More

    ಹಿರಿಯ ನಾಗರಿಕರಿಗೆ ತೀರ್ಥಯಾತ್ರೆ ಯೋಜನೆ ಘೋಷಿಸಿದ ಮಹಾರಾಷ್ಟ್ರ ಸರ್ಕಾರ

    ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಜೂನ್​ 29 ಶನಿವಾರ ‘ಮುಖ್ಯಮಂತ್ರಿ ತೀರ್ಥ ದರ್ಶನ’ ಯೋಜನೆಯನ್ನು ಘೋಷಣೆ ಮಾಡಿದ್ದಾರೆ. ತೀರ್ಥಯಾತ್ರೆ ಕೈಗೊಳ್ಳಲು ಎಲ್ಲ ಧರ್ಮಗಳ ಹಿರಿಯ ನಾಗರಿಕರಿಗೆ ಈ ಯೋಜನೆಯಡಿ ಸರ್ಕಾರ ನೆರವು ಒದಗಿಸಲಿದೆ.

    ಇದನ್ನೂ ಓದಿ: ದಿಲ್ಲಿ ಅಬಕಾರಿ ನೀತಿ ಪ್ರಕರಣ: ಅರವಿಂದ್ ಕೇಜ್ರಿವಾಲ್​ಗೆ 14 ದಿನಗಳ ನ್ಯಾಯಾಂಗ ಬಂಧನ

    ವಿಧಾನಸಭೆಯಲ್ಲಿ ಯೋಜನೆ ಕುರಿತು ಮಾತನಾಡಿದ ಅವರು, ಈ ಯೋಜನೆ ನಿಯಮಗಳನ್ನು ರೂಪಿಸಲಾಗುವುದು. ಯಾತ್ರ ಸ್ಥಳಗಳಿಗೆ ಭೇಟಿ ನೀಡಿ ನೀಡಲು ಸಾಧ್ಯವಾಗದ ವೃದ್ಧರಿಗೆ ಈ ಯೋಜನೆಯಿಂದ ಪ್ರಯೋಜನವಾಗಲಿದೆ ಎಂದು ತಿಳಿಸಿದ್ದಾರೆ.

    ಶಿವಸೇನಾ ಶಾಸಕ ಪ್ರತಾಪ್ ಸರ್​ ನಾಯಕ್ ಅವರ ಪ್ರಶ್ನೆಗೆ ಉತ್ತರಿಸಿದ ಸಿಎಂ ಶಿಂದೆ, ಹಣಕಾಸಿನ ಸಮಸ್ಯೆಯಿಂದ ಹಿರಿಯ ನಾಗರಿಕರು ತೀರ್ಥಯಾತ್ರೆ ಹೋಗುವ ಕನಸನ್ನು ನನಸಾಗಿಸಲು ಸಾಧ್ಯವಾಗುವುದಿಲ್ಲ. ಜೊತೆಗೆ ತೀರ್ಥಯಾತ್ರೆಗೆ ಹೇಗೆ ಹೋಗಬೇಕು ಎಂಬುದರ ಬಗ್ಗೆ ಅವರಿಗೆ ಸರಿಯಾದ ಮಾಹಿತಿ ಇರುವುದಿಲ್ಲ. ಇಂಥವರಿಗೆ ‘ಮುಖ್ಯಮಂತ್ರಿ ತೀರ್ಥ ದರ್ಶನ ಯೋಜನೆ ಅನುಕೂಲವಾಗಲಿದೆ ಎಂದು ಮಹಾ ಸಿಎಂ ಶಿಂದೆ ಹೇಳಿದರು.

    ಆರ್ಥಿಕ ಅಡಚಣೆ, ಒಡನಾಟದ ಕೊರತೆ, ತೀರ್ಥಯಾತ್ರೆಯ ವ್ಯವಸ್ಥೆಗಳ ಬಗ್ಗೆ ಸಾಕಷ್ಟು ಮಾಹಿತಿ ಇಲ್ಲದ ಕಾರಣ ಅನೇಕ ಹಿರಿಯ ನಾಗರಿಕರು ತೀರ್ಥಯಾತ್ರೆಗೆ ಹೋಗುವ ತಮ್ಮ ಕನಸನ್ನು ನನಸಾಗಿಸಲು ಸಾಧ್ಯವಾಗುತ್ತಿಲ್ಲ ಎಂದು ಶಾಸಕ ಪ್ರತಾಪ್ ಸರನಾಯಕ್ ತಿಳಿಸಿದರು. ಈ ಸಮಸ್ಯೆಗಳನ್ನು ಪರಿಹರಿಸಲು ರಾಜ್ಯ ಸರ್ಕಾರವು ಎಲ್ಲಾ ಧರ್ಮಗಳ ಯಾತ್ರಾ ಸ್ಥಳಗಳನ್ನು ಒಳಗೊಂಡಿರುವ ಯೋಜನೆಯನ್ನು ರಚಿಸಬೇಕೆಂದು ಅವರು ಒತ್ತಾಯಿಸಿದರು.
    ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಶಿಂಧೆ, ಯಾವುದೇ ವೈಯಕ್ತಿಕ ಅಥವಾ ಆರ್ಥಿಕ ಅಡೆತಡೆಗಳ ಹೊರತಾಗಿಯೂ ಅವರ ಆಧ್ಯಾತ್ಮಿಕ ಆಕಾಂಕ್ಷೆಗಳನ್ನು ಸಾಧಿಸಲು ಸರ್ಕಾರವು ಎಲ್ಲಾ ಧಾರ್ಮಿಕ ಹಿನ್ನೆಲೆಯ ಹಿರಿಯ ನಾಗರಿಕರಿಗೆ ತೀರ್ಥಯಾತ್ರೆಗೆ ಅನುಕೂಲ ಕಲ್ಪಿಸುತ್ತದೆ ಎಂದು ಭರವಸೆ ನೀಡಿದರು.

    ಏತನ್ಮಧ್ಯೆ, ಮಹಾರಾಷ್ಟ್ರ ವಿಧಾನಸಭೆಯ ಮತ್ತೊಂದು ಸುದ್ದಿಯಲ್ಲಿ, ಮಂಗಳವಾರ ಮತ್ತು ಗುರುವಾರ ಹೊರತುಪಡಿಸಿ ಮಹಾರಾಷ್ಟ್ರ ವಿಧಾನ ಭವನದಲ್ಲಿ ಸಂದರ್ಶಕರನ್ನು ಅನುಮತಿಸಲಾಗುವುದಿಲ್ಲ ಎಂದು ಸ್ಪೀಕರ್ ರಾಹುಲ್ ನಾರ್ವೇಕರ್ ಶನಿವಾರ ಘೋಷಿಸಿದರು. ಆವರಣದೊಳಗೆ ಜನಸಂದಣಿಯನ್ನು ತಪ್ಪಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದರು.

    ಬಿಜೆಪಿ ಶವಪೆಟ್ಟಿಗೆಗೆ ಕೊನೆಯ ಮೊಳೆ ಹೊಡೆಯುವ ಸಮಯ ಬಂದಿದೆ: ಮಾಜಿ ಸಿಎಂ ಹೇಮಂತ್​ ಸೂರೆನ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts