More

    ರೇಣುಕಾ ಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಸೇರಿ ಎಲ್ಲ ಆರೋಪಿಗಳಿಗೆ 6 ದಿನ ಪೊಲೀಸ್ ಕಸ್ಟಡಿ

    ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್‌, ಪವಿತ್ರಾ ಗೌಡ ಸೇರಿ 13 ಆರೋಪಿಗಳನ್ನು 6 ದಿನ ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ.

    ಬೌರಿಂಗ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಬಳಿಕ ಆರೋಪಿಗಳನ್ನು ಮಂಗಳವಾರ ಸಂಜೆ ಕೋರಮಂಗಲದ 24ನೇ ಎಸಿಎಂಎಂ ಕೋರ್ಟ್‌ನ ನ್ಯಾಯಾಧೀಶ ವಿಶ್ವನಾಥ್ ಸಿ ಗೌಡರ್ ಅವರ ಮುಂದೆ ಹಾಜರುಪಡಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಬಳಿಕ ಆರೋಪಿಗಳನ್ನು ಆರು ದಿನಗಳ ಕಸ್ಟಡಿ ನೀಡಿ ನ್ಯಾಯಾಧೀಶರಾದ ವಿಶ್ವನಾಥ್ ಸಿ ಗೌಡರ್ ಅವರು ಆದೇಶ ನೀಡಿದ್ದಾರೆ. ಅರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದಿಂದ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ನೀಡಲಾಗಿದೆ.

    ಇದನ್ನೂ ಓದಿ: ವೈದ್ಯಕೀಯ ಪರೀಕ್ಷೆ ಹಿನ್ನೆಲೆ ಶಿವಾಜಿನಗರದ ಬೌರಿಂಗ್‌ ಆಸ್ಪತ್ರೆಗೆ ನಟ ದರ್ಶನ್ ಅಂಡ್​ ಗ್ಯಾಂಗ್​!

    ಜಡ್ಜ್​ ಎದುರು ನಟ ದರ್ಶನ್, ಆಪ್ತೆ ಪವಿತ್ರಾ ಗೌಡ ಕಣ್ಣೀರು: ಚಿತ್ರದುರ್ಗದ ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣದ ಆರೋಪ ಹೊತ್ತಿರುವ ನಟ ದರ್ಶನ್​ ಕಣ್ಣೀರು ಹಾಕಿದ್ದಾರೆ. ನಾನು ತಪ್ಪು ಮಾಡಿಲ್ಲ, ನಾನು ಈ ಕೊಲೆ ಪ್ರಕರಣದಲ್ಲಿ ಇಲ್ಲ, ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ ಅಂತ ನ್ಯಾಯಾಧೀಶರೆದುರೇ ದರ್ಶನ್​ ಕಣ್ಣೀರು ಸುರಿಸಿದ್ದಾರಂತೆ!. ಈ ವೇಳೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರು ಕಣ್ಣೀರು ಸುರಿಸಿದ್ದಾರೆ ಎನ್ನಲಾಗಿದೆ.

    ಕೈಕಟ್ಟಿ ತಲೆ ತಗ್ಗಿಸಿ ನಿಂತ ನಟ ದರ್ಶನ್​: ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್ ಹಾಗೂ ಸಹಚರರು ಕೋರ್ಟ್ ಹಾಲ್ ನಲ್ಲಿ ಕೈ ಕಟ್ಟಿ ತಲೆ ತಗ್ಗಿಸಿ ನಿಂತಿದ್ದರು. ನಿಮ್ಮನ್ನ ಯಾವಾಗ ಬಂಧನ ಮಾಡಿದರು? ಅಂತ ದರ್ಶನ್​ಗೆ ನ್ಯಾಯಾಧೀಶರು ಕೇಳಿದ್ದಾರೆ. ಅರೆಸ್ಟ್ ಆಗಿದ್ದರ ಬಗ್ಗೆ ಮನೆಯವರಿಗೆ ಮಾಹಿತಿ ಕೊಟ್ರಾ? ವಕೀಲರನ್ನು ನೇಮಿಸಕೊಂಡ್ರಾ? ಪೊಲೀಸರು ಏನಾದ್ರೂ ತೊಂದರೆ ಕೊಟ್ರಾ ಎನ್ನುವ ಹಲವು ಪ್ರಶ್ನೆಗಳನ್ನು ಕೇಳಲಾಗಿದೆ. ಪೊಲೀಸರು ದರ್ಶನ್ ಹಾಗೂ ಇತರ ಆರೋಪಿಗಳನ್ನು 14 ದಿನ ಕಸ್ಟಡಿಗೆ ಕೊಡುವಂತೆ ಕೇಳಿದ್ದರು.

    ಜಡ್ಜ್​ ಮುಂದೆ ಹಾಜರುಪಡಿಸಿದಾಗ ಕಸ್ಟಡಿಗೆ ಕೇಳಲು ರಿಮ್ಯಾಂಡ್ ಅರ್ಜಿಯನ್ನು ಪೊಲೀಸರು ಸಲ್ಲಿಸಿದ್ದರು. ಪೊಲೀಸರ ಪರ ಸರ್ಕಾರಿ ಅಭಿಯೋಜಕ ವಾದ ಮಂಡಿಸಿ, ಸಾಕ್ಷ್ಯಗಳ ನಾಶ ಆಗಿರುವುದರಿಂದ ಎ2 ದರ್ಶನ್‌ ಅವರನ್ನು 14 ದಿನ ಕಸ್ಟಡಿಗೆ ನೀಡುವಂತೆ ಕೋರಿದರು. ಆದರೆ, ದರ್ಶನ್‌ ಪರ ವಕೀಲ 14 ದಿನ ಯಾಕೆ ಎಂದು ಪ್ರಶ್ನಿಸಿದರು. ಈಗಾಗಲೇ ದರ್ಶನ್‌ ಮೊಬೈಲ್‌ ಸೀಜ್‌ ಆಗಿದೆ, ದರ್ಶನ್‌ ಅವರ ತೇಜೋವಧೆ ಮಾಡಲು ಈ ರೀತಿ ಮಾಡಲಾಗುತ್ತಿದೆ ಹೇಳಿದರು.

    ನಟನೆ, ಸಿನಿಮಾಗಳ ಜತೆಗೆ ವಿವಾದಗಳಿಂದಲೂ ಹೆಚ್ಚು ಸುದ್ದಿಯಲ್ಲಿರುವ ಸ್ಯಾಂಡಲ್‌ವುಡ್‌ ನಟ ದರ್ಶನ್‌ ಅವರೀಗ ಗಂಭೀರ ಪ್ರಕರಣಗಳಲ್ಲಿ ಸಿಲುಕಿಕೊಂಡಿದ್ದಾರೆ. ಗೆಳತಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಮೆಸೇಜ್‌ ಕಳುಹಿಸಿದ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿ ಎಂಬ 28 ವರ್ಷದ ಯುವಕನ ಕೊಲೆ ಪ್ರಕರಣದಲ್ಲಿ ದರ್ಶನ್‌ ಅವರನ್ನು ಬಂಧಿಸಲಾಗಿದೆ. ಅಷ್ಟೇ ಅಲ್ಲ, ದರ್ಶನ್‌ ಅವರ ವಿರುದ್ಧ ಕೊಲೆ, ಅಪಹರಣ ಹಾಗೂ ಸಾಕ್ಷ್ಯನಾಶ ಪ್ರಕರಣಗಳ ಸಂಕಷ್ಟ ಎದುರಾಗಿದ್ದು, ಆರೋಪ ಸಾಬೀತಾದರೆ ಇವರಿಗೆ ಕಠಿಣ ಶಿಕ್ಷೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

    ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಕಿಡ್ನ್ಯಾಪ್‌ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐಪಿಸಿ ಸೆಕ್ಷನ್‌ 364ರ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಲಿದ್ದಾರೆ. ಇನ್ನು ಗೋಡೌನ್‌ನಲ್ಲಿ ಇರಿಸಿಕೊಂಡು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದು, ಇದಾದ ಬಳಿಕ ರೇಣುಕಾಸ್ವಾಮಿ ಮೃತಪಟ್ಟಿದ್ದಾನೆ. ಹಾಗಾಗಿ, ಐಪಿಸಿ ಸೆಕ್ಷನ್‌ 302ರ ಅಡಿಯಲ್ಲಿ ಕೇಸ್‌ ದಾಖಲಾಗಲಿದೆ. ಇನ್ನು ಹತ್ಯೆ ಬಳಿಕ ಶವವನ್ನು ಬಿಸಾಕಿದ ಕಾರಣ ಸಾಕ್ಷ್ಯ ನಾಶದ ಪ್ರಕರಣವನ್ನೂ ಸೇರಿಸಲಾಗುತ್ತದೆ. ಹಾಗಾಗಿ, ಯಾವ ಪ್ರಕರಣಗಳಲ್ಲಿ ಆರೋಪ ಸಾಬೀತಾದರೂ ದರ್ಶನ್‌ ಅವರಿಗೆ ಜೈಲು ಶಿಕ್ಷೆಯಾಗಲಿದೆ. ಕೊಲೆ ಕೇಸ್‌ನಲ್ಲಿ ಆರೋಪ ಸಾಬೀತಾದರಂತೂ ಜೀವಾವಧಿ ಶಿಕ್ಷೆಯಾಗುತ್ತದೆ ಎಂದು ಹೇಳಲಾಗುತ್ತಿದೆ.

    ರೇಣುಕಾ ಸ್ವಾಮಿ ಕೊಲೆ ಕೇಸ್‌: ಕೆಲ ಹೊತ್ತಲ್ಲೇ ಕೋರ್ಟ್​ ಮುಂದೆ ನಟ ದರ್ಶನ್​, ಪವಿತ್ರಾ ಗೌಡ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts