More

    ಜಮ್ಮು & ಕಾಶ್ಮೀರದ ರಿಯಾಸಿಯಲ್ಲಿ ಕಾರು ಕಣಿವೆಗೆ ಬಿದ್ದು ಓರ್ವ ಸಾವು, ಮೂವರಿಗೆ ಗಾಯ

    ರಿಯಾಸಿ: ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಪ್ರಯಾಣಿಸುತ್ತಿದ್ದ ಕಾರೊಂದು ರಸ್ತೆಯಿಂದ ಸ್ಕಿಡ್ ಆಗಿ ಕಮರಿಗೆ ಉರುಳಿದ ಪರಿಣಾಮ ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ಈ ಅವಘಡ ಸಂಭವಿಸಿದಾಗ ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದರು.

    ಇದನ್ನೂ ಓದಿ: ಕೇಂದ್ರದೊಂದಿಗೆ ಸಂಘರ್ಷ, ಸಂಸದರೊಂದಿಗೆ ಕಾಟಾಚಾರದ ಸಭೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಅಶೋಕ್ ಆಕ್ರೋಶ

    ಜುಡ್ಡಾದಿಂದ ಕೂರಿ ಮಾರ್ಗವಾಗಿ ಸವಳ್ಳಾ ನಲ್ಲಾ ಬಳಿ ತೆರಳುತ್ತಿದ್ದ ಕಾರು ಚಾಲಕ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ. ಕಾರು ಕಮರಿಗೆ ಬಿದ್ದುತು. ಅಪಘಾತದಲ್ಲಿ ಓರ್ವರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಸಂತ್ರಸ್ತರ ಗುರುತು ಇನ್ನೂ ದೃಢಪಟ್ಟಿಲ್ಲ.

    ರಿಯಾಸಿಯಲ್ಲಿ ಬಸ್ ಮೇಲೆ ಭಯೋತ್ಪಾದಕ ದಾಳಿ ಪ್ರಕರಣ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಜೂನ್​ 10 ಭಾನುವಾರ ಬಸ್‌ವೊಂದು ಪ್ರಪಾತಕ್ಕೆ ಉರುಳಿದ್ದು, ದುರಂತದಲ್ಲಿ10 ಮಂದಿ ಮೃತಪಟ್ಟು, 33 ಮಂದಿ ಗಾಯಗೊಂಡಿದ್ದಾರೆ. ಶಿವಖೋಡ ದೇವಸ್ಥಾನದಿಂದ ಕಾತ್ರಾಗೆ ಮರಳುತ್ತಿದ್ದ ಪ್ರವಾಸಿಗರಿದ್ದ ಬಸ್‌ ಗುರಿಯಾಗಿಸಿ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ದಾಳಿಗೆ ಗಾಬರಿಗೊಂಡ ಬಸ್‌ ಚಾಲಕನ ನಿಯಂತ್ರಣ ತಪ್ಪಿದ ಬಸ್‌ ರಸ್ತೆಯಿಂದ ಪಕ್ಕದ ಪ್ರಪಾತಕ್ಕೆ ಉರುಳಿದೆ ಎಂದು ರಿಯಾಸಿ ಎಸ್‌ಎಸ್‌ಪಿ ಮೋಹಿತ್‌ ಶರ್ಮಾ ತಿಳಿಸಿದ್ದರು.

    ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ: ವಾರದೊಳಗೆ ನಾಲ್ಕನೇ ಘಟನೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts