More

    ರೈತರ ಅಭ್ಯುದಯಕ್ಕೆ ಪ್ರಧಾನಿ ನರೇಂದ್ರ ಮೋದಿ ಬದ್ಧ: ಕುಮಾರಸ್ವಾಮಿ

    ಧಾರವಾಡ: ಪ್ರಧಾನಿ ನರೇಂದ್ರ ಮೋದಿ ಅವರು 3ನೇ ಬಾರಿಗೆ ಪ್ರಧಾನಿಯಾಗಿ ಅಽಕಾರ ವಹಿಸಿಕೊಂಡ ನಂತರ ರೈತರ ಅಭ್ಯುದಯಕ್ಕೆ ಬದ್ಧರಾಗಿದ್ದಾರೆ. ರೈತರ ಅನುಕೂಲಕ್ಕಾಗಿ ಪಿಎಂ ಕಿಸಾನ್ ಸಮÁ್ಮನ್ ಯೋಜನೆಯ 17ನೇ ಕಂತಿನ ಹಣ ಬಿಡುಗಡೆ ಮಾಡಿದ್ದಾರೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
    ನಗರದ ಕೃಷಿ ವಿಶ್ವವಿದ್ಯಾಲಯದ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಮಂಗಳವಾರ ಆಯೋಜಿಸಿದ್ದ ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಸಮÁ್ಮನ್ ನಿಧಿಯ 17ನೇ ಕಂತಿನ 2,000 ರೂಪಾಯಿ ಹಣ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
    ಮೋದಿಯವರು 3ನೇ ಬಾರಿ ಪ್ರಧಾನಿಯಾದ ಬಳಿಕ ಕೈಗೊಂಡ ಮೊದಲ ನಿರ್ಣಯದಂತೆ ಪಿಎಂ ಕಿಸಾನ್ ಸಮÁ್ಮನ್ ಯೋಜನೆಯ 17ನೇ ಕಂತು ಬಿಡುಗಡೆ ಮಾಡಿದ್ದಾರೆ. ಉತ್ತರ ಪ್ರದೇಶದ ವಾರಾಣಸಿಯಿಂದ ಚಾಲನೆ ನೀಡಿದ್ದಾರೆ. ದೇಶದ 50 ಜಿಲ್ಲೆಗಳಲ್ಲಿ ಸಾಂಕೇತಿಕ ಕಾರ್ಯಕ್ರಮ ನಡೆದಿದೆ. ಧಾರವಾಡ ಜಿಲ್ಲೆಯಲ್ಲಿ ಸುಮಾರು 1 ಲಕ್ಷ ರೈತರಿಗೆ 20 ಕೋಟಿ ರೂಪಾಯಿ ಸಾಂಕೇತಿಕವಾಗಿ ಜಮೆಯಾಗಿದೆ. ರೈತರ ಖಾತೆಗೆ ನೇರವಾಗಿ ಜಮೆಯಾಗುವ ಪಿಎಂ ಕಿಸಾನ್ ನಿಧಿ ಯೋಜನೆಯಲ್ಲಿ ಮಧ್ಯವರ್ತಿಗಳ ಹಾವಳಿ ಇಲ್ಲ ಎಂದರು.
    ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ. ಪಿ.ಎಲ್. ಪಾಟೀಲ, ವಿಸ್ತರಣಾ ನಿರ್ದೇಶಕ ಡಾ. ಎಸ್.ಎಸ್. ಅಂಗಡಿ, ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ವಿವಿಧ ಜಿಲ್ಲೆಗಳ ಕೃಷಿ ಸಖಿಯರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts