More

    ಪಾವೂರು ಉಳಿಯ ಅಕ್ರಮ ಮರಳು ದಂಧೆಯಿಂದ ಆತಂಕ

    ಮಂಗಳೂರು: ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನೇತ್ರಾವತಿ ನದಿಯ ಭಾಗದ ದ್ವೀಪ ಪ್ರದೇಶವಾದ ಪಾವೂರು ಉಳಿಯ ಅಕ್ರಮ ಮರಳು ದಂಧೆಯಿಂದ ಇಲ್ಲಿ ಮೂರು ತಲೆಮಾರುಗಳಿಂದ ವಾಸವಿರುವ 50ಕ್ಕೂ ಅಧಿಕ ಕುಟುಂಬಗಳು ಆತಂಕದಲ್ಲೇ ಜೀವನ ಸಾಗಿಸುವಂತಾಗಿದೆ ಎನ್ನುತ್ತಾರೆ ಸ್ಥಳೀಯ ಇನ್‌ಫೆಂಟ್ ಜೀಜಸ್ ಚರ್ಚ್‌ನ ಧರ್ಮಗುರು ಮನೋಹರ್ ಡಿಸೋಜಾ ಹೇಳಿದರು.

    ದ್ವೀಪ ಉಳಿಸಿ, ಜನತೆಯ ಬದುಕು ರಕ್ಷಿಸಿ ಎಂಬ ಧ್ಯೇಯ ವಾಕ್ಯದೊಂದಿಗೆ ಕಥೋಲಿಕ್ ಸಭಾ ಮಂಗಳೂರು ಪ್ರದೇಶ್, ಸಮಾನ ಮನಸ್ಕ ಸಂಘಟನೆಗಳ ವೇದಿಕೆಯ ನಿಯೋಗ ಮಾಧ್ಯಮ ಪ್ರತಿನಿಧಿಗಳ ಜತೆ ಸೋಮವಾರ ಬೆಳಗ್ಗೆ ಸ್ಥಳಕ್ಕೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ, ಮಾಹಿತಿಯನ್ನು ಕಲೆಹಾಕುವ ಸಂದರ್ಭದಲ್ಲಿ ಮಾತನಾಡಿದರು.

    ಪಾವೂರು ಉಳಿಯ ದ್ವೀಪದ ಜನರನ್ನು ಜೀವಂತ ಕೊಲ್ಲುವ ಹುನ್ನಾರ ಅಕ್ರಮ ಮರಳುಗಾರಿಕೆಯಿಂದ ಕಳೆದ ಹಲವು ವರ್ಷಗಳಿಂದ ನಡೆಯುತ್ತಿದೆ. ಇಲ್ಲಿನ ಜನರ ಜೀವಕ್ಕೆ ಅಪಾಯ ತಂದಿರುವ ಅಕ್ರಮ ಮರಳು ದಂಧೆಕೋರರ ವಿರುದ್ಧ ಕೊಲೆಯ ಆರೋಪ ಹೊರಿಸಿ ಶಿಕ್ಷೆ ಆಗಬೇಕಾಗಿದೆ. ಎಷ್ಟೋ ವರ್ಷಗಳಿಂದ ಇಲ್ಲಿನ ಈ ಸಮಸ್ಯೆ ಬಗ್ಗೆ ಜಿಲ್ಲಾಡಳಿತ ಸೇರಿದಂತೆ ಸಂಬಂಧಫಟ್ಟವರಿಗೆ ಮನವಿ ನೀಡಲಾಗುತ್ತಿದ್ದರೂ ಸ್ಪಂದನೆ ಸಿಕ್ಕಿಲ್ಲ. ಇಲ್ಲಿನ ಜನರಿಗೆ ಶಾಶ್ವತ ಪರಿಹಾರ ಬೇಕು ಎಂದು ಅವರು ಆಗ್ರಹಿಸಿದರು.

    ಸಮಾನ ಮನಸ್ಕ ಸಂಘಟನೆಗಳ ಪ್ರಮುಖರಾದ ಮುನೀರ್ ಕಾಟಿಪಳ್ಳ, ಮಂಜುಳಾ ನಾಯಕ್, ಸ್ಟಾೃನಿ ಲೋಬೋ, ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಯಾದವ ಶೆಟ್ಟಿ, ಸಿಪಿಐ ಜಿಲ್ಲಾ ಕಾರ್ಯದರ್ಶಿ ಬಿ. ಶೇಖರ್, ವಿವಿಧ ಸಂಘಟನೆಗಳ ಪ್ರಮುಖರಾದ ಗಿಲ್ಬರ್ಟ್ ಡಿಸೋಜಾ, ಜಾನ್ ಲಸ್ರಾದೋ, ವಿನೋದ್ ಪಿಂಟೋ ತಾಕೊಡೆ, ಸುನಿಲ್ ಕುಮಾರ್ ಬಜಾಲ್, ಸಂತೋಷ್ ಬಜಾಲ್, ಮುನ್ನೂರು ಗ್ರಾ.ಪಂ.ನ ಮಾಜಿ ಅಧ್ಯಕ್ಷ ವಿಲ್ಫ್ರೆಡ್, ಟೋಬಿ ಪಿಂಟೋ, ಸ್ಟಾೃನಿ ಡಿಕುನ್ನಾ, ಇನ್ನಿತರರು ಉಪಸ್ಥಿತರಿದ್ದರು.

    —————

    ಜಿಲ್ಲಾಧಿಕಾರಿ ಆದೇಶಕ್ಕಿಲ್ಲ ಕಿಮ್ಮತ್ತು

    ಸ್ಥಳೀಯರಾದ ಗಿಲ್ಬರ್ಟ್ ಡಿಸೋಜಾ ಮಾತನಾಡಿ, ಸುಮಾರು 100 ಎಕರೆಯಷ್ಟಿದ್ದ ದ್ವೀಪ ಪ್ರದೇಶ ಅಕ್ರಮ ಮರಳು ದಂಧೆಯಿಂದಾಗಿ ಪ್ರಸಕ್ತ ಅರ್ಧದಷ್ಟು ನೀರು ಪಾಲಾಗಿದೆ. ಕೆಲವು ವರ್ಷಗಳ ಹಿಂದೆ ಎ.ಬಿ. ಇಬ್ರಾಹೀಂ ಅವರು ಜಿಲ್ಲಾಧಿಕಾರಿಯಾಗಿದ್ದಾಗ ಅಧಿಕಾರಿಗಳ ಜತೆ ಭೇಟಿ ನೀಡಿ, ವಳಚ್ಚಿಲ್, ಪಾವೂರು, ಗಾಡಿಗದ್ದೆ, ಸಹ್ಯಾದ್ರಿ ಕಾಲೇಜಿನ ಹಿಂಬಾಗ ಸೇರಿ ಮೂರು ಪ್ರದೇಶಗಳಲ್ಲಿ ಮರಳುಗಾರಿಕೆಯ ಧಕ್ಕೆಯನ್ನು ಬಂದ್ ಮಾಡಿ ನಿಷೇಧಾಜ್ಞೆ ಹೊರಡಿಸಿದ್ದರು. ಆ ಬಳಿಕ ಕೆಲ ವರ್ಷಗಳ ಕಾಲ ಮರಳು ದಂಧೆ ಸ್ಥಗಿತಗೊಂಡಿತ್ತು. ಮತ್ತೆ ಕೆಲ ವರ್ಷಗಳಿಂದೀಚೆಗೆ ಆರಂಭವಾಗಿದ್ದು, ಈ ನಿಷೇಧಾಜ್ಞೆಯ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಕ್ರಮವಾಗುತ್ತಿಲ್ಲ ಎಂದರು.

    ಸಿನಿಮಾ

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_sticky', [[320, 50], [300, 50]], 'div-gpt-ad- 1719903699617-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_sticky --> <div id='div-gpt-ad-1719903699617-0' style='min-width: 300px; min-height: 50px;'> <script> googletag.cmd.push(function() { googletag.display('div-gpt-ad-1719903699617-0'); }); </script> </div>

    ಲೈಫ್‌ಸ್ಟೈಲ್

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_AP_300x250', [[300, 50], [250, 250], [300, 250], [200, 200]], 'div-gpt-ad-1719903811902-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_AP_300x250 --> <div id='div-gpt-ad-1719903811902-0' style='min-width: 200px; min-height: 50px;'> <script> googletag.cmd.push(function() { googletag.display('div-gpt-ad-1719903811902-0'); }); </script> </div>

    ಟೆಕ್ನಾಲಜಿ

    Latest Posts