More

    ರಾಜಧಾನಿ ಬೆಳವಣಿಗೆಗೆ ಅಡಿಪಾಯ ಹಾಕಿದವರು: ಭಾಗೀರಥಿ ಮುರುಳ್ಯ ವಿಶ್ಲೇಷಣೆ

    ಸುಳ್ಯ: ರಾಜ್ಯ ರಾಜಧಾನಿ ಬೆಂಗಳೂರು ಬೆಳವಣಿಗೆಯ ಅಡಿಪಾಯ ಹಾಕಿದವರು ನಾಡಪ್ರಭು ಕೆಂಪೇಗೌಡರಾಗಿದ್ದು ಅವರ ಆದರ್ಶ ಮತ್ತು ಸಾಧನೆಗಳು ಜೀವನಕ್ಕೆ ದಾರಿದೀಪ ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.

    ಸುಳ್ಯ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಶ್ರಯದಲ್ಲಿ, ಶ್ರೀ ಶಾರದಾ ಪದವಿಪೂರ್ವ ಕಾಲೇಜಿನಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ಉದ್ಘಾಟಿಸಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ನಾಡಪ್ರಭು ಕೆಂಪೇಗೌಡ ಸಂಸ್ಮರಣಾ ಭಾಷಣ ಮಾಡಿದ ನೆಹರೂ ಸ್ಮಾರಕ ಮಹಾ ವಿದ್ಯಾಲಯದ ಕನ್ನಡ ಉಪನ್ಯಾಸಕ ಸಂಜೀವ ಕುದ್ಪಾಜೆ, ಕೆಂಪೇಗೌಡರು ನಮಗೆ ಆದರ್ಶ ಪುರುಷರು. ಕೆರೆಗಳ ಪುನರುಜ್ಜೀವನ ಹಾಗೂ ರಸ್ತೆ ಬದಿಯಲ್ಲಿ ಮರ ಗಿಡಗಳನ್ನು ನೆಟ್ಟು ಬೆಳೆಸಿದರೆ ಅದೇ ಅವರಿಗೆ ಸಲ್ಲಿಸುವ ಗೌರವ ಎಂದರು.

    ಕೃಷಿಕರಾದ ಲಿಂಗಪ್ಪ ಗೌಡ ಪಡ್ಪು, ಲತಾ ಎ.ಜೋಗಿಮೂಲೆ ಅವರನ್ನು ಸನ್ಮಾನಿಸಲಾಯಿತು. ಸ್ಪರ್ಧಾ ವಿಜೇತ ವಿದ್ಯಾರ್ಥಿಗಳು, ಶೈಕ್ಷಣಿಕ ಸಾಧಕರನ್ನು ಸನ್ಮಾನಿಸಲಾಯಿತು. ಕೆಂಪೇಗೌಡರ ಕುರಿತು ಕಿರು ನಾಟಕ ಪ್ರದರ್ಶನ ನಡೆಯಿತು.

    ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ, ಸುಳ್ಯ ತಾಲೂಕು ಗೌಡ ಯುವ ಸೇವಾ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

    ತಾಲೂಕು ದೈಹಿಕ ಶಿಕ್ಷಣ ನಿರ್ದೇಶಕಿ ಆಶಾ ನಾಯಕ್ ಸ್ವಾಗತಿಸಿದರು. ಶ್ರೀ ಶಾರದಾ ಕಾಲೇಜು ಪ್ರಾಂಶುಪಾಲೆ ಕೆ.ದಯಾಮಣಿ ವಂದಿಸಿದರು. ಉಪನ್ಯಾಸಕ ದಾಮೋದರ ಎನ್. ಕಾರ್ಯಕ್ರಮ ನಿರೂಪಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts