ತೋಟಗಳಿಗೆ ನುಗ್ಗಿದ ನೆರೆ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಘಟ್ಟ ಪ್ರದೇಶ, ಕುಮಾರಪರ್ವತ ಭಾಗಗಳಲ್ಲಿ ಬುಧವಾರ ರಾತ್ರಿಯಿಂದ ಗುರುವಾರ ತನಕವೂ ಸುರಿದ ಭಾರಿ ಮಳೆಗೆ ಕುಮಾರಧಾರಾ ಉಪನದಿ ದರ್ಪಣ ತೀರ್ಥ ಕೂಡ ತುಂಬಿ ಹರಿಯುತ್ತಿದೆ. ಇದರಿಂದಾಗಿ ಈ ನದಿ ಪರಿಸರದ ಕೃಷಿ ತೋಟಗಳಿಗೆ ನದಿ ನೀರು ನುಗ್ಗಿದೆ. ಗ್ರಾಮೀಣ ಭಾಗಳಾದ ಹರಿಹರ ಪಲ್ಲತ್ತಡ್ಕ, ಕೊಲ್ಲಮೊಗ್ರು, ಕಲ್ಮಕಾರು, ಬಾಳುಗೋಡು, ಗುತ್ತಿಗಾರು, ಪಂಜ, ಅಲೆಕ್ಕಾಡಿ, ನಿಂತಿಕಲ್ಲು, ನೆಟ್ಟಣ, ಬಿಳಿನೆಲೆ ಭಾಗದಲ್ಲಿ ಭಾರಿ ಮಳೆಯಾಗಿದೆ. ಇದರಿಂದ ಈ ಭಾಗದ ನದಿ, ತೊರೆಗಳು ತುಂಬಿ ಹರಿಯುತ್ತಿದೆ.