More

    ಮೆಸ್ಕಾಂ 1600 ಮೀಟರ್ ಬಾಕ್ಸ್‌ಗಳಿಗೆ ಟ್ರಿಪ್ಪರ್ ಅಳವಡಿಕೆ ಅಧಿಕಾರಿಗಳ ಸಭೆಯಲ್ಲಿ 2 ದಿನ ಗಡುವು ನೀಡಿದ ಜಿಲ್ಲಾಧಿಕಾರಿ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿದ್ಯುತ್ ಆಘಾತದಿಂದ ಮೂರು ಜೀವ ಹಾನಿಯಾಗಿವೆ. 1600 ಮೀಟರ್ ಬಾಕ್ಸ್‌ಗಳಿಗೆ ಎರಡು ದಿನಗಳಲ್ಲಿ ಟ್ರಿಪ್ಪರ್ ಅಳವಡಿಸುವಂತೆ ಮೆಸ್ಕಾಂ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ ನೀಡಿದ್ದಾರೆ.


    ಮೆಸ್ಕಾಂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಮರಗಳ ರೆಂಬೆ-ಕೊಂಬೆಗಳಿಗೆ ತಾಗಿಕೊಂಡಂತೆ ಹಾದು ಹೋಗುವ ವಿದ್ಯುತ್ ತಂತಿಗಳು/ಕಂಬಗಳು ಇರುವ ಪ್ರದೇಶಗಳನ್ನು 2 ದಿನಗಳಲ್ಲಿ ಗುರುತಿಸಿ, ಅರಣ್ಯ ಇಲಾಖೆಯ ಸಹಯೋಗದಲ್ಲಿ ರೆಂಬೆಗಳನ್ನು ತೆರವುಗೊಳಿಸಿ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಸೂಚಿಸಿದರು.


    ದಾರಿ ದೀಪಗಳ ಕಂಬಗಳಲ್ಲಿ ವಿದ್ಯುತ್ ಲೀಕೇಜ್ ಟೆಸ್ಟ್‌ನ್ನು ಮೆಸ್ಕಾಂ ಹಾಗೂ ಮಂಗಳೂರು ಮಹಾನಗರ ಪಾಲಿಕೆಯವರು ಜಂಟಿಯಾಗಿ ನಡೆಸಿ ವರದಿ ಸಲ್ಲಿಸಬೇಕು. ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು.


    ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಳೆ ನೀರು ಹರಿದು ಹೋಗಲು ಚರಂಡಿ ಕಾಮಗಾರಿ ವ್ಯವಸ್ಥೆಯನ್ನು ತುರ್ತಾಗಿ ಕೈಗೊಂಡು ವರದಿ ನೀಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts