More

    ಮನ್​ ಕಿ ಬಾತ್​​​ನಲ್ಲಿ ದೇಶದ ಪ್ರಜೆಗಳಿಗೆ ಧನ್ಯವಾದ ತಿಳಿಸಿದ ಪ್ರಧಾನಿ ಮೋದಿ; 111ನೇ ಸಂಚಿಕೆಯಲ್ಲಿ ಮಾಡಿದ ಮನವಿ ಏನು ಗೊತ್ತಾ?

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಕೇಂದ್ರದಲ್ಲಿ ಸರ್ಕಾರ ರಚಿಸಿದ ಬಳಿಕ ಮೊದಲ ಮನ್​ ಕಿ ಬಾತ್​ ಕಾರ್ಯಕ್ರಮದ ಮೊದಲ ಸಂಚಿಕೆಯಲ್ಲಿ ದೇಶದ ಜನರೊಂದಿಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಇದು ಪ್ರಧಾನಿ ಅವರ ಮನ್​ ಕಿ ಬಾತ್​​ ಕಾರ್ಯಕ್ರಮದ 111ನೇ ಸಂಚಿಕೆಯಾಗಿದ್ದು, ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವನ್ನು (ಎನ್‌ಡಿಎ) ಅಧಿಕಾರಕ್ಕೆ ಮರು ಆಯ್ಕೆ ಮಾಡಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಿದರು.

    ಇದನ್ನು ಓದಿ: ದೀಪಿಕಾ ಪಡುಕೋಣೆಯನ್ನು ಟ್ರೋಲ್​ ಮಾಡಿದವರಿಗೆ ಖಡಕ್​ ರಿಪ್ಲೈ ಕೊಟ್ಟ ಖ್ಯಾತ ನಟಿ; ಪೋಸ್ಟ್​ ವೈರಲ್​

    ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತಮ್ಮ ನಂಬಿಕೆಯನ್ನು ಜನರು ಚುನಾವಣೆಯಲ್ಲಿ ಮರುಸ್ಥಾಪಿಸಿದ್ದಾರೆ ಎಂದು ಹೇಳಿದರು. ಅಲ್ಲದೆ, 2024ರ ಚುನಾವಣೆ ವಿಶ್ವದ ಅತಿದೊಡ್ಡ ಚುನಾವಣೆಯಾಗಿದೆ. ಇಷ್ಟು ದೊಡ್ಡ ಚುನಾವಣೆ ಜಗತ್ತಿನ ಯಾವುದೇ ದೇಶದಲ್ಲಿ ನಡೆದಿಲ್ಲ. ಈ ಚುನಾವಣೆಯಲ್ಲಿ ದೇಶದ 65 ಕೋಟಿ ಜನರು ಮತ ಚಲಾಯಿಸಿದ್ದಾರೆ ಎಂದು ಹೇಳಿದರು. ಲೋಕಸಭೆ ಚುನಾವಣೆಯನ್ನು ಯಶಸ್ವಿಯಾಗಿ ನಡೆಸಿದ್ದಕ್ಕಾಗಿ ಚುನಾವಣಾ ಆಯೋಗ ಮತ್ತು ಮತದಾನ ಪ್ರಕ್ರಿಯೆಗೆ ಸಂಬಂಧಿಸಿದ ಪ್ರತಿಯೊಬ್ಬರನ್ನು ಅಭಿನಂದಿಸಿದರು.

    ಮನ್​ ಕಿ ಬಾತ್​ ಕಾರ್ಯಕ್ರಮದಲ್ಲಿ ಪ್ಯಾರಿಸ್ ಒಲಿಂಪಿಕ್ಸ್ ಬಗ್ಗೆ ಮಾತನಾಡಿದ ಅವರು, ಈ ಹೊತ್ತಿಗೆ ಮುಂದಿನ ತಿಂಗಳು ಪ್ಯಾರಿಸ್ ಒಲಿಂಪಿಕ್ಸ್ ಪ್ರಾರಂಭವಾಗಲಿದೆ. ಅದರಲ್ಲಿ ಭಾರತೀಯ ತಂಡವು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಭರವಸೆ ವ್ಯಕ್ತಪಡಿಸಿದರು. ಟೋಕಿಯೊ ಒಲಿಂಪಿಕ್ಸ್‌ನ ನೆನಪುಗಳು ನಮ್ಮೆಲ್ಲರ ಮನಸ್ಸಿನಲ್ಲಿ ಇನ್ನೂ ಉಳಿದಿದೆ. ಟೋಕಿಯೊದಲ್ಲಿ ನಮ್ಮ ಆಟಗಾರರ ಪ್ರದರ್ಶನವು ಪ್ರತಿಯೊಬ್ಬ ಭಾರತೀಯನ ಹೃದಯವನ್ನು ಗೆದ್ದಿದೆ ಎಂದು ಹೇಳಿದರು. ಪ್ಯಾರಿಸ್ ಒಲಿಂಪಿಕ್ಸ್​​ನಲ್ಲಿ ಆಟಗಾರರನ್ನು ಪ್ರೋತ್ಸಾಹಿಸಲು ‘Cheer4India’ ಎಂಬ ಹ್ಯಾಶ್‌ಟ್ಯಾಗ್ ಅನ್ನು ಬಳಸಬೇಕೆಂದು ಮನವಿ ಮಾಡಿದರು.

    ಮನ್ ಕಿ ಬಾತ್ ಕಾರ್ಯಕ್ರಮದ ಕೊನೆಯ ಸಂಚಿಕೆ ಫೆಬ್ರವರಿ 25ರಂದು ಪ್ರಸಾರವಾಯಿತು. ಲೋಕಸಭೆ ಚುನಾವಣೆ ಘೋಷಣೆಯಾದ ನಂತರ ಮಾದರಿ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮದ ಪ್ರಸಾರವನ್ನು ಮುಂದೂಡಲಾಗಿತ್ತು. ಮುಂದಿನ ಬಾರಿ ಈ ಕಾರ್ಯಕ್ರಮದ ಮೂಲಕ ಜನರೊಂದಿಗೆ ಮುಖಾಮುಖಿಯಾದಾಗ ಹೊಸ ಶಕ್ತಿ ಮತ್ತು ಹೊಸ ಮಾಹಿತಿಯೊಂದಿಗೆ ಭೇಟಿಯಾಗುತ್ತೇನೆ ಎಂದು ಪ್ರಧಾನಿ ಅದರ 110ನೇ ಆವೃತ್ತಿಯಲ್ಲಿ ಹೇಳಿದ್ದರು.

    ಮನ್ ಕಿ ಬಾತ್ ಪ್ರಧಾನಿ ಮೋದಿಯವರ ಮಾಸಿಕ ರೇಡಿಯೋ ಕಾರ್ಯಕ್ರಮವಾಗಿದ್ದು, ಅಲ್ಲಿ ಅವರು ಭಾರತದ ಪ್ರಜೆಗಳ ಜತೆ ಪ್ರಮುಖ ರಾಷ್ಟ್ರೀಯ ಸಮಸ್ಯೆಗಳನ್ನು ಚರ್ಚಿಸುತ್ತಾರೆ. ಪ್ರತಿ ತಿಂಗಳ ಕೊನೆಯ ಭಾನುವಾರದಂದು ಕಾರ್ಯಕ್ರಮವನ್ನು ಪ್ರಸಾರ ಮಾಡಲಾಗುತ್ತದೆ. 22 ಭಾರತೀಯ ಭಾಷೆಗಳು ಮತ್ತು 29 ಉಪಭಾಷೆಗಳನ್ನು ಹೊರತುಪಡಿಸಿ, ಮನ್ ಕಿ ಬಾತ್ ಅನ್ನು ಫ್ರೆಂಚ್, ಚೈನೀಸ್, ಇಂಡೋನೇಷಿಯನ್, ಟಿಬೆಟಿಯನ್, ಬರ್ಮೀಸ್, ಬಲೂಚಿ, ಅರೇಬಿಕ್, ಪಶ್ತು, ಪರ್ಷಿಯನ್, ದರಿ ಮತ್ತು ಸ್ವಾಹಿಲಿ ಸೇರಿದಂತೆ 11 ವಿದೇಶಿ ಭಾಷೆಗಳಲ್ಲಿ ಪ್ರಸಾರ ಮಾಡಲಾಗುತ್ತದೆ. (ಏಜೆನ್ಸೀಸ್​​)

    ಕುತ್ತಿಗೆ ಭಾಗದಲ್ಲಿನ ಕೊಬ್ಬನ್ನು ಕಡಿಮೆ ಮಾಡಬೇಕೇ; ಈ ಯೋಗಾಸನಗಳನ್ನು ಮಾಡಿ ರಿಸಲ್ಟ್​ ನೀವೆ ನೋಡಿ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts