More

    ಆಡಳಿತ ವೈಫಲ್ಯ, ಭ್ರಷ್ಟಾಚಾರ ರಾಜ್ಯ ಸರ್ಕಾರದ ಸಾಧನೆ ಪ್ರತಿಭಟನೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ಆರೋಪ

    ಮಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಭ್ರಷ್ಟಾಚಾರ ತಾಂಡವವಾಡುತ್ತಿದೆ. ವಾಲ್ಮೀಕಿ ನಿಗಮದ ಹಣ ಪೂರ್ಣ ತಿಂದು ತೇಗಿದ್ದಾರೆ. ಪೆಟ್ರೋಲ್, ಹಾಲು ಮೊದಲಾದ ದಿನೋಪಯೋಗಿ ವಸ್ತುಗಳ ಬೆಲೆ ಹೆಚ್ಚಾಗುತ್ತಿದ್ದು, ಜನ ಸಾಮಾನ್ಯರು ಬದುಕು ಕಟ್ಟಿಕೊಳ್ಳಲು ಸಂಕಷ್ಟ ಎದುರಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಆರೋಪಿಸಿದರು.


    ಮಂಗಳೂರಿನ ಮಿನಿ ವಿಧಾನಸೌಧದ ಎದುರು ದಕ್ಷಿಣ ಬಿಜೆಪಿ ಜಿಲ್ಲಾ ಸಮಿತಿಯಿಂದ ರಾಜ್ಯ ಸರ್ಕಾರದ ಭ್ರಷ್ಟಾಚಾರ ಮತ್ತು ಆಡಳಿತ ವೈಫಲ್ಯದ ವಿರುದ್ಧ ಹಮ್ಮಿಕೊಂಡ ಪ್ರತಿಭಟನೆ ಉದ್ದೇಶಿಸಿ ಅವರು ಮಾತನಾಡಿದರು.


    ಬಿಜೆಪಿ ಆಡಳಿತದಲ್ಲಿದ್ದಾಗ 40 ಪರ್ಸೆಂಟ್ ಸರ್ಕಾರ ಎಂದು ಆರೋಪಿಸಿದ್ದೀರಿ. ಈಗ ನಿಮ್ಮ ಕಾಂಗ್ರೆಸ್ ಸರ್ಕಾರ ಎಷ್ಟು ಪರ್ಸೆಂಟ್‌ನದು ಎಂದು ಪ್ರಶ್ನಿಸಿದ ಶಾಸಕರು, ಕಾಂಗ್ರೆಸ್ ಸರ್ಕಾರ 2 ಸಾವಿರ ಕೊಟ್ಟು 10 ಸಾವಿರ ಲೂಟಿ ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳು ಹಳಿ ತಪ್ಪಿವೆ. ಜನತೆ ನೆಮ್ಮದಿ ಕಳೆದುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ ಎಂದರು.


    ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ದುರಾಡಳಿತದಿಂದ ಜನತೆ ಬೇಸತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ. ವಾಲ್ಮೀಕಿ ನಿಗಮ ಮೂಲಕ ಸವಲತ್ತುಗಳಿಗೆ ನೀಡಬೇಕಾದ ಹಣವನ್ನು ಅಕ್ರಮ ವರ್ಗಾವಣೆ ಮಾಡಿದ ಕಾರಣ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 187 ಕೋಟಿ ರೂ. ಅಕ್ರಮ ವರ್ಗಾವಣೆಯಾಗಿರುವುದು ಗಂಭೀರ ವಿಷಯ ಎಂದರು.


    ಒಂದೆಡೆ ಬೆಲೆ ಏರಿಕೆಯಿಂದ ಜನತೆ ತತ್ತರಿಸಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಸರಿಯಾದ ವೇತನವಿಲ್ಲದೆ ಅವರು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಅಭಿವೃದ್ಧಿಗೆ ಅನುದಾನ ಬಿಡುಗಡೆಯಾಗದ ಕಾರಣ ಶಾಸಕರು ಸರ್ಕಾರಕ್ಕೆ ಮೊರೆ ಇಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಶಾಸಕಿ ಭಾಗಿರಥಿ ಮುರುಳ್ಯ ಮಾತನಾಡಿ, ಸಮಾನ ನ್ಯಾಯ ಒದಗಿಸುವ ಭರವಸೆ ನೀಡಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಸರ್ಕಾರ ಬಡವರಿಗೆ ಸಿಗಬೇಕಾದ ಹಣವನ್ನೇ ನುಂಗಿದ್ದಾರೆ. ಬಿಟ್ಟಿ ಭಾಗ್ಯಕ್ಕಾಗಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಮೀಸಲಿಟ್ಟ ಹಣ ವರ್ಗಾಯಿಸಲಾಗುತ್ತಿದೆ. ಸರ್ಕಾರ ದಿಕ್ಕು ತಪ್ಪಿದೆ ಎಂದು ಕಿಡಿಕಾರಿದರು.


    ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಮಾತನಾಡಿ, ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ತೊಲಗಿಸಲು ಪಣತೊಡಬೇಕು ಎಂದರು.
    ಪ್ರತಿಭಟನೆಯ ಬಲಿಕ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕುವ ಯತ್ನ ನಡೆಯಿತು. ಆದರೆ ಪೊಲೀಸರು ಇದಕ್ಕೆ ಅವಕಾಶ ಕಲ್ಪಿಸಲಿಲ್ಲ.
    ವಿಧಾನಪರಿಷತ್ ಮಾಜಿ ಸದಸ್ಯ ಕೆ.ಮೋನಪ್ಪ ಭಂಡಾರಿ, ಉಪಮೇಯರ್ ಸುನೀತಾ, ಬಿಜೆಪಿ ಪ್ರಮುಖರಾದ ಹರಿಕೃಷ್ಣ ಬಂಟ್ವಾಳ, ಪ್ರೇಮಾನಂದ ಶೆಟ್ಟಿ, ಸಂತೋಷ್ ಕುಮಾರ್ ಬೋಳಿಯಾರ್, ಕಿಶೋರ್ ಕುಮಾರ್, ಪೂರ್ಣಿಮಾ, ಹರೀಶ್ ಬಿಜತ್ರೆ, ಜಗನ್ನಾಥ್, ದಿನೇಶ್ ಅಮ್ಟೂರು ಮತ್ತಿತರರು ಉಪಸ್ಥಿತರಿದ್ದರು.

    ಸಿನಿಮಾ

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_sticky', [[320, 50], [300, 50]], 'div-gpt-ad- 1719903699617-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_sticky --> <div id='div-gpt-ad-1719903699617-0' style='min-width: 300px; min-height: 50px;'> <script> googletag.cmd.push(function() { googletag.display('div-gpt-ad-1719903699617-0'); }); </script> </div>

    ಲೈಫ್‌ಸ್ಟೈಲ್

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_AP_300x250', [[300, 50], [250, 250], [300, 250], [200, 200]], 'div-gpt-ad-1719903811902-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_AP_300x250 --> <div id='div-gpt-ad-1719903811902-0' style='min-width: 200px; min-height: 50px;'> <script> googletag.cmd.push(function() { googletag.display('div-gpt-ad-1719903811902-0'); }); </script> </div>

    ಟೆಕ್ನಾಲಜಿ

    Latest Posts