More

    ಮೈಷುಗರ್ ಬಾಯ್ಲರ್‌ಗೆ ಅಗ್ನಿಸ್ಪರ್ಶ: ಲಾಭ ನಷ್ಟಕ್ಕಿಂತ ರೈತರ ಹಿತಮುಖ್ಯವೆಂದ ಸಚಿವ ಚಲುವರಾಯಸ್ವಾಮಿ

    ಮಂಡ್ಯ: ಜಿಲ್ಲೆಯ ಜೀವನಾಡಿ ಮೈಷುಗರ್ ಕಾರ್ಖಾನೆಯಲ್ಲಿ ಪ್ರಸಕ್ತ ಸಾಲಿನ ಕಬ್ಬು ಅರೆಯುವಿಕೆ ಸಂಬಂಧ ಬಾಯ್ಲರ್‌ಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅಗ್ನಿಸ್ಪರ್ಶ ಮಾಡಿದರು.
    ಬಳಿಕ ಮಾತನಾಡಿ, ರಾಜ್ಯ ಸರ್ಕಾರ ಲಾಭ ಅಥವಾ ನಷ್ಟ ನೋಡಿ ಕಾರ್ಖಾನೆಯನ್ನು ನಡೆಸುತ್ತಿಲ್ಲ. ನಮಗೆ ರೈತರ ಹಿತದೃಷಿ ಮುಖ್ಯ. ಮುಂದಿನ ದಿನಗಳಲ್ಲಿ ಕಾರ್ಖಾನೆಗೆ ಲಾಭ ಬರುತ್ತದೆ ಎಂಬ ನಂಬಿಕೆ ಮೇಲೆ ನಡೆಸಲಾಗುತ್ತಿದೆ. ಸ್ಥಗಿತವಾಗಿದ್ದ ಕಾರ್ಖಾನೆಯನ್ನು ಮತ್ತೆ ತೆರೆಯಲು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಕಳೆದ ಸಾಲಿನಲ್ಲಿ 50 ಕೋಟಿ ರೂ. ನೀಡಿ ಆರಂಭಿಸಲಾಗಿತ್ತು. ಈ ವರ್ಷ ಯಾವುದೇ ತೊಂದರೆ ಇಲ್ಲವಾಗಿದೆ. ಕಳೆದ ವರ್ಷ ಬರ ಆವರಿಸಿದ್ದರಿಂದ ರೈತರು ಕಬ್ಬನ್ನು ಬೆಳೆದಿಲ್ಲ. ಈ ಹಿನ್ನೆಲೆಯಲ್ಲಿ ಕಬ್ಬು ಕೊರತೆ ಆಗಬಹುದು. ಪ್ರಸ್ತುತ 1.90 ಲಕ್ಷ ಕಬ್ಬು ಖರೀದಿಗೆ ಒಪ್ಪಿಗೆಯಾಗಿದ್ದು, ಉಳಿದ ಕಬ್ಬನ್ನು ಒಪ್ಪಿಗೆಯಾಗದ ಮತ್ತು ಹೊರ ಜಿಲ್ಲೆಯ ಮೂಲಕ ತಂದು ನುರಿಸಲು ಉದ್ದೇಶಿಸಲಾಗಿದೆ ಎಂದರು.
    2023-24ನೇ ಸಾಲಿನಲ್ಲಿ 2,41,305 ಮೆಟ್ರಿಕ್ ಟನ್ ಕಬ್ಬು ನುರಿಸಲಾಗಿದೆ. ಅಲ್ಲದೆ ಕಬ್ಬು ಸರಬರಾಜು ಮಾಡಿದ ರೈತಗೆ ಸಂಪೂರ್ಣವಾಗಿ ಹಣ ಪಾವತಿಸಲಾಗಿದೆ. ಈ ವಾರ ಕಳೆದ ನಂತರ ಸಭೆ ನಡೆಸಿ ಹೊಸ ಕಾರ್ಖಾನೆ ಸ್ಥಾಪನೆ ಬಗ್ಗೆ ಚಿಂತನೆ ಮಾಡುತ್ತೇವೆ ಎಂದರು.
    ಶಾಸಕ ರವಿಕುಮಾರ್ ಗಣಿಗ, ಎಂಎಲ್‌ಸಿ ದಿನೇಶ್ ಗೂಳಿಗೌಡ, ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ, ಜಿಲ್ಲಾಧಿಕಾರಿ ಡಾ.ಕುಮಾರ, ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ರೈತ ಮುಖಂಡರಾದ ಸುನಂದಾ ಜಯರಾಂ, ಇಂಡುವಾಳು ಚಂದ್ರಶೇಖರ್, ಸಾತನೂರು ವೇಣುಗೋಪಾಲ್, ಕನ್ನಡ ಸೇನೆ ಮಂಜುನಾಥ್, ತುಳಸೀಧರ್, ಮೈಷುಗರ್ ಮಾಜಿ ಅಧ್ಯಕ್ಷ ಸಿದ್ದರಾಮೇಗೌಡ ಇತರರಿದ್ದರು.

    ಸಿನಿಮಾ

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_sticky', [[320, 50], [300, 50]], 'div-gpt-ad- 1719903699617-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_sticky --> <div id='div-gpt-ad-1719903699617-0' style='min-width: 300px; min-height: 50px;'> <script> googletag.cmd.push(function() { googletag.display('div-gpt-ad-1719903699617-0'); }); </script> </div>

    ಲೈಫ್‌ಸ್ಟೈಲ್

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_AP_300x250', [[300, 50], [250, 250], [300, 250], [200, 200]], 'div-gpt-ad-1719903811902-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_AP_300x250 --> <div id='div-gpt-ad-1719903811902-0' style='min-width: 200px; min-height: 50px;'> <script> googletag.cmd.push(function() { googletag.display('div-gpt-ad-1719903811902-0'); }); </script> </div>

    ಟೆಕ್ನಾಲಜಿ

    Latest Posts