More

    ಫೆ.1ರಿಂದ ಪರಿದೃಶ್ಯ ಅಂತಾರಾಷ್ಟ್ರೀಯ ಕಿರುಚಿತ್ರ, ಸಾಕ್ಷೃಚಿತ್ರೋತ್ಸವ

    ಮೈಸೂರು: ಮೈಸೂರು ಸಿನಿಮಾ ಸೊಸೈಟಿ ಮತ್ತು ಭಾರತೀಯ ಚಿತ್ರ ಸಾಧನದ ಸಹಯೋಗದೊಂದಿಗೆ 2025ರ ಫೆಬ್ರವರಿ 1, 2 ರಂದು ಪರಿದೃಶ್ಯ ಅಂತಾರಾಷ್ಟ್ರೀಯ ಕಿರುಚಿತ್ರ ಮತ್ತು ಸಾಕ್ಷೃಚಿತ್ರೋತ್ಸವವನ್ನು ನಗರದಲ್ಲಿ ಆಯೋಜಿಸಲಾಗುವುದು ಎಂದು ಸೊಸೈಟಿ ಕಾರ್ಯದರ್ಶಿ ಪದ್ಮಾವತಿ ಎಸ್.ಭಟ್ ಹೇಳಿದರು.
    ವಿದ್ಯಾರ್ಥಿ ಮತ್ತು ವೃತ್ತಿಪರ ವಿಭಾಗಗಳಲ್ಲಿ ಆಯೋಜಿಸಿರುವ ಪರಿದೃಶ್ಯ ಚಿತ್ರೋತ್ಸವಕ್ಕೆ ಕಿರುಚಿತ್ರ ಮತ್ತು ಸಾಕ್ಷ್ಯಚಿತ್ರಗಳನ್ನು ಆಹ್ವಾನಿಸಲಾಗಿದ್ದು, ಈ ಸ್ಪರ್ಧೆಯಲ್ಲಿ ಭಾಗವಹಿಸಲು 2022ರ ನಂತರ ಚಿತ್ರೀಕರಣಗೊಂಡ ಕಿರು ಚಿತ್ರಗಳು ಮತ್ತು ಸಾಕ್ಷೃಚಿತ್ರಗಳಿಗೆ ಪ್ರವೇಶಾವಕಾಶವಿರುತ್ತದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
    ಸ್ಪರ್ಧೆಯಲ್ಲಿ ಅತ್ಯುತ್ತಮ ಕಿರುಚಿತ್ರ, ಅತ್ಯುತ್ತಮ ನಿರ್ದೇಶಕ, ಅತ್ಯುತ್ತಮ ನಟ, ಅತ್ಯುತ್ತಮ ನಟಿ, ಅತ್ಯುತ್ತಮ ಛಾಯಾಚಿತ್ರ, ಅತ್ಯುತ್ತಮ ಚಿತ್ರಕಥೆ, ಅತ್ಯುತ್ತಮ ಧ್ವನಿ ಸಂಯೋಜನೆ ಸೇರಿದಂತೆ ಇನ್ನೂ ಅನೇಕ ಬಹುಮಾನಗಳಿರುತ್ತವೆ. ಮಾಹಿತಿಗೆ ಮೊ.9980596824 ಸಂಪರ್ಕಿಸಬಹುದು ಎಂದು ಹೇಳಿದರು.
    ಬಿಜೆಪಿ ಮುಖಂಡ ಜೋಗಿ ಮಂಜು, ಮಂಜುನಾಥ್, ಚೇತನ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts