More

    ದೆಹಲಿ ಕೋರ್ಟ್​​; 23 ವರ್ಷದ ಹಳೆಯ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್​ಗೆ ಜೈಲು ಶಿಕ್ಷೆ

    ನವದೆಹಲಿ: ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರು ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಕೋರ್ಟ್​​ ಖ್ಯಾತ ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಅವರಿಗೆ 5 ತಿಂಗಳ ಸಾದಾ ಜೈಲು ಶಿಕ್ಷೆ ವಿಧಿಸಿದೆ. ಮತ್ತು 10 ಲಕ್ಷ ರೂಪಾಯಿ ದಂಡ ವಿಧಿಸಿರುವ ನ್ಯಾಯಾಲಯ ದಂಡದ ಮೊತ್ತವನ್ನು ವಿಕೆ ಸಕ್ಸೇನಾ ಅವರಿಗೆ ನೀಡುವಂತೆ ಆದೇಶಿಸಿದೆ.

    ಇದನ್ನು ಓದಿ: ಸದನದಲ್ಲಿ ‘ಹಿಂದೂ’ ಗದ್ದಲ; ರಾಹುಲ್​ಗಾಂಧಿ ಹೇಳಿಕೆಗೆ ಗಂಭೀರ ವಿಚಾರ ಎಂದು ‘ನಮೋ’ ಖಂಡನೆ

    ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ರಾಘವ್ ಶರ್ಮ್ ಅವರು ಪಾಟ್ಕರ್ ಅವರನ್ನು ಮಾನನಷ್ಟ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಗುರುತಿಸಿ, ಸಕ್ಸೇನಾ ಅವರ ಪ್ರತಿಷ್ಠೆಗೆ ಉಂಟಾದ ಹಾನಿಗಾಗಿ 10 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಸೂಚಿಸಿದೆ. ಈ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 389(3)ರ ಅಡಿಯಲ್ಲಿ ನ್ಯಾಯಾಲಯ ಅವರ ಶಿಕ್ಷೆಯನ್ನು ಆಗಸ್ಟ್ 1ರವರೆಗೆ ಅಮಾನತುಗೊಳಿಸಿದೆ.

    ನ್ಯಾಯಾಲಯದ ಆದೇಶದ ಬಗ್ಗೆ ಪ್ರತಿಕ್ರಿಯಿಸಿದ ಪಾಟ್ಕರ್, ಸತ್ಯವನ್ನು ಎಂದಿಗೂ ಸೋಲಿಸಲು ಸಾಧ್ಯವಿಲ್ಲ. ನಾವು ಯಾರನ್ನೂ ದೂಷಿಸಲು ಪ್ರಯತ್ನಿಸಲಿಲ್ಲ. ನಾವು ನಮ್ಮ ಕೆಲಸವನ್ನು ಮಾತ್ರ ಮಾಡುತ್ತೇವೆ. ನಾವು ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸುತ್ತೇವೆ ಎಂದು ಹೇಳಿದರು.

    ವಿನಯ್​ ಕುಮಾರ್ ಸಕ್ಸೇನಾ ಅವರ ಮಾನನಷ್ಟಕ್ಕೆ ಸಂಬಂಧಿಸಿದ ಈ ಪ್ರಕರಣವು ಸುಮಾರು 23 ವರ್ಷಗಳ ಹಳೆಯದು. 2001ರಲ್ಲಿ ದೆಹಲಿಯ ಲೆಫ್ಟಿನೆಂಟ್ ಗವರ್ನರ್​ ನರ್ಮದಾ ಬಚಾವೋ ಆಂದೋಲನ ಕಾರ್ಯಕರ್ತೆ ಮೇಧಾ ಪಾಟ್ಕರ್ ವಿರುದ್ಧ ಮಾನನಷ್ಟ ಅರ್ಜಿ ಸಲ್ಲಿಸಿದ್ದರು. ಪಾಟ್ಕರ್ ಅವರು ತಮ್ಮ ವಿರುದ್ಧ ಸುಳ್ಳು ಆರೋಪ, ವಿಡಂಬನಾತ್ಮಕ ಅಭಿವ್ಯಕ್ತಿಗಳು ಮತ್ತು ಸುಳ್ಳು ಆರೋಪಗಳನ್ನು ಮಾಡಿದ್ದಾರೆ ಎಂದು ಅವರು ತಮ್ಮ ಅರ್ಜಿಯಲ್ಲಿ ತಿಳಿಸಿದ್ದರು. ದೆಹಲಿಯ ಸಾಕೇತ್ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದಿದ್ದು, ನ್ಯಾಯಾಲಯ ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಅವರನ್ನು ದೋಷಿ ಎಂದು ತೀರ್ಪು ನೀಡಿದೆ. (ಏಜೆನ್ಸೀಸ್​​)

    77 ವರ್ಷಗಳ ನಂತರ ಕ್ರಿಮಿನಲ್​ ನ್ಯಾಯ ವ್ಯವಸ್ಥೆ ಸ್ವದೇಶಿಯಾಗಿದೆ; ಗೃಹಸಚಿವ ಅಮಿತ್​ ಷಾ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts