More

    ನಾಡು ಕಟ್ಟುವಲ್ಲಿ ನಮಗೆಲ್ಲ ಕೆಂಪೇಗೌಡರು ಸ್ಫೂರ್ತಿ

    ಶಿವಮೊಗ್ಗ: ಕೆಂಪೇಗೌಡರು ಕೇವಲ ಬೆಂಗಳೂರಿನ ನಿರ್ಮಾತೃವಲ್ಲ. ಇವರು ಕರ್ನಾಟಕದ ಭವ್ಯ ಭವಿಷ್ಯಕ್ಕೆ ಅಡಿಪಾಯ ಹಾಕಿದವರು. ರಾಜ್ಯಕ್ಕೆ ಅವರ ಕೊಡುಗೆ ಅನನ್ಯ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಬಣ್ಣಿಸಿದರು.

    ಜಿಲ್ಲಾಡಳಿತ ಹಾಗೂ ಜಿಲ್ಲಾ ಒಕ್ಕಲಿಗರ ಸಂಘದಿಂದ ಕುವೆಂಪು ರಂಗಮಂದಿರದಲ್ಲಿ ಗುರುವಾರ ಏರ್ಪಡಿಸಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಉದ್ಘಾಟಿಸಿ ಮಾತನಾಡಿದ ಅವರು, ಕೆಂಪೇಗೌಡರು ಮುಂದಾಲೋಚನೆಯಿಂದ ಬೆಂಗಳೂರು ನಗರವನ್ನು ನಿರ್ಮಿಸಿದರು. 16ನೇ ಶತಮಾನದಲ್ಲೇ ಅನೇಕ ಕೆರೆಗಳು, ಮಾರುಕಟ್ಟೆಗಳನ್ನು ನಿರ್ಮಿಸಿದ್ದರು ಎಂದು ಹೇಳಿದರು.
    ಸೂಡಾ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಮಾತನಾಡಿ, ಮಹಾನ್ ವ್ಯಕ್ತಿಗಳ ಜಯಂತಿ ಕೇವಲ ಭಾಷಣಕ್ಕೆ ಸೀಮಿತವಾಗಬಾರದು. ಎಲ್ಲರೂ ಅವರ ಜೀವನ ಚರಿತ್ರೆ ತಿಳಿದುಕೊಳ್ಳಬೇಕು. ಕೆಂಪೇಗೌಡರ ಸ್ಮರಣೆಯಲ್ಲಿ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಕಾರ ನೀಡುವುದು, ಶಿವಮೊಗ್ಗದಲ್ಲಿ ಕಂಪೇಗೌಡ ಪುತ್ಥಳಿ ನಿರ್ಮಾಣ ಆಗಬೇಕೆಂಬುದು ನನ್ನ ಆಶಯ ಎಂದರು.
    ಕೆಂಪೇಗೌಡರ ಜೀವನ ಕುರಿತು ಉಪನ್ಯಾಸ ನೀಡಿದ ಸಹ್ಯಾದ್ರಿ ಕಾಲೇಜಿನ ವಾಣಿಜ್ಯ ವಿಭಾಗದ ಸಹ ಪ್ರಾಧ್ಯಾಪಕ ಡಾ. ಕೆ.ವಿ.ಗಿರಿಧರ್, ಸಾವಿರಾರು ರಾಜರು ಅನೇಕ ನಗರಗಳನ್ನು ನಿರ್ಮಾಣ ಮಾಡಿದ್ದಾರೆ. ಬಹುತೇಕ ನಗರಗಳು ನಾಶವಾಗಿವೆ. ಆದರೆ ಬೆಂಗಳೂರು ಇಂದಿಗೂ ತನ್ನ ವೈಭವ ಉಳಿಸಿಕೊಂಡಿದೆ. ಬೆಂಗಳೂರಿನಲ್ಲಿ ವ್ಯಾಪಾರ ಮಾರುಕಟ್ಟೆಗಳಾದ ಚಿಕ್ಕಪೇಟೆ, ದೊಡ್ಡಪೇಟೆ, ಬಂಗಾರಪೇಟೆ, ಕಾಟನ್ ಪೇಟೆ ಆರ್ಥಿಕತೆಗೆ ಶಕ್ತಿ ತುಂಬಿವೆ ಎಂದು ತಿಳಿಸಿದರು.
    ಜಯಂತಿ ಅಂಗವಾಗಿ ಕಾಲೇಜುಗಳಲ್ಲಿ ಏರ್ಪಡಿಸಿದ್ದ ಚರ್ಚಾ ಸ್ಪರ್ಧೆ ಹಾಗೂ ಪ್ರಬಂಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಜಿಪಂ ಸಿಇಒ ಸ್ನೇಹಲ್ ಲೋಖಂಡೆ, ಎಎಸ್ಪಿ ಅನಿಲ್‌ಕುಮಾರ್ ಭೂಮರಡ್ಡಿ, ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ಎಚ್.ಬಿ.ಆದಿಮೂರ್ತಿ, ತಾಲೂಕು ಸಂಘದ ಅಧ್ಯಕ್ಷ ಎ.ಎಸ್.ಚಂದ್ರಕಾಂತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಚ್.ಉಮೇಶ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts