More

    ನವದೆಹಲಿ: ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಭೇಟಿಯಾದ ಪ್ರಧಾನಿ ಮೋದಿ!

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಮಂಗಳವಾರ) ಮಾಜಿ ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರನ್ನು ಭೇಟಿ ರಾಷ್ಟ್ರೀಯ ಹಿತಾಸಕ್ತಿಯ ವಿಷಯಗಳ ಕುರಿತು ಮಾತನಾಡಿದರು.

    ಇದನ್ನೂ ಓದಿ: ಜೂ.30ಕ್ಕೆ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡ ಉದ್ಘಾಟನೆ!

    ಈ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್​ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಇಂದು ವೆಂಕಯ್ಯನಾಯ್ಡು ಅವರನ್ನು ಇಂದು ಭೇಟಿ ಮಾಡಿದ್ದೇನೆ. ನನಗೆ ಅವರೊಂದಿಗೆ ಕೆಲಸ ಮಾಡುವ ಅವಕಾಶ ಸಿಕ್ಕಿತ್ತು. ಭಾರತದ ಪ್ರಗತಿಗಾಗಿ ಅವರ ಬುದ್ಧಿವಂತಿಕೆ ಮತ್ತು ಉತ್ಸಾಹದ ಬಗ್ಗೆ ಯಾವಾಗಲೂ ನಾನು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದೆ” ಎಂದು ಪೋಸ್ಟ್ ಮಾಡಿದ್ದಾರೆ.

    ಈ ಕುರಿತು ಮಾಜಿ ಉಪ ರಾಷ್ಟ್ರಪತಿ ಅವರು, ವೆಂಕಯ್ಯ ನಾಯ್ಡು ಅವರು ಕೂಡ ಎಕ್ಸ್‌ನಲ್ಲಿ ಬರೆದು ಪೋಸ್ಟ್ ಮಾಡಿದ್ದಾರೆ. “ಪ್ರಧಾನಿ ನರೇಂದ್ರ ಮೋದಿ ಅವರು ನನ್ನ ನಿವಾಸದಲ್ಲಿ ನನ್ನನ್ನು ಭೇಟಿ ಮಾಡಿದರು. ಭಾರತದ ಪ್ರಧಾನ ಮಂತ್ರಿಯಾಗಿ ಮೂರನೇ ಅವಧಿಗೆ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ ಅವರಿಗೆ ನಾನು ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿದ್ದೇನೆ. ನಮ್ಮ ಮಾತುಕತೆಯಲ್ಲಿ ರಾಷ್ಟ್ರೀಯ ಹಿತಾಸಕ್ತಿಯ ವಿಷಯಗಳ ಬಗ್ಗೆ ನಮ್ಮ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡಿದ್ದೇವೆ” ಎಂದು ತಮ್ಮ ಪೋಸ್ಟ್‌ನಲ್ಲಿ ಭೇಟಿಯ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

    ವೆಂಕಯ್ಯ ನಾಯ್ಡು ಅವರು ಭಾರತದ 13ನೇ ಉಪರಾಷ್ಟ್ರಪತಿಯಾಗಿ ಆಗಸ್ಟ್ 11, 2017ರಿಂದ ಆಗಸ್ಟ್ 10, 2022ರವರೆಗೆ ಅಧಿಕಾರದಲ್ಲಿದ್ದರು.

    ಸಂವಿಧಾನದ ಪ್ರತಿ ಹಿಡಿದು ಪ್ರಮಾಣವಚನ ಸ್ವೀಕರಿಸಿದ ರಾಹುಲ್ ಗಾಂಧಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts