More

    ಭಾರತದ ಗೆಲುವನ್ನು ಸಂಭ್ರಮಿಸುತ್ತಿರುವಾಗ ಮಧ್ಯದ ಬೆರಳು ತೋರಿ ವಿಕೃತಿ ಮೆರೆದ ವ್ಯಕ್ತಿ; ವಿಡಿಯೋ ವೈರಲ್

    ನವದೆಹಲಿ: ಬಾರ್ಬಡೋಸ್​ನ ಕೆನ್ಸಿಂಗ್ಟನ್​ ಓವಲ್​ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್​ನ ಫೈನಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ಟೀಮ್​ ಇಂಡಿಯಾ ಭರ್ಜರಿ ಜಯಗಳಿಸಿದ್ದು, ದಕ್ಷಿಣ ಆಫ್ರಿಕಾದ ಚೊಚ್ಚಲ ಐಸಿಸಿ ಟ್ರೋಫಿ ಗೆಲ್ಲಬೇಕೆಂಬ ಆಸೆ ಭಗ್ನಗೊಂಡಿದೆ. 17 ವರ್ಷಗಳ ಬಳಿಕ ಟೀಮ್​ ಇಂಡಿಯಾ ಟಿ20 ವಿಶ್ವಕಪ್​ನಲ್ಲಿ ಗೆಲುವು ಕಂಡಿರುವುದು ದೇಶಾದ್ಯಂತ ಸಂಭ್ರಮ ಮನೆ ಮಾಡಿದ್ದು, ವಿಮಾನಗಳಲ್ಲೂ ಸಂಭ್ರಮಿಸಲಾಗಿದೆ.

    ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಸಂಭ್ರಮಾಚರಣೆ ವೇಳೆ ವ್ಯಕ್ತಿಯೋರ್ವ ಮಧ್ಯದ ಬೆರಳು ತೋರಿಸಿ ಅಸಭ್ಯವಾಗಿ ವರ್ತಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ವಿಡಿಯೋ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದ್ದು, ಆ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ನೆಟ್ಟಿಗರು ಆಗ್ರಹಿಸಿದ್ದಾರೆ.

    ಇದನ್ನೂ ಓದಿ: ಬರ್ತ್​ಡೇ ಗಿಫ್ಟ್​ಗಾಗಿ ಥ್ಯಾಂಕ್ಸ್​; ಟಿ20 ವಿಶ್ವಕಪ್​ ಗೆಲುವಿನ ಬೆನ್ನಲ್ಲೇ ಟೀಮ್​ ಇಂಡಿಯಾಗೆ ವಿಭಿನ್ನವಾಗಿ ಶುಭಕೋರಿದ ಧೋನಿ

    ವೈರಲ್​ ಆಗಿರುವ ವಿಡಿಯೋ ನೋಡುವುದಾದರೆ, ವಿಮಾನದಲ್ಲಿ ಪ್ರಯಾಣಿಸುವಾಗ ಪೈಲಟ್​ ಟಿ20 ವಿಶ್ವಕಪ್​ನಲ್ಲಿ ಭಾರತ ಫೈನಲ್​ ಗೆದ್ದಿರುವುದಾಗಿ ಘೋಷಣೆ ಮಾಡುತ್ತಾರೆ. ಈ ವೇಳೆ ಪ್ರಯಾಣೀಕರು ಚಪ್ಪಾಳೆ ತಟ್ಟಿ ಸಂಭ್ರಮಿಸುತ್ತಿದ್ದರೆ ವ್ಯಕ್ತಿಯೋರ್ವ ಮಧ್ಯದ ಬೆರಳು ತೋರಿಸಿ ವಿಕೃತಿ ಮರೆಯುತ್ತಾನೆ. ಈ ವಿಡಿಯೋ ವೈರಲ್​ ಆಗಿದ್ದು ಹಲವರು ಖಂಡಿಸಿದ್ದಾರೆ.

    ಹಲವರು ವ್ಯಕ್ತಿಯ ಬೆರಳನ್ನು ಕಡಿದು ಆತನ ವಿರುದ್ಧ ಪ್ರಕರಣ ದಾಖಲಿಸುವಂತೆ ಆಗ್ರಹಿಸಿದ್ದಾರೆ. ಆದರೆ ಯಾವ ವಿಮಾನದಲ್ಲಿ ಮತ್ತು ಆತ ಎಲ್ಲಿಗೆ ಪ್ರಯಾಣಿಸುತ್ತಿದ್ದ ಎಂಬ ವಿಚಾರ ಇನ್ನಷ್ಟೇ ತಿಳಿದು ಬರಬೇಕಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts