More

    ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊಂಡ : ಮಳೆಗೆ ಕಿತ್ತುಹೋದ ಡಾಂಬರು ; ಸವಾರರಿಗೆ ಅಪಾಯ

    ವಿಜಯವಾಣಿ ಸುದ್ದಿಜಾಲ ಗಂಗೊಳ್ಳಿ

    ಕಳೆದ ಕೆಲದಿನಗಳಿಂದ ಸುರಿಯುತ್ತಿರುವ ಮಳೆಗೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹೊಂಡ ಗುಂಡಿ ನಿರ್ಮಾಣವಾಗಿದೆ. ಕುಂದಾಪುರದಿಂದ ಮರವಂತೆ ತನಕ ಹೊಸದಾಗಿ ನಿರ್ಮಾಣಗೊಂಡಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆಗಾಲ ಪೂರ್ವದಲ್ಲಿ ಹೊಂಡ ಬಿದ್ದ ಕಡೆ ಹೊಂಡಗಳನ್ನು ಅವೈಜ್ಞಾನಿಕವಾಗಿ ಮುಚ್ಚಿ ತೇಪೆ ಹಾಕುವ ಕೆಲಸ ಮಾತ್ರ ನಡೆದಿದ್ದರೆ, ಕೆಲವು ಕಡೆಗಳಲ್ಲಿ ಸುಮಾರು 100-150 ಮೀಟರ್ ಮರುಡಾಂಬರು ಕಾಮಗಾರಿ ನಡೆಸಲಾಗಿತ್ತು. ಇದೀಗ ಒಂದೇ ಮಳೆಗೆ ರಾಷ್ಟ್ರೀಯ ಹೆದ್ದಾರಿ ಜರ್ಜರಿತವಾಗಿದ್ದು, ಹಾಕಿರುವ ಡಾಂಬರು ಕಿತ್ತುಹೋಗಿ ಮತ್ತೆ ಹೊಂಡ ಕಾಣಿಸಿಕೊಂಡಿದೆ.

    ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಣಿಸಿಕೊಂಡಿರುವ ಹೊಂಡಗಳು ಅಪಾಯಕಾರಿಯಾಗಿದ್ದು, ದ್ವಿಚಕ್ರ ವಾಹನ ಸವಾರರು ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕಾದ ಅನಿವಾರ್ಯತೆ ಇದೆ. ಲಘು ಮತ್ತು ಭಾರಿ ವಾಹನಗಳು ಹೊಂಡಗಳನ್ನು ತಪ್ಪಿಸುವ ಭರದಲ್ಲಿ ಅಪಘಾತವಾಗುವ ಸಾಧ್ಯತೆ ಅಲ್ಲಗಳೆಯುವಂತಿಲ್ಲ. ಹೆದ್ದಾರಿ ಗುಂಡಿಗಳಿಂದ ಅನೇಕ ಅಪಘಾತ ನಡೆದ ನಿದರ್ಶನಗಳಿದ್ದು, ಚತುಷ್ಪಥಗೊಂಡ ಬಳಿಕವೂ ಅದೇ ಸ್ಥಳದಲ್ಲಿ ಮತ್ತೆ ಹೊಂಡ ಉದ್ಭವಿಸುತ್ತಿರುವುದು ರಾಷ್ಟ್ರೀಯ ಹೆದ್ದಾರಿಯ ಗುಣಮಟ್ಟವನ್ನು ಪ್ರಶ್ನಿಸುವಂತಾಗಿದೆ. ಸಮಸ್ಯೆಗಳ ಬಗ್ಗೆ ಕಳೆದ ಅನೇಕ ವರ್ಷಗಳಿಂದ ಗಮನ ಸೆಳೆಯಲಾಗಿದ್ದರೂ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸಮಸ್ಯೆ ಸರಿಪಡಿಸುವ ಗೋಜಿಗೆ ಹೋಗಿಲ್ಲ ಎಂಬ ಆರೋಪ ಕೇಳಿ ಬರುತ್ತಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts