More

    ಸಿಎಂ ಬದಲಾವಣೆ ಮಾಡುವುದಾದರೆ ಲಿಂಗಾಯತರಿಗೆ ಆದ್ಯತೆ ನೀಡಿ: ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ

    ಚಿಕ್ಕೋಡಿ: ಗುರುವಾರ (ಜೂನ್ 27) ನಡೆದ ನಾಡಪ್ರಭು ಕೆಂಪೇಗೌಡ ಜಯಂತಿಯಲ್ಲಿ ಡಿಕೆ ಶಿವಕುಮಾರ್​​ಗೆ ಮುಖ್ಯಮಂತ್ರಿ ಹುದ್ದೆ ಬಿಟ್ಟುಕೊಡುವಂತೆ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ ಬೆನ್ನಲ್ಲೇ ಇದೀಗ ವಿವಿಧ ಸಮುದಾಯಗಳ ಮಠಾಧೀಶರು ಈ ಬಗ್ಗೆ ಮಾತನಾಡಿದ್ದು, ಮುಖ್ಯಮಂತ್ರಿ ಬದಲಾವಣೆ ಮಾಡುವುದಾದರೆ ವೀರಶೈವ ಲಿಂಗಾಯತರಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಆಗ್ರಹಿಸಿದ್ದಾರೆ.

    ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದಲ್ಲಿ ಈ ಕುರಿತು ಮಾತನಾಡಿದ ಶ್ರೀಶೈಲ ಜಗದ್ಗುರುಗಳು, ಮುಖ್ಯಮಂತ್ರಿ ಸ್ಥಾನದಲ್ಲಿ ಬದಲಾವಣೆ ಹಾಗೂ ಡಿಸಿಎಂ ಸ್ಥಾನಗಳನ್ನ ಹೆಚ್ಚುವರಿ ಮಾಡಿದರೆ ಲಿಂಗಾಯತರಿಗೆ ಸ್ಥಾನ ನೀಡಬೇಕು. ಚುನಾವಣೆ ಸಂದರ್ಭದಲ್ಲಿ ಲಿಂಗಾಯತರು ಹೆಚ್ಚಿನ ಸಂಖ್ಯೆಯಲ್ಲಿ ಮತ ಹಾಕಿದ್ದಾರೆ. ಎಂ.ಬಿ. ಪಾಟೀಲ್, ಈಶ್ವರ ಖಂಡ್ರೆ, ಎಸ್​.ಎಸ್​ ಮಲ್ಲಿಕಾರ್ಜುನ, ಶಾಮನೂರು ಶಿವಶಂಕರಪ್ಪ ಇಂತಹವರಿಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.

    ಇದನ್ನೂ ಓದಿ: ಏಕದಿನ ವಿಶ್ವಕಪ್​ ಫೈನಲ್​ ಮರುಕಳಿಸಲಿ; ಟೀಮ್​ ಇಂಡಿಯಾ ಸೋಲಬೇಕು ಎಂದ ಮಾಜಿ ನಾಯಕ

    ಕಾಶಿ, ಉಜ್ಜಯಿನಿ ಜಗದ್ಗುರುಗಳ ಜೊತೆಗೂ ಈ ವಿಚಾರವಾಗಿ ಮಾತನಾಡಲಾಗಿದೆ. ಒಂದು ವೇಳೆ ಆರಂಭದಲ್ಲಿ ಮುಖ್ಯಮಂತ್ರಿ ಆಗುವ ಸಂದರ್ಭದಲ್ಲಿ ಒಪ್ಪಂದ ಮಾಡಿಕೊಂಡಿದ್ದರೆ, ಅದರ ಪ್ರಕಾರ ನಡೆದುಕೊಳ್ಳಲಿ ಎಂದು ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ.

    ಕೆಂಪೇಗೌಡ ಜಯಂತಿ ಕಾರ್ಯಕ್ರಮದ ವೇದಿಕೆಯಲ್ಲೇ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ, ಸಿದ್ದರಾಮಯ್ಯರನ್ನು ಉದ್ದೇಶಿಸಿ, ನಿಮಗೆ ಅನುಭವ ಇದೆ, ಈಗ ಡಿಕೆ ಶಿವಕುಮಾರ್​​ಗೆ ಅವಕಾಶ ಮಾಡಿಕೊಡಿ ಎಂದು ಹೇಳಿದ್ದು ಚರ್ಚೆಗೆ ಗ್ರಾಸವಾಗಿತ್ತು. ಎಲ್ಲವನ್ನೂ ಹೈಕಮಾಂಡ್ ನಿರ್ಧರಿಸುತ್ತದೆ ಎಂದಿದ್ದರು. ಮತ್ತೊಂದೆಡೆ, ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ವಿಚಾರ ಕೂಡ ರಾಜ್ಯ ಕಾಂಗ್ರೆಸ್​ನಲ್ಲಿ ಗೊಂದಲ ಸೃಷ್ಟಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts