More

    ಪೋಕ್ಸೋ ಪ್ರಕರಣ, ಎಫ್‌ಐಆರ್ ರದ್ದು ಕೋರಿ ಬಿಎಸ್‌ವೈ ಅರ್ಜಿ : ವಿಚಾರಣೆ ಮುಂದೂಡಿದ ಹೈಕೋರ್ಟ್

    ಬೆಂಗಳೂರು: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ರದ್ದು ಕೋರಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಸರ್ಕಾರ ಆಕ್ಷೇಪ ಸಲ್ಲಿಸಲು ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ಹೈಕೋರ್ಟ್ ವಿಚಾರಣೆಯನ್ನು ಮುಂದೂಡಿದೆ.

    ಪೋಕ್ಸೋ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಹಾಗೂ ಪ್ರಕರಣ ರದ್ದು ಕೋರಿ ಯಡಿಯೂರಪ್ಪ ಸಲ್ಲಿಸಿದ ಎರಡು ಪ್ರತ್ಯೇಕ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

    ಈ ವೇಳೆ ಸರ್ಕಾರ ಪರ ವಕೀಲರು, ಪ್ರಕರಣ ಸಂಬಂಧ ತನಿಖಾಧಿಕಾರಿಗಳು ಈಗಾಗಲೇ ವಿಚಾರಣಾ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ಅಲ್ಲದೆ, ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಬೇಕಾಗಿದ್ದು, ಮತ್ತಷ್ಟು ಕಾಲಾವಕಾಶ ನೀಡಬೇಕು ಎಂದು ಕೋರಿದರು. ಈ ಅಂಶವನ್ನು ನ್ಯಾಯಪೀಠ ಪರಿಗಣಿಸಿದೆ.

    ಸಂತ್ರಸ್ತೆಯ ಸಹೋದರ ಶಶಾಂಕ್ ಸಿಂಗ್ ಪರ ವಕೀಲ ಎಸ್. ಬಾಲನ್ ಅವರು ಯಡಿಯೂರಪ್ಪರನ್ನು ಬಂಧಿಸಿ ವಿಚಾರಣೆ ನಡೆಸಬೇಕು ಎಂದು ಕೋರಿರುವ ಅರ್ಜಿಗೆ ಪೂರಕವಾಗಿ, ಕಂತಿನಲ್ಲಿ ವಿಚಾರಣೆ ನಡೆಸಲಾಗದು ಎಂದು ಪೀಠ ಹೇಳಿತು. ಇದಕ್ಕೆ ಮುಂದಿನ ವಿಚಾರಣೆ ವೇಳೆಗೆ ತೀರ್ಪುಗಳನ್ನು ಸಲ್ಲಿಸಲಾಗುವುದು ಎಂದು ವಕೀಲರು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts