More

    ಯುವ ಸಮುದಾಯದಿಂದ ಕೃಷಿ ರಕ್ಷಣೆ : ಕೆ.ಜಗದೀಶ್ ನಾವಡ

    ವಿಜಯವಾಣಿ ಸುದ್ದಿಜಾಲ ಕೋಟ

    ಕೃಷಿ ಭೂಮಿ ಪ್ರಸ್ತುತ ಲ್ಯಾಂಡ್ ಮಾಫಿಯಾದಿಂದ ಅವನತಿಯ ದಾರಿ ತಲುಪುತ್ತಿದೆ. ಯುವ ಸಮುದಾಯ ಕೃಷಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಾಗ ಕೃಷಿ ಉಳಿಸಲು ಸಾಧ್ಯ ಎಂದು ಕೋಟ ವಿವೇಕ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಜಗದೀಶ್ ನಾವಡ ಹೇಳಿದರು.

    ಬಾಲಕೃಷ್ಣ ನಕ್ಷತ್ರಿ ಮನೆಯಂಗಳದಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಗೆಳೆಯರ ಬಳಗ ಕಾರ್ಕಡ, ರೈತಧ್ವನಿ ಸಂಘ ಕೋಟ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ ಸಹಯೋಗದೊಂದಿಗೆ ಶನಿವಾರ 36ನೇ ರೈತರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮದಲ್ಲಿ ಮಾತನಾಡಿದರು.

    ನಕ್ಷತ್ರಿ ಕುಟುಂಬ ಅದೆಷ್ಟೊ ಹಡಿಲು ಭೂಮಿಯನ್ನು ಹಸನಾಗಿಸಿದ್ದಾರೆ. ಇದೊಂದು ಮಾದರಿ ಕಾರ್ಯ ಎಂದರು. ಯಶೋದಾ ನಕ್ಷತ್ರಿ ಪತಿ ಸಹಿತ ಕೃಷಿ ಪರಿಕರ ನೀಡಿ ಗೌರವಿಸಲಾಯಿತು. ಪುತ್ರರಾದ ಬಾಲಕೃಷ್ಣ, ಬಾಲಚಂದ್ರ ನಕ್ಷತ್ರಿ ಕುಟುಂಬದವರನ್ನು ಸನ್ಮಾನಿಸಲಾಯಿತು.

    ಪ್ರಧಾನ್ ಮಂತ್ರಿ ಫಸಲ್ ಭೀಮಾ ಯೋಜನೆ ಸಂಯೋಜಕ ರವೀಂದ್ರ ಮೊಗವೀರ ಕೃಷಿ ಸವಲತ್ತಿನ ಬಗ್ಗೆ ಮಾಹಿತಿ ನೀಡಿದರು. ಪಂಚವರ್ಣ ಯುವಕ ಮಂಡಲ ಅಧ್ಯಕ್ಷ ಅಜಿತ್ ಆಚಾರ್ ಅಧ್ಯಕ್ಷತೆ ವಹಿಸಿದ್ದರು. ಕೋಟ ವಿವೇಕ ವಿದ್ಯಾಸಂಸ್ಥೆ ಉಪನ್ಯಾಸಕ ಸಂಜೀವ ಗುಂಡ್ಮಿ, ಪಾಂಚಜನ್ಯ ಸಂಘ ಹಂದಟ್ಟು ಪಾರಂಪಳ್ಳಿ ಅಧ್ಯಕ್ಷ ಕೃಷ್ಣಮೂರ್ತಿ ಮರಕಾಲ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಅಧ್ಯಕ್ಷ ದೇವಪ್ಪ ಪಟಗಾರ್, ರೈತಧ್ವನಿ ಸಂಘ ಕೋಟ ಅಧ್ಯಕ್ಷ ಎಂ.ಜಯರಾಮ್ ಶೆಟ್ಟಿ, ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ ಸಂಚಾಲಕಿ ವನೀತಾ ಉಪಾಧ್ಯಾ, ಪಂಚವರ್ಣ ಮಹಿಳಾ ಮಂಡಲ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಮತ್ತಿತರರು ಉಪಸ್ಥಿತರಿದ್ದರು. ಶಕೀಲ ಎನ್.ಪೂಜಾರಿ ಸನ್ಮಾನ ಪತ್ರ ವಾಚಿಸಿದರು. ರವೀಂದ್ರ ಕೋಟ ಸ್ವಾಗತಿಸಿದರು. ಸುಜಾತಾ ಬಾಯರಿ ನಿರೂಪಿಸಿದರು. ಶಶಿಧರ ತಿಂಗಳಾಯ ವಂದಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts