳು 01) ಕೂಡಿರುವುದು ಕಂಡು ಬಂದಿದೆ. ಇದರಿಂದ ವೆಜ್​​, ಚಿಕನ್​, ಫಿಶ್​​ ಕಬಾಬ್​ಗಳಲ್ಲಿ ಕೃತಕ ಬಣ್ಣ ಬಳಸುವುದನ್ನು ನಿಷೇಧಿಸುವಂತೆ ಆದೇಶ ಹೊರಡಿಸಿದೆ.

    The Food Safety and Standards (Food Products Standards and Food Additives) Regulations, 2011 ರ ನಿಯಮ 16.0ರನ್ವಯ ಕಬಾಬ್‌ನ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸುವುದಕ್ಕೆ ಅವಕಾಶವಿಲ್ಲ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮ 30(2)(ಎ)ರನ್ವಯ ವೆಜ್/ಚಿಕನ್/ಫಿಶ್ ಇತರೆ ಕಬಾಬ್‌ಗಳ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸುವುದನ್ನು ನಿರ್ಬಂಧಿಸಿದೆ.

    ಯಾರಾದರೂ ಕಬಾಬ್​ನಲ್ಲಿ ಕೃತಕ ಬಣ್ಣ ಬಳಸಿ ನಿಯಮ ಉಲ್ಲಂಘಿಸಿದರೆ ತಯಾರಕರ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮ 59ರಡಿ 7 ವರ್ಷಗಳಿಂದ ಜೀವಾವಧಿ ಅವಧಿಯವರೆಗೆ ಜೈಲು ಶಿಕ್ಷೆ ಮತ್ತು 10 ಲಕ್ಷ ರೂಪಾಯಿವರೆಗೆ ದಂಡವನ್ನು ವಿಧಿಸಲು ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಿದೆ.

    ಆರೋಗ್ಯದಲ್ಲಿ ಏರುಪೇರಾದರು ಸತ್ಯಾಗ್ರಹ ಮುಂದುವರಿಸುವೆ ಎಂದಿದ್ದೇಕೆ ಸಚಿವೆ ಅತಿಶಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts