More

    ಶಕ್ತಿ ರೆಸಿಡೆನ್ಶಿಯಲ್ ಶಾಲೆ ವಿದ್ಯಾರ್ಥಿ ಸಂಘ ಉದ್ಘಾಟನೆ ಪ್ರಾಮಾಣಿಕತೆ, ಶಿಸ್ತು ಬದುಕಿಗೆ ಶ್ರೀರಕ್ಷೆ ಶಾಸಕ ಡಾ.ವೈ. ಭರತ್ ಶೆಟ್ಟಿ

    ಮಂಗಳೂರು: ಮಂಗಳೂರಿನ ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆಯಲ್ಲಿ 2024-25ನೇ ಸಾಲಿನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಪದಗ್ರಹಣ ಮತ್ತು ಉದ್ಘಾಟನಾ ಕಾರ್ಯಕ್ರಮವನ್ನು ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ.ವೈ ಭರತ್ ಶೆಟ್ಟಿ ಉದ್ಘಾಟಿಸಿದರು.


    ಬಳಿಕ ಮಾತನಾಡಿದ ಅವರು, ನಾಯಕನಾದವನು ಮುಖ್ಯವಾಗಿ ಪ್ರಾಮಾಣಿಕತೆ, ಶಿಸ್ತು, ನೈತಿಕತೆಯಂತಹ ಗುಣಗಳನ್ನು ರೂಢಿಸಿಕೊಂಡು ಯಾವುದೇ ಭೇದಭಾವ ಇಲ್ಲದೆ ಕೆಲಸವನ್ನು ಮಾಡಬೇಕು. ಸ್ವಂತಕ್ಕೆ ಸಲ್ಪ ಸಮಾಜಕ್ಕೆ ಸರ್ವಸ್ವ ಎಂಬಂತೆ ಮೊದಲು ಸಮಸ್ತ ಸಮಾಜದ ಏಳಿಗೆಯನ್ನು ಅರಿತು ಕಾರ್ಯೋನ್ಮುಖರಾಗಬೇಕು ಎಂದರು.


    ಶಕ್ತಿ ವಿದ್ಯಾ ಸಂಸ್ಥೆಯ ಸಂಸ್ಥಾಪಕ ಡಾ. ಕೆ.ಸಿ. ನಾಕ್ ಅಧ್ಯಕ್ಷತೆ ವಹಿಸಿದ್ದರು. ಮಕ್ಕಳು ದೇಶದ ಸಂಪತ್ತಾಗಬೇಕು. ನಾಯಕತ್ವ ಗುಣಗಳನ್ನು ರೂಢಿಸಿಕೊಳ್ಳಬೇಕು. ಯಾವುದೇ ಲೋಪದೋಷ ಬರದಂತೆ ಈ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿ ಸಂಘವು ಉತ್ತಮವಾದ ಕಾರ್ಯಗಳನ್ನು ಮಾಡುವಂತಾಗಲಿ ಎಂದರು.


    ಈ ಸಂದರ್ಭದಲ್ಲಿ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳಿಗೆ ಮತ್ತು ವಿವಿಧ ವಿಭಾಗಗಳಾದ ಅಗ್ನಿ, ವಾಯು, ಜಲ, ಪೃಥ್ವಿ ನಾಮಾಂಕಿತ ದಳಗಳ ಧ್ವಜವನ್ನು ವಿತರಿಸುವ ಮೂಲಕ ನಾಯಕರ ಪದಗ್ರಹಣವು ನಡೆಯಿತು. ವಿದ್ಯಾರ್ಥಿ ನಾಯಕನಾಗಿ ಸುಮಿತ್ ವೈ ಮತ್ತು ವಿದ್ಯಾರ್ಥಿ ನಾಯಕಿಯಾಗಿ ಸಾಕ್ಷಿ ಹುಬ್ಬಳ್ಳಿ ಪ್ರಮಾಣವಚನ ಸ್ವೀಕರಿಸಿದರು.


    ಶಿಕ್ಷಕಿ ಸ್ಮಿತಾ ದಿನದ ಪ್ರಾಮುಖ್ಯತೆಯನ್ನು ವಾಚಿಸಿದರು. ಶಕ್ತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವೆಂಕಟೇಶ್ ಮೂರ್ತಿ ಉಪಸ್ಥಿತರಿದ್ದರು.
    ಶಕ್ತಿ ವಿದ್ಯಾ ಸಂಸ್ಥೆಯ ಪ್ರಧಾನ ಸಲಹೆಗಾರರಾದ ರಮೇಶ್ ಕೆ. ಸ್ವಾಗತಿಸಿದರು. ಶಾಲಾ ಪ್ರಾಂಶುಪಾಲೆ ಬಬಿತಾ ಸೂರಜ್ ವಂದಿಸಿದರು. ಶಿಕ್ಷಕಿ ಚೇತನ ತಲಪಾಡಿ ನಿರೂಪಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts