More

    ರೋಗ ತಡೆಗೆ ಜನರ ಸಹಕಾರ ಮುಖ್ಯ

    ಬೀರೂರು: ಡೆಂೆ, ಮಲೇರಿಯಾದಂಥ ಸಾಂಕ್ರಾಮಿಕ ರೋಗಗಳು ಹರಡದಂತೆ ತಡೆಯುವಲ್ಲಿ ಸಾರ್ವಜನಿಕರ ಪಾತ್ರ ಮಹತ್ತರವಾದುದು. ಇಂಥ ಕಾಯಿಲೆಗಳಿಗೆ ಆರಂಭದಲ್ಲೇ ಚಿಕಿತ್ಸೆ ಪಡೆಯದಿದ್ದರೆ ಅಪಾಯಕಾರಿ ಎಂದು ಕಡೂರು ತಾಲೂಕು ವೈದ್ಯಾಧಿಕಾರಿ ಡಾ. ರವಿ ತಿಳಿಸಿದರು.

    ಶುಕ್ರವಾರ ಪುರಸಭೆ ಸಹಯೋಗದಲ್ಲಿ ಸಾರ್ವಜನಿಕ ಆಸ್ಪತ್ರೆಯಿಂದ ರಾಷ್ಟ್ರೀಯ ಮಲೇರಿಯಾ ವಿರೋಧಿ ಮಾಸಾಚರಣೆ ಅಂಗವಾಗಿ ನಡೆಸಿದ ಜಾಥಾದಲ್ಲಿ ಮಾತನಾಡಿ, ಮಲೇರಿಯಾಮುಕ್ತ ಭಾರತ ನಿರ್ಮಿಸಲು ಆರೋಗ್ಯ ಇಲಾಖೆ ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದರು.
    ಚಳಿ, ಬಿಟ್ಟು ಬಿಟ್ಟು ಜ್ವರ ಬರುವುದು ಮಲೇರಿಯಾದ ಮುನ್ಸೂಚನೆ. ಅನಾಫಿಲಿಸ್ ಎಂಬ ಹೆಣ್ಣು ಸೊಳ್ಳೆಯಿಂದ ರೋಗ ಹರಡುತ್ತದೆ. ಆದ್ದರಿಂದ ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನೀರು ನಿಂತು ಸೊಳ್ಳೆಗಳು ಉತ್ಪತ್ತಿಯಾಗದಂತೆ ಎಚ್ಚರ ವಹಿಸಬೇಕು ಎಂದರು.
    ಪುರಸಭೆ ಮುಖ್ಯಾಧಿಕಾರಿ ಜಿ.ಪ್ರಕಾಶ್ ಮಾತನಾಡಿ, ಶುದ್ಧ ಕುಡಿಯುವ ನೀರು, ಸೊಳ್ಳೆ ಪರದೆಗಳನ್ನು ಬಳಸಿ ಸೊಳ್ಳೆಗಳ ಕಡಿತದಿಂದ ಪಾರಾಗಿ ಮಲೇರಿಯಾ ನಿಯಂತ್ರಿಸಬಹುದು. ಆರೋಗ್ಯ ಇಲಾಖೆ ಕಾರ್ಯಕರ್ತರಿಗೆ ಸಹಕಾರ ನೀಡಿ ಮಲೇರಿಯಾಮುಕ್ತ ಭಾರತ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಮನವಿ ಮಾಡಿದರು.
    ಪುರಸಭೆ ಹಿರಿಯ ಆರೋಗ್ಯ ನಿರೀಕ್ಷಕ ಲಕ್ಷ್ಮಣ್ ಮಾತನಾಡಿ, ಪರಿಸರ ಶುಚಿಯಾಗಿಟ್ಟುಕೊಂಡು ಸೊಳ್ಳೆಗಳ ಉತ್ಪತ್ತಿಯಾಗದಂತೆ ತಡೆಯಬೇಕು ಎಂದು ಕಿವಿಮಾತು ಹೇಳಿದರು.
    ಜಾಥಾದಲ್ಲಿ ಡಾ. ಗವಿರಂಗಪ್ಪ, ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಪುರಸಭೆ ಅಧಿಕಾರಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts