More

    ರಾಣೆಬೆನ್ನೂರು: ಪತ್ನಿ ಕೊಲೆಗೈದ ಆರೋಪಿ ಪತಿಗೆ ಜೀವಾವಧಿ ಶಿಕ್ಷೆ

    ರಾಣೆಬೆನ್ನೂರು: ಖರ್ಚಿಗೆ ಹಣ ಕೊಡಲಿಲ್ಲವೆಂದು ಚಾಕೂವಿನಿಂದ ಪತ್ನಿಯ ಕುತ್ತಿಗೆ ಕೊಯ್ದು ಕೊಲೆಗೈದ ಪತಿಗೆ 90 ಸಾವಿರ ರೂ. ದಂಡ ಹಾಗೂ ಜೀವಾವಧಿ ಶಿಕ್ಷೆ ವಿಧಿಸಿ ಇಲ್ಲಿಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮಧುಸೂದನರಾಮ್ ಕೆ.ವಿ. ಮಂಗಳವಾರ ತೀರ್ಪು ನೀಡಿ ಆದೇಶಿಸಿದ್ದಾರೆ.

    ಇದನ್ನೂ ಓದಿ: ನವದೆಹಲಿ: ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಭೇಟಿಯಾದ ಪ್ರಧಾನಿ ಮೋದಿ!

    ಶಿವಮೊಗ್ಗ ಜಿಲ್ಲೆ ನ್ಯಾಮತಿ ತಾಲೂಕಿನ ಸುರಹೊನ್ನಿ ಗ್ರಾಮದ ನಾಗರಾಜ ನೀಲಕಂಠಪ್ಪ (42) ಶಿಕ್ಷೆಗೊಳಗಾದ ಅಪರಾಧಿ.

    ಈತ ನಿತ್ಯ ಮದ್ಯ ಸೇವಿಸಿ ಬಂದು ಪತ್ನಿ ಶೈಲಜಾಗೆ ಮಾನಸಿಕ ಹಾಗೂ ದೈಹಿಕವಾಗಿ ಕಿರುಕುಳ ಕೊಡುತ್ತಿದ್ದ. ಇದರಿಂದ ಬೇಸತ್ತ ಶೈಲಜಾ ಸುರಹೊನ್ನಿ ಗ್ರಾಮ ಬಿಟ್ಟು ಬಂದು ನಗರದಲ್ಲಿ ಮನೆ ಮಾಡಿಕೊಂಡಿದ್ದಳು. ಸ್ವಲ್ಪ ದಿನದ ಬಳಿಕ ನಾಗರಾಜ ಕೂಡ ಇಲ್ಲಿಯೆ ಬಂದು ಉಳಿದುಕೊಂಡಿದ್ದ. 2018 ಆಗಸ್ಟ್ 25ರಂದು ಪತ್ನಿ ಬಳಿ ಖರ್ಚಿಗಾಗಿ ಹಣ ಕೊಡು ಅಂತಾ ಜಗಳ ತೆಗೆದ ನಾಗರಾಜ ಆಕೆ ಹಣ ನೀಡದ ಕಾರಣಕ್ಕೆ ಚಾಕೂವಿನಿಂದ ಕುತ್ತಿಗೆ ಕೊಯ್ದು ಕೊಲೆ ಮಾಡಿದ್ದ.

    ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಿಪಿಐ ಮಂಜುನಾಥ ನಲವಾಗಿಲ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಟ್ಟಿ ಸಲ್ಲಿಸಿದ್ದರು. ಸಾಕ್ಷಾೃಧಾರಗಳ ಸಮೇತ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಅಪರಾಧಿಗೆ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಮುರಗೇಶ ಅಂಕದ ವಾದ ಮಂಡಿಸಿದ್ದರು.

    ಜೂ.30ಕ್ಕೆ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡ ಉದ್ಘಾಟನೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts