More

    ಗೋಲ್ಮಾಲ್ ಸಿಎಂ 4,000 ಕೋಟಿ ರೂ. ಗುಳುಂ: ರಾಜ್ಯ ಸರ್ಕಾರ ವಿರುದ್ಧ ಆರ್​. ಅಶೋಕ ಗರಂ

    ಬೆಂಗಳೂರು: ಇಂದಿನ ‘ವಿಜಯವಾಣಿ’ ಸುದ್ದಿ ಪತ್ರಿಕೆಯ ಮುಖಪುಟದಲ್ಲಿ ಪ್ರಕಟಿಸಲಾದ ವರದಿ ಉಲ್ಲೇಖಿಸಿ ಮಾತನಾಡಿರುವ ವಿಪಕ್ಷ ನಾಯಕ ಆರ್​. ಅಶೋಕ, ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂಪಾಯಿ ದಲಿತರ ಹಣವನ್ನು ಗುಳುಂ ಮಾಡಿರುವ ‘ಸಿದ್ಧ’ಹಸ್ತರು ಈಗ ಮೈಸೂರಿನ ಮುಡಾದಲ್ಲಿ 4,000 ಕೋಟಿ ರೂ. ಗುಳುಂ ಮಾಡುವ ಮೂಲಕ ಮತ್ತೊಮ್ಮೆ ತಮ್ಮ ‘ಕೈ’ಚಳಕ ಪ್ರದರ್ಶನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

    ಇದನ್ನೂ ಓದಿ: ಪುತ್ರನ ಮದ್ವೆ ಖುಷಿಯಲ್ಲಿದ್ದ ಮದ್ಯದ ದೊರೆಗೆ ಮತ್ತೊಂದು ಆಘಾತ! ವಿಜಯ್ ಮಲ್ಯಗೆ ಬಂಧನ ವಾರೆಂಟ್​

    ಈ ಕುರಿತು ತಮ್ಮ ಅಧಿಕೃತ ಎಕ್ಸ್​ (ಈ ಹಿಂದಿನ ಟ್ವಿಟರ್​) ಖಾತೆಯಲ್ಲಿ ಗೋಲ್ಮಾಲ್ ಸಿಎಂ ಸಿದ್ದರಾಮಯ್ಯನವರೇ, ಈ ಪ್ರಶ್ನೆಗಳಿಗೆ ನಿಮ್ಮ ಬಳಿ ಉತ್ತರವಿದೆಯೇ? ಎಂದು ಸರಣಿ ಪ್ರಶ್ನೆಗಳನ್ನು ಕೇಳಿದ್ದಾರೆ.

    1.) ಗೋಲ್ಮಾಲ್ ಸಿಎಂ ತಮ್ಮ ಧರ್ಮ ಪತ್ನಿ ಅವರ ಹೆಸರಿನಲ್ಲೂ ನಿಯಮ ಬಾಹಿರವಾಗಿ ನಿವೇಶನ ವರ್ಗಾವಣೆಯಾಗಿರುವ ಸುದ್ದಿ ಹೊರಬಂದಿದೆಯಲ್ಲ ಇದನ್ನು ಹೇಗೆ ಸಮರ್ಥನೆ ಮಾಡಿಕೊಳ್ಳುತ್ತೀರಿ?

    2.) ಆರೋಪ ಕೇಳಿಬಂದಿರುವ ಮುಡಾ ಅಧಿಕಾರಿಗಳನ್ನು ಅಮಾನತು ಮಾಡದೆ, ಕೇವಲ ವರ್ಗಾವಣೆ ಮಾಡಿ ಕೈತೊಳೆದುಕೊಂಡಿದ್ದೀರಲ್ಲ, ಯಾರನ್ನು ರಕ್ಷಣೆ ಮಾಡಲು ಹೊರಟಿದ್ದೀರಿ?

    ಇದನ್ನೂ ಓದಿ: ‘ಮಾಣಿಕ್ಯ’ ನಟಿ ವರಲಕ್ಷ್ಮಿ ಶರತ್‌ ಕುಮಾರ್‌ ಥೈಲ್ಯಾಂಡ್‌ನಲ್ಲಿ ಮದುವೆ ಆಗ್ತಿರುವುದು ಯಾಕೆ ಗೊತ್ತಾ?

    3.) 4,000 ಕೋಟಿ ರೂಪಾಯಿ ಮೌಲ್ಯದ ಈ ಬ್ರಹ್ಮಾಂಡ ಭ್ರಷ್ಟಾಚಾರ ಪ್ರಕರಣವನ್ನು ಅಸಲಿಗೆ ಸಿಬಿಐಗೆ ವಹಿಸಬೇಕು ಅಥವಾ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ತನಿಖಾ ಆಯೋಗಕ್ಕೆ ನೀಡಬೇಕು. ಅದು ಬಿಟ್ಟು ತನಿಖೆಗೆ ಇಬ್ಬರು ಐಎಎಸ್ ಅಧಿಕಾರಿಗಳನ್ನು ನೇಮಿಸಿ ಕೇಸ್​ನ ಮುಚ್ಚಿಹಾಕಲು ಹೊರಟಿದ್ದೀರಲ್ಲ ಈ ಹಗರಣದಲ್ಲಿ ತಮ್ಮ ಪಾಲೆಷ್ಟು?

    4.) 50:50 ಅನುಪಾತ ಹಂಚಿಕೆಗೆ ಅನುಮತಿ ನೀಡಿದ್ದು ಯಾರು?

    5.) ಪರ್ಯಾಯ ನಿವೇಶನ ನೀಡುವಾಗ ಅದೇ ಬಡಾವಣೆ ಬಿಟ್ಟು ಲಾಭದ ಬಡಾವಣೆಗಳಲ್ಲಿ ಅವಕಾಶಕ್ಕೆ ಶಿಫಾರಸ್ಸು ಮಾಡಿದ್ದು ಯಾರು?

    ಇದನ್ನೂ ಓದಿ: ನಮ್ಮನ್ನು ಬಿಟ್ಟು ಹೋಗಬೇಡಿ ಸರ್…ವಿದ್ಯಾರ್ಥಿಗಳ ಪ್ರೀತಿಗೆ ಶಿಕ್ಷಕ ಭಾವುಕ

    6.) ಸಚಿವ ಸಂಪುಟದ ಅನುಮತಿ ಪಡೆಯದೆ ಮನಸ್ಸಿಗೆ ಬಂದಂತೆ ನಿವೇಶನ ನೀಡಲು ಅನುಮತಿ ನೀಡಿದ್ದು ಯಾರು?

    7.) ನಿಮ್ಮ ತವರು ಜಿಲ್ಲೆಯಲ್ಲಿ, ಸ್ವಂತ ಊರಿನಲ್ಲಿ, ತಮ್ಮ ಆಪ್ತ ಸಚಿವರ ಇಲಾಖೆಯಲ್ಲಿ, ಇಂಥದ್ದೊಂದು ಬೃಹತ್ ಹಗರಣ ತಮ್ಮ ಗಮನಕ್ಕೆ ಬಾರದೆ, ತಮ್ಮ ಕೈವಾಡವಿಲ್ಲದೆ ನಡೆಯಲು ಸಾಧ್ಯವೇ? ಎಂದು ಪ್ರಶ್ನಿಸಿದ್ದಾರೆ.

    ಅಂದು ಅವಮಾನ ಇಂದು ಸನ್ಮಾನ: ಇದಕ್ಕೆ ಹೇಳೋದು… ಹಾರ್ದಿಕ್​ಗೆ ಫ್ಯಾನ್ಸ್ ಕೊಟ್ಟ ಸಂದೇಶವಿದು!

    ಸಿನಿಮಾ

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_sticky', [[320, 50], [300, 50]], 'div-gpt-ad- 1719903699617-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_sticky --> <div id='div-gpt-ad-1719903699617-0' style='min-width: 300px; min-height: 50px;'> <script> googletag.cmd.push(function() { googletag.display('div-gpt-ad-1719903699617-0'); }); </script> </div>

    ಲೈಫ್‌ಸ್ಟೈಲ್

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_AP_300x250', [[300, 50], [250, 250], [300, 250], [200, 200]], 'div-gpt-ad-1719903811902-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_AP_300x250 --> <div id='div-gpt-ad-1719903811902-0' style='min-width: 200px; min-height: 50px;'> <script> googletag.cmd.push(function() { googletag.display('div-gpt-ad-1719903811902-0'); }); </script> </div>

    ಟೆಕ್ನಾಲಜಿ

    Latest Posts