More

    ಜುಲೈ 13ರಂದು ರಾಷ್ಟ್ರೀಯ ಲೋಕ್ ಅದಾಲತ್


    ಮಂಗಳೂರು : ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ತ್ವರಿತ ನ್ಯಾಯಕ್ಕಾಗಿ ಜಿಲ್ಲೆಯ ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಮೂಡಬಿದ್ರೆ ಮತ್ತು ಸುಳ್ಯ ನ್ಯಾಯಾಲಯಗಳ ಆವರಣಗಳಲ್ಲಿ ಜುಲೈ 13ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ.
    ಸಾರ್ವಜನಿಕರು ನ್ಯಾಯಾಲಯಗಳಲ್ಲಿ ದಾಖಲಾಗದೇ ಇರುವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಿಗೆ ರಾಜೀ ಸಂಧಾನದ ಮೂಲಕ ಶೀಘ್ರವಾಗಿ ಪರಿಹಾರ ಕಂಡುಕೊಳ್ಳಬಹುದು. ಮೋಟಾರು ವಾಹನ ಅಪಘಾತ ಪ್ರಕರಣಗಳು, ಚೆಕ್ ಅಮಾನ್ಯ ಹಾಗೂ ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳು, ಅಕ್ರಮ ಮರಳು ಸಾಗಾಣಿಕೆ ಪ್ರಕರಣಗಳು, ಕಾರ್ಮಿಕ ಹಾಗೂ ನಷ್ಟ ಪರಿಹಾರ ವಿವಾದಗಳಿಗೆ ಸಂಬಂಧಪಟ್ಟ ಪ್ರಕರಣಗಳು, ವಿಚ್ಛೇದನ ಪ್ರಕರಣವನ್ನು ಹೊರತುಪಡಿಸಿ ವೈವಾಹಿಕ ಹಾಗೂ ಜೀವನಾಂಶ ಪ್ರಕರಣಗಳು, ಗ್ರಾಹಕರ ವಿವಾದಗಳಿಗೆ ಸಂಬಂಧಪಟ್ಟ ಪ್ರಕರಣಗಳು, ಭೂಸ್ವಾಧೀನ ಹಾಗೂ ಭೂ ಸ್ವಾಧೀನ ಪರಿಹಾರ ಹಂಚಿಕೆ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಕ್ಕೆ ಸಂಬಂಧ ಪಟ್ಟ ಪ್ರಕರಣಗಳು, ವೇತನ ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಜನನ ಪ್ರಮಾಣ ಪತ್ರಕ್ಕೆ ಸಂಬಂಧಿಸಿದ ಪ್ರಕರಣಗಳು, ಕಾನೂನಾತ್ಮಕವಾಗಿ ರಾಜಿಯಾಗಬಲ್ಲ ಎಲ್ಲಾ ರೀತಿಯ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥ ಪಡಿಸಬಹುದು.
    ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0824-2448111 ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಆಯಾ ತಾಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ
    ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts