More

    T20 World Cup: ಚಾಂಪಿಯನ್‌ ಭಾರತಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ

    ನವದೆಹಲಿ: ಟಿ20 ವಿಶ್ವಕಪ್​ನ ರೋಚಕ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸಿ ಬರೋಬ್ಬರಿ 17 ವರ್ಷಗಳ ಬಳಿಕ ವಿಶ್ವಕಪ್ ಗೆದ್ದು ಇತಿಹಾಸ ನಿರ್ಮಿಸಿದ ಟೀಂ ಇಂಡಿಯಾಯಕ್ಕೆ ಪ್ರಧಾನಿ ಮೋದಿ ಅವರು ಶನಿವಾರ ರಾತ್ರಿ 11.40ರ ವೇಳೆಗೆ ಲೈವ್​ ಬಂದು ಅಭಿನಂದನೆ ಸಲ್ಲಿಸಿದ್ದಾರೆ.

    ಇದನ್ನೂ ಓದಿ: ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿರಾಟ್​ ಕೊಹ್ಲಿ ವಿದಾಯ

    ಈ ಗೆಲುವಿನಿಂದ ಭಾರತದ ಗಲ್ಲಿ ಗಲ್ಲಿಗಳಲ್ಲಿ 140 ಕೋಟಿ ಭಾರತೀಯರು ಸಂಭ್ರಮಿಸಿಸುತ್ತಿದ್ದಾರೆ. ಈ ಸರಣಿಯಲ್ಲಿ ಒಂದು ಪಂದ್ಯವನ್ನು ಸೋಲದೆ ಪ್ರಶಸ್ತಿ ಗೆದ್ದಿರುವುದು ಸಣ್ಣ ಸಾಧನೆಯಲ್ಲ. ನಾನು ತಂಡದ ಪ್ರತಿಯೊಬ್ಬ ಆಟಗಾರ ಮತ್ತು ಸದಸ್ಯರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಪ್ರಧಾನಿ ಮೋದಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

    ವಿರಾಟ್ ಕೊಹ್ಲಿಯ ಅಬ್ಬರದ ಅರ್ಧಶತಕ ಹಾಗೂ ಆಲ್​ರೌಂಡರ್ ಅಕ್ಷರ್ ಪಟೇಲ್​ ಅವರ ಸ್ಫೋಟಕ ಬ್ಯಾಟಿಂಗ್​ ನೆರವು ಹಾಗೂ ಕೊನೇ ಕ್ಷಣದ ರೋಚಕ ಹೋರಾಟ ಫಲವಾಗಿ ಭಾರತ ತಂಡ ವಿಶ್ವಕಪ್​ ಗೆದ್ದು ಬೀಗಿದೆ.

    ಫೈನಲ್​ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 7 ರನ್​ಗಳ ರೋಚಕ ಗೆಲುವು ದಾಖಲಿಸಿ ಟ್ರೋಫಿ ಮುಡಿಗೇರಿಸಿಕೊಂಡಿತು. ಭಾರತದ ಪಾಲಿಗೆ ಇದು ಸ್ಮರಣೀಯ ಟ್ರೋಫಿ. ಹಿರಿಯ ಆಟಗಾರರಾದ ರೋಹಿತ್​ ಶರ್ಮಾ ಹಾಗೂ ವಿರಾಟ್​ ಕೊಹ್ಲಿಗೆ ಅಪೇಕ್ಷಿತ ಚಾಂಪಿಯನ್ ಪಟ್ಟ. ಅತ್ತ ದಕ್ಷಿಣ ಆಫ್ರಿಕಾ ತಂಡ ತನ್ನ ಚೋಕರ್ಸ್​ ಹಣೆಪಟ್ಟಿಯನ್ನು ಮತ್ತಷ್ಟು ದಿನ ಕಟ್ಟಿಕೊಳ್ಳುವಂತಾಯಿತು. 4 ದಶಕಗಳ ತನ್ನ ವಿಶ್ವ ಕಪ್​ ಅಭಿಯಾನದಲ್ಲಿ ಒಂದೇ ಒಂದು ಟ್ರೋಫಿ ಗೆಲ್ಲಲು ಸಾಧ್ಯವಾಗದೇ ನಿರಾಸೆ ಎದುರಿಸಿತು.

     

    T20 World Cup: 2ನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts