ಬೆಂಗಳೂರು: ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ರಾಜ್ಯ ಸರ್ಕಾರವು ದೀಪಾವಳಿ ಹಬ್ಬಕ್ಕೆ ಬಂಪರ್ ಕೊಡುಗೆಯನ್ನೇ ನೀಡಿದೆ. ನೌಕರರಿಗೆ ತುಟ್ಟಿಭತ್ಯೆಯನ್ನು (DA) ಶೇ.2.25 ರಷ್ಟು ಹೆಚ್ಚಿಸಿ ಎಂದು ಅಧಿಕೃತ ಆದೇಶ ಹೊರಡಿಸಿದೆ.
ಈ ಪರಿಷ್ಕರಣೆಯೊಂದಿಗೆ ಹಾಲಿ ಇರುವ ತುಟ್ಟಿಭತ್ಯೆ ದರವು ಮೂಲ ವೇತನದ ಶೇ.15.75ರಿಂದ ಶೇ.18ಕ್ಕೆ ಏರಿಕೆಯಾಗಿದೆ. ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರು ಹಾಗೂ ರಾಜ್ಯದ ಸಂಚಿತ ನಿಧಿಯಿಂದ ಪಿಂಚಣಿ ಪಡೆಯುತ್ತಿರುವ ಅನುದಾನಿತ ಶಿಕ್ಷಣ ಸಂಸ್ಥೆಗಳ ಪಿಂಚಣಿದಾರರಿಗೂ ಸಹ ಮೂಲ ಪಿಂಚಣಿಯ ಶೇ.15.75ರಿಂದ ಶೇ.18ರಷ್ಟು ಹೆಚ್ಚಳ ಅನ್ವಯವಾಗಲಿದೆ.
ಈ ಆದೇಶದ ಮೇರೆಗೆ ಹೆಚ್ಚಳವಾಗಿರುವ ತುಟ್ಟಿಭತ್ಯೆಯ ಬಾಕಿ ಮೊತ್ತವನ್ನು 2026ರ ನವೆಂಬರ್ ತಿಂಗಳ ವೇತನ/ಪಿಂಚಣಿ ನಿಗದಿಗಿಂತ ಮುಂಚಿತವಾಗಿ ನಗದು ರೂಪದಲ್ಲಿ ಪಾವತಿಯಾಗಲಿದೆ. 2024ರ ಪರಿಷ್ಕೃತ ವೇತನ ಶ್ರೇಣಿಯಲ್ಲಿ ಸಂಬಳ ಪಡೆಯುತ್ತಿರುವ ರಾಜ್ಯ ಸರ್ಕಾರಿ, ಜಿಲ್ಲಾ ಪಂಚಾಯತಿಗಳ ಪೂರ್ಣಾವಧಿ ನೌಕರರಿಗೆ ಇದು ಅನ್ವಯವಾಗಲಿದೆ.
2024ರ ಪರಿಷ್ಕೃತ ವೇತನ ಶ್ರೇಣಿಯಲ್ಲಿ ವೇತನ ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರು.
ಜಿಲ್ಲಾ ಪಂಚಾಯತಿಗಳ ಪೂರ್ಣಾವಧಿ ನೌಕರರು
ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್‌ಚಾರ್ಜ್ ನೌಕರರು
ಸರ್ಕಾರದಿಂದ ಅನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಯಲ್ಲಿರುವ ಪೂರ್ಣಾವಧಿ ನೌಕರರು.
ಯುಜಿಸಿ/ಎಐಸಿಟಿಇ/ಐಸಿಎಆರ್ ವೇತನ ಶ್ರೇಣಿಗಳಲ್ಲಿ ನಿವೃತ್ತರಾದ ರಾಜ್ಯ ಪಿಂಚಣಿದಾರರು