More

    ಹಾಲಿನ ದರ ಹೆಚ್ಚಳ ವಿರೋಧಿಸಿ ಪ್ರತಿಭಟನೆ

    ಶಿರಸಿ: ಒಂದೊಂದೇ ವಸ್ತುಗಳ ದರ ಏರಿಸುತ್ತ ಸಾಗಿರುವ ರಾಜ್ಯ ಸರ್ಕಾರ ಈಗ ಹಾಲಿನ ದರವನ್ನೂ ಏರಿಕೆ ಮಾಡಿದೆ. ಏರಿಕೆಯ ಲಾಭವನ್ನು ರೈತರಿಗೆ ನೀಡದೇ ಸರ್ಕಾರದ ಬೊಕ್ಕಸಕ್ಕೆ ಪಡೆಯುತ್ತಿರುವ ಕ್ರಮವನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

    ನಗರದ ಉಪವಿಭಾಗಾಧಿಕಾರಿ ಕಚೇರಿ ಎದರು ಪ್ರತಿಭಟನೆ ನಡೆಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೊಷಣೆ ಕೂಗಿದರು.

    ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಹೆಗಡೆ ಹರ್ತೆಬೈಲ್ ಮಾತನಾಡಿ, ದಿನಬೆಳಗಾದರೆ ಸರ್ಕಾರ ಯಾವುದರ ಬೆಲೆ ಹೆಚ್ಚಳ ಮಾಡಿದೆ ಎಂದು ನೋಡುವಂತಾಗಿದೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ, ನೋಂದಣಿ ಮತ್ತು ಮುದ್ರಾಂಕ ಶುಲ್ಕ ಹೆಚ್ಚಳ ಹೀಗೆ ಬೆಲೆ ಏರಿಸುವುದೇ ಸರ್ಕಾರದ ಕೆಲಸ ಎಂದು ಕಾಂಗ್ರೆಸ್ ಭಾವಿಸಿದಂತಿದೆ. ಜುಲೈ ಮೂರರಂದು ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ನೇತೃತ್ವದಲ್ಲಿ ರಾಜ್ಯದ ಶಾಸಕರು, ವಿಧಾನ ಪರಿಷತ್ ಸದಸ್ಯರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಿದ್ದೇವೆ ಎಂದರು.

    ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷ ಅನಂತಮೂರ್ತಿ ಹೆಗಡೆ, ರೈತ ಮೋರ್ಚಾ ಅಧ್ಯಕ್ಷ ರಮೇಶ ನಾಯ್ಕ, ನಗರ ಮಂಡಲ ಅಧ್ಯಕ್ಷ ಆನಂದ ಸಾಲೇರ, ಗ್ರಾಮೀಣ ಮಂಡಲ ಅಧ್ಯಕ್ಷೆ ಉಷಾ ಹೆಗಡೆ ಮಾತನಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಶಾಂತ ನಾಯ್ಕ, ಬಸಣ್ಣ ಕುರುಬರಗಟ್ಟಿ, ಗಣೇಶ ಸಣ್ಣಲಿಂಗಣ್ಣವರ್, ಆರ್.ಡಿ. ಹೆಗಡೆ ಇತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts