More

    ಅಭಿವೃದ್ಧಿಗೆ ಒಟ್ಟಾಗಿ ಶ್ರಮಿಸಿ: ಸಂಸದರಿಗೆ ಬಿಎಸ್‌ವೈ ಕರೆ


    ಸಮಾರಂಭವನ್ನು ಉದ್ಘಾಟನೆ ಮಾಡಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ ಅವರು, ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ಎಲ್ಲರೂ ಒಗ್ಗಟ್ಟಾಗಿ ಶ್ರಮಿಸಬೇಕು ಎಂದು ಕರೆ ನೀಡಿದರು.
    ಅರಮನೆ ಆವರಣದಲ್ಲಿ ಹೊಸದಾಗಿ ಆಯ್ಕೆಯಾಗಿರುವ ಎನ್‌ಡಿಎ ಸಂಸದರಿಗೆ ಏರ್ಪಡಿಸಲಾಗಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.
    ನೂತನ ಸಂಸದರು ನಾಡಿನ ಅಭಿವೃದ್ಧಿ ವಿಷಯಗಳಿಗೆ ಧ್ವನಿಯಾಗಬೇಕು. ರಾಜ್ಯದಲ್ಲಿ ನನೆಗುದಿಗೆ ಬಿದ್ದಿರುವ ಯೋಜನೆಗಳನ್ನು ಜಾರಿಗೆ ತರಲು ಮುಂದಾಗಬೇಕು. ಹೊಸ ಯೋಜನೆಗಳನ್ನು ರಾಜ್ಯಕ್ಕೆ ತರಲು ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.
    ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಕಾರ್ಯಕರ್ತರು ಪರಸ್ಪರ ಹೊಂದಾಣಿಕೆಯಿಂದ ಕೆಲಸ ಮಾಡಿದ್ದರಿಂದಲೇ ರಾಜ್ಯದಿಂದ 19 ಸಂಸದರು ರಾಜ್ಯದಿಂದ ಆಯ್ಕೆಯಾಗಿದ್ದಾರೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರದಲ್ಲಿ ಮತ್ತೊಮ್ಮೆ ಎನ್‌ಡಿಎ ಸರ್ಕಾರ ರಚಿಸಲು ಸಾದ್ಯವಾಗಿದೆ ಎಂದು ಹೇಳಿದರು.
    ಕಾಂಗ್ರೆಸ್‌ನ ಹಣ ಬಲ, ತೋಳ್ಬಲ ಮತ್ತು ಅಪಪ್ರಚಾರದ ನಡುವೆ ನಾಡಿನ ಮತದಾರರು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಎನ್‌ಡಿಎ ಸಂಸದರನ್ನು ಆಯ್ಕೆ ಮಾಡಿದ್ದಕ್ಕಾಗಿ ಧನ್ಯವಾದ ಎಂದರು.
    ಜನರು ನಮ್ಮ ಮೇಲೆ ತುಂಬಾ ನಿರೀಕ್ಷೆ ಇಟ್ಟುಕೊಂಡು ಬೆಂಬಲ ನೀಡಿದ್ದಾರೆ. ಆದ್ದರಿಂದ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕನಿಷ್ಠ 130-140 ಸ್ಥಾನ ಗೆಲ್ಲುವಂತೆ ನೋಡಿಕೊಳ್ಳಬೇಕು ಎಂದರು.
    ಚುನಾವಣೆ ಸಂದರ್ಭದಲ್ಲಿ ಸ್ವಲ್ಪ ವ್ಯತ್ಯಾಸಗಳಾದವು. ಇನ್ನು ಮೂರು ಸೀಟ್‌ಗಳನ್ನ ಕೆಲವೇ ಅಂತರದಲ್ಲಿ ಕಳೆದುಕೊಂಡಿದ್ದೇವೆ. ಮುಂದೆ ಈಗಾಗದಂತೆ ಎಚ್ಚರ ವಹಿಸಬೇಕು ಎಂದರು.
    ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಲವಿದೆ ಎನ್ನುವುದನ್ನು ಲೋಕಸಭೆ ಚುನಾವಣೆ ನಿರೂಪಿಸಿದೆ. ಶೀಘ್ರದಲ್ಲಿಯೇ ಎದುರಾಗಲಿರುವ ತಾಪಂ, ಜಿಪಂ, ಬಿಬಿಎಂಪಿ ಚುನಾವಣೆಗೆ ಸಜ್ಜಾಗಬೇಕು. ಎರಡೂ ಪಕ್ಷದವರು ಒಗ್ಗಟ್ಟಿನಿಂದ ಹೆಜ್ಜೆ ಇಡಬೇಕು ಎಂದರು.

    ಸಿನಿಮಾ

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_sticky', [[320, 50], [300, 50]], 'div-gpt-ad- 1719903699617-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_sticky --> <div id='div-gpt-ad-1719903699617-0' style='min-width: 300px; min-height: 50px;'> <script> googletag.cmd.push(function() { googletag.display('div-gpt-ad-1719903699617-0'); }); </script> </div>

    ಲೈಫ್‌ಸ್ಟೈಲ್

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_AP_300x250', [[300, 50], [250, 250], [300, 250], [200, 200]], 'div-gpt-ad-1719903811902-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_AP_300x250 --> <div id='div-gpt-ad-1719903811902-0' style='min-width: 200px; min-height: 50px;'> <script> googletag.cmd.push(function() { googletag.display('div-gpt-ad-1719903811902-0'); }); </script> </div>

    ಟೆಕ್ನಾಲಜಿ

    Latest Posts