More

    ಹಗೆ ಸಾಧಿಸುವುದಕ್ಕಿಂತ ಸೌಹಾರ್ದತೆಯಲ್ಲಿ ನಂಬಿಕೆ ಇಡುವವರು ನಾವು; ಭಾರತದ ಕುರಿತು ಪಾಕ್​ ಸಚಿವನ ಹೇಳಿಕೆ ವೈರಲ್​

    ನವದೆಹಲಿ: ಆರ್ಥಿಕ ಸಂಕಷ್ಟ, ಉಗ್ರರ ಉಪಟಳದಿಂದ ಬೇಸತ್ತಿರುವ ಪಾಕಿಸ್ತಾನವು ಸದಾ ಒಂದಿಲ್ಲೊಂದು ವಿಚಾರಕ್ಕೆ ಭಾರತದ ವಿರುದ್ಧ ಆರೋಪ ಮಾಡುತ್ತ ವಿಶ್ವದ ಮುಂದೆ ಹಲವು ಬಾರಿ ಬೆತ್ತಲಾಗಿದೆ. ಇದೀಗ ಭಾರತದ ವಿರುದ್ಧ ಹಗೆತನ ಸಾಧಿಸುವುದರಿಂದ ಏನು ಪ್ರಯೋಜನವಿಲ್ಲ. ನಮ್ಮ ದೇಶವು ಹಗೆತನದಲ್ಲಿ ಯಾವುದೇ ನಂಬಿಕೆಯನ್ನು ಹೊಂದಿಲ್ಲ ಎಂದು ಹೇಳುವ ಮೂಲಕ ಪಾಕಸ್ತಾನ ಭಾರತಕ್ಕೆ ಸಕಾರಾತ್ಮಕ ಸಂದೇಶ ರವಾನಿಸುವ ಪ್ರಯತ್ನ ಮಾಡಿದೆ.

    ಈ ಕುರಿತು ಮಾತನಾಡಿರುವ ಪಾಕಿಸ್ತಾನದ ಉಪಪ್ರಧಾನಿ ಹಾಗೂ ವಿದೇಶಾಂಗ ಸಚಿವ ಇಶಕ್​ ದಾರ್​, ನಮ್ಮ ದೇಶವು ಶಾಶ್ವತ ಹಗೆತನದಲ್ಲಿ ನಂಬಿಕೆ ಹೊಂದಿಲ್ಲ. ಪಾಕಿಸ್ತಾನ ಯಾವಾಗಲೂ ತನ್ನ ನೆರೆಯ ರಾಷ್ಟ್ರಗಳೊಂದಿಗೆ ಸೌಹಾರ್ದ ಸಂಬಂಧ ಹೊಂದುವುದರಲ್ಲಿ ಹೆಚ್ಚಿನ ನಂಬಿಕೆ ಹೊಂದಿದೆ ಎಂದು ಹೇಳಿದ್ದಾರೆ.

    ಇದನ್ನೂ ಓದಿ: ರೋಗಿಯನ್ನು ಮನಬಂದಂತೆ ಥಳಿಸಿದ ಆಸ್ಪತ್ರೆ ಸಿಬ್ಬಂದಿ; ವಿಡಿಯೋ ಕಂಡು ಹೌಹಾರಿದ ನೆಟ್ಟಿಗರು

    ದಕ್ಷಿಣ ಏಷ್ಯಾದ ಈ ಪ್ರದೇಶವು ಬಡತನ, ನಿರುದ್ಯೋಗ, ಅನಕ್ಷರತೆ, ರೋಗ, ಆಹಾರ ಅಭದ್ರತೆ, ನೀರಿನ ಕೊರತೆ, ನೈಸರ್ಗಿಕ ವಿಕೋಪಗಳು, ಪರಿಸರ ಅವನತಿ ಮತ್ತು ಹವಾಮಾನ ಬದಲಾವಣೆಯ ಪರಿಣಾಮಗಳು ಸೇರಿದಂತೆ ಬೆದರಿಸುವ ಸವಾಲುಗಳಿಂದ ಸುತ್ತುವರೆದಿದೆ. ಎಲ್ಲಾ ದೇಶಗಳೊಂದಿಗೆ ಶಾಂತಿಯುತ, ಸಹಕಾರಿ ಮತ್ತು ಉತ್ತಮ-ನೆರೆಹೊರೆಯ ಸಂಬಂಧಗಳನ್ನು ಕಾಪಾಡಿಕೊಳ್ಳಲು ಪಾಕಿಸ್ತಾನ ಸತತವಾಗಿ ಶ್ರಮಿಸುತ್ತಿದೆ. ಕೆಲವು ಸಂದರ್ಭಗಳಲ್ಲಿ ಸವಾಲುಗಳು ಮತ್ತು ಹಿನ್ನಡೆಗಳ ಹೊರತಾಗಿಯೂ, ಪಾಕಿಸ್ತಾನದ ನಿರ್ಧಾರ ಸ್ಥಿರವಾಗಿರುತ್ತದೆ.

    ಇದೇ ವೇಳೆ ಎರಡು ಪರಮಾಣು ಸಶಸ್ತ್ರ ನೆರೆಹೊರೆಯವರ ನಡುವಿನ ದ್ವಿಪಕ್ಷೀಯ ಸಂಬಂಧಗಳ ಭವಿಷ್ಯವನ್ನು ಗಂಭೀರವಾಗಿ ಪರಿಗಣಿಸುವಂತೆ ಮೋದಿ ಸರ್ಕಾರಕ್ಕೆ ಕರೆ ನೀಡಿದ್ದಾರೆ. ಹಲವು ದೇಶಗಳು ಕೂಡ ಭಾರತದೊಂದಿಗೆ ಉತ್ತಮ ಬಾಂಧವ್ಯಕ್ಕೆ ಒತ್ತು ನೀಡುತ್ತಿವೆ. ಪಾಕಿಸ್ತಾನವು ಯಾವಾಗಲೂ ಭಾರತದೊಂದಿಗೆ ಉತ್ತಮ ಸಂಬಂಧವನ್ನು ಹೊಂದಲು ಉತ್ಸುಕವಾಗಿದೆ ಎಂದು ಉಪಪ್ರಧಾನಿ ಹಾಗೂ ವಿದೇಶಾಂಗ ಸಚಿವ ಇಶಕ್​ ದಾರ್ ಹೇಳಿದ್ದಾರೆ.

    ಸಿನಿಮಾ

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_sticky', [[320, 50], [300, 50]], 'div-gpt-ad- 1719903699617-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_sticky --> <div id='div-gpt-ad-1719903699617-0' style='min-width: 300px; min-height: 50px;'> <script> googletag.cmd.push(function() { googletag.display('div-gpt-ad-1719903699617-0'); }); </script> </div>

    ಲೈಫ್‌ಸ್ಟೈಲ್

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_AP_300x250', [[300, 50], [250, 250], [300, 250], [200, 200]], 'div-gpt-ad-1719903811902-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_AP_300x250 --> <div id='div-gpt-ad-1719903811902-0' style='min-width: 200px; min-height: 50px;'> <script> googletag.cmd.push(function() { googletag.display('div-gpt-ad-1719903811902-0'); }); </script> </div>

    ಟೆಕ್ನಾಲಜಿ

    Latest Posts