More

    ಪರಪ್ಪನ ಅಗ್ರಹಾರ ಜೈಲಿನಲ್ಲಿ ಪವಿತ್ರಾ ಫಸ್ಟ್​ ನೈಟ್​! ನಿದ್ದೆಯಿಲ್ಲದೇ ಇಡೀ ರಾತ್ರಿ ಚಡಪಡಿಸಿದ ದಚ್ಚು ಗೆಳತಿ

    ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿಯಾಗಿರುವ ಪವಿತ್ರಾ ಗೌಡಳನ್ನು ಪೊಲೀಸ್​ ಕಸ್ಟಡಿಯಿಂದ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನ್ಯಾಯಾಲಯ ಕಳುಹಿಸಿದೆ. ಸುದೀರ್ಘ 9 ದಿನಗಳ ಕಾಲ ಪೊಲೀಸರ ವಶದಲ್ಲಿದ್ದ ಪವಿತ್ರಾಳನ್ನು ನಿನ್ನೆ (ಜೂನ್​ 20) ಸಂಜೆಯಷ್ಟೇ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ.

    ಮೊದಲ ಬಾರಿಗೆ ಜೈಲು ಪ್ರವೇಶ ಮಾಡಿರುವ ಪವಿತ್ರಾ, ತಮ್ಮ ಮೊದಲ ರಾತ್ರಿಯಲ್ಲಿ ಸಾಕಷ್ಟು ಸಂಕಟ ಮತ್ತು ಚಡಪಡಿಕೆ ಅನುಭವಿಸಿದ್ದಾರೆ ಎಂದು ತಿಳಿದುಬಂದಿದೆ. ಸರಿಯಾಗಿ ಊಟ, ನಿದ್ದೆ ಮಾಡದೆ ಚಿಂತೆಯಲ್ಲಿ ಮುಳುಗಿದ್ದರು ಎಂದು ಹೇಳಲಾಗುತ್ತಿದೆ. ಪವಿತ್ರಾಗೆ ಜೈಲಿನಲ್ಲೂ ಡಿ ಬ್ಯಾರಕ್ ಕೊಠಡಿ ನೀಡಲಾಗಿದೆ. ಉಳಿದ ಆರೋಪಿಗಳನ್ನು ಜೈಲಿನ ಕ್ವಾರೆಂಟೈನ್ ಬ್ಯಾರಕ್​ಗೆ ಶಿಫ್ಟ್ ಮಾಡಲಾಗಿದೆ. ಆರೋಪಿಗಳಿಗೆ ವಿಚಾರಣಾಧೀನ ಕೈದಿ ನಂಬರ್​ ನೀಡಲಾಗಿದೆ. ಪವಿತ್ರಾ ಗೌಡ ಈಗ ಕೈದಿ ನಂಬರ್ 6024 ಆಗಿದ್ದಾರೆ.

    ನಟ ದರ್ಶನ್​ ಪರಿಚಯದ ಬಳಿಕ ಕಡಿಮೆ ಅವಧಿಯಲ್ಲಿ ಸಿರಿವಂತೆಯಾಗಿದ್ದ ಪವಿತ್ರಾ, ಐಷಾರಾಮಿ ಜೀವನವನ್ನು ನಡೆಸುತ್ತಿದ್ದರು. ಲಕ್ಸುರಿ ಬಂಗಲೆ, ದುಬಾರಿ ಕಾರು ಸೇರಿದಂತೆ ಅನೇಕ ಐಷಾರಾಮಿ ವಸ್ತುಗಳನ್ನು ಹೊಂದಿದ್ದರು. ಭರ್ಜರಿಯಾಗಿ ಜೀವನ ನಡೆಸುತ್ತಿದ್ದ ಪವಿತ್ರಾ, ಇದೀಗ ಜೈಲು ಪಾಲಾಗಿದ್ದು, ಸರಿಯಾಗಿ ನಿದ್ರೆ ಮಾಡಲಾಗದೇ ಜೈಲಿನಲ್ಲಿ ಪದೇಪದೆ ಎದ್ದು ಕುಳಿತುಕೊಳ್ಳುತ್ತಿದ್ದರು ಎಂದು ತಿಳಿದುಬಂದಿದೆ. ತುಂಬಾ ಚಡಪಡಿಸುತ್ತಿದ್ದರು ಎನ್ನಲಾಗಿದೆ.

    ಬೆಳಗ್ಗೆ 5 ಗಂಟೆಗೆ ಎದ್ದು ವಾಕಿಂಗ್​ ಮಾಡಿದ್ದಾರೆ. ಜೈಲು ಸಿಬ್ಬಂದಿ ಕೊಟ್ಟ ಕಾಫಿ ಕುಡಿದು, ಪತ್ರಿಕೆ ಓದಿ, ಬೆಳಗಿನ ತಿಂಡಿಗೆ ಉಪ್ಪಿಟ್ಟು ಸವಿದಿದ್ದಾರೆ. ಯಾರೊಂದಿಗೂ ಏನನ್ನು ಮಾತನಾಡದೇ ತಮ್ಮ ಮಹಿಳಾ ಬ್ಯಾರಕ್​ನಲ್ಲಿ ಪವಿತ್ರಾ ಮೌನಕ್ಕೆ ಜಾರಿದ್ದಾರೆ. ಕೋಪದ ಕೈಗೆ ಬುದ್ದಿ ಕೊಟ್ಟಿದ್ದರಿಂದ ಈ ಪರಿಸ್ಥಿತಿ ಬಂತಲ್ಲಾ ಎಂಬ ಚಿಂತೆಯಲ್ಲಿ ಮುಳುಗಿದ್ದಾರೆ.​

    ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದರ್ಶನ್​ ಮತ್ತು ಅವರ ಗ್ಯಾಂಗ್​ ಅನ್ನು ಕಳೆದ 10 ದಿನಗಳಿಂದ ವಿಚಾರಣೆ ನಡೆಸಿತ್ತು. ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ನಿನ್ನೆ ಪೊಲೀಸರು ಆರೋಪಿಗಳನ್ನು ನ್ಯಾಯಾಲಯದ ಎದುರು ಹಾಜರುಪಡಿಸಿತು. ದರ್ಶನ್​ ಹಾಗೂ ಸಹಚರರನ್ನು ಮತ್ತಷ್ಟು ವಿಚಾರಣೆ ನಡೆಸಬೇಕೆಂಬ ಪೊಲೀಸರ ಮನವಿಯನ್ನು ಪುರಷ್ಕರಿಸಿದ ನ್ಯಾಯಾಲಯ ದರ್ಶನ್​ ಸೇರಿದಂತೆ 6 ಆರೋಪಿಗಳನ್ನು ಪೊಲೀಸರ ವಶಕ್ಕೆ ನೀಡಿದ ಕೋರ್ಟ್​, ಪವಿತ್ರಾ ಗೌಡ ಸೇರಿದಂತೆ ಉಳಿದ ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದೆ.

    ನ್ಯಾಯಾಲಯವು ದರ್ಶನ್, ವಿನಯ್, ಪ್ರದೂಶ್, ಲಕ್ಷ್ಮಣ್, ಧನರಾಜ್, ನಾಗರಾಜ್‌ನನ್ನು ಪೊಲೀಸ್​ ಕಸ್ಟಡಿಗೆ ನೀಡಿದೆ. ಪ್ರಕರಣದ ಉಳಿದ ಆರೋಪಿಗಳನ್ನು ಜೈಲಿಗೆ ಸ್ಥಳಾಂತರಿಸಲಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಈ 6 ಜನರದ್ದೇ ದೊಡ್ಡ ಪಾತ್ರ ಇದೆ ಎಂದು ಆರೋಪ ಮಾಡಲಾಗಿತ್ತು. ಹೀಗಾಗಿ ಇವರನ್ನ 4 ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಬೇಕು ಎಂದು ಕೋರ್ಟ್‌ಗೆ ಮನವಿ ಮಾಡಿದ್ದರು. ವಾದ-ಪ್ರತಿವಾದವನ್ನು ಆಲಿಸಿದ ನ್ಯಾಯಾಲಯವು ಆರು ಆರೋಪಿಗಳ ಪೊಲೀಸ್​ ಕಸ್ಟಡಿಯನ್ನು 2 ದಿನಗಳವರೆಗೆ ಮಾತ್ರ ವಿಸ್ತರಿಸಿದೆ. ಉಳಿದ ಆರೋಪಿಗಳಾದ ಪವಿತ್ರಾ ಗೌಡ, ಪವನ್‌, ರಾಘವೇಂದ್ರ, ನಂದೀಶ್‌, ಜಗದೀಶ್‌, ಅನುಕುಮಾರ್‌, ರವಿಶಂಕರ್‌, ದೀಪಕ್‌, ಕೇಶವಮೂರ್ತಿ, ನಿಖಿಲ್ ನಾಯ್ಕ್‌ ಇವರಿಗೆ ನ್ಯಾಯಾಂಗ ಬಂಧನಕ್ಕೆ ತಕರಾರು ಸಲ್ಲಿಸಿಲ್ಲವಾದ್ದರಿಂದ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

    ಏನಿದು ಪ್ರಕರಣ?
    ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್​ ಮತ್ತು ಗೆಳತಿ ಪವಿತ್ರಾ ಗೌಡ ಅರೆಸ್ಟ್​ ಆಗಿರುವ ಸುದ್ದಿ ರಾಜ್ಯದೆಲ್ಲೆಡೆ ಭಾರಿ ಚರ್ಚೆಯಾಗುತ್ತಿದೆ. ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದಕ್ಕೆ ರೇಣುಕಸ್ವಾಮಿಯ ಕೊಲೆ ನಡೆದಿದೆ ಎನ್ನಲಾಗಿದೆ. ಇದರಲ್ಲಿ ದರ್ಶನ್​ ಕೈವಾಡ ಇದೆ. ದರ್ಶನ್​ ಸೂಚನೆ ಕೊಟ್ಟಿದ್ದಕ್ಕೆ ಹಲ್ಲೆ ಮಾಡಿದೆವು ಎಂದು ಬಂಧಿತ ಆರೋಪಿಗಳು ತಪ್ಪೊಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ದರ್ಶನ್​ರನ್ನು ಬಂಧಿಸಲಾಗಿದೆ. ಫೆಬ್ರವರಿ 27ರಿಂದ ದರ್ಶನ್​ ಗೆಳತಿ ಪವಿತ್ರಾ ಗೌಡಗೆ ರೇಣುಕಸ್ವಾಮಿ ಅಶ್ಲೀಲವಾಗಿ ಮೆಸೇಜ್ ಶುರು ಮಾಡಿದ್ದರು. ಅಕೌಂಟ್‌ ಬ್ಲಾಕ್‌ ಮಾಡಿದ್ದರೂ ಹೊಸ ಅಕೌಂಟ್‌ನಿಂದ ಮತ್ತದೇ ಮಸೇಜ್ ಕಳುಹಿಸುತ್ತಿದ್ದ. ಕಳೆದ ಶುಕ್ರವಾರ ಮರ್ಮಾಂಗದ ಫೋಟೋ ಕಳುಹಿಸಿ ‘ದರ್ಶನ್​ಗಿಂತ ನಾನೇನು ಕಡಿಮೆ ಬಾ’ ಎಂದು ಹೇಳಿದ್ದ. ಈ ರೀತಿಯ ಟಾರ್ಚರ್‌ ಸಹಿಸಿಕೊಳ್ಳಲಾಗದೇ ಪವಿತ್ರಾ ಅವರು ತಮ್ಮ ಮನೆಗೆಲಸದವ ಪವನ್​ಗೆ ಹೇಳಿದ್ದರು. ಈ ವಿಚಾರ ದರ್ಶನ್​ಗೆ ತಿಳಿದಿದೆ. ರೇಣುಕ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಣ ಮಾಡಿ ಕರೆದುಕೊಂಡು ಬಂದು ಶೆಡ್​ನಲ್ಲಿ ಇರಿಸಿಕೊಂಡು ಹಲ್ಲೆ ಮಾಡಿದ್ದ ದರ್ಶನ್ ಮತ್ತು ಗ್ಯಾಂಗ್​, ಹಲ್ಲೆಯಿಂದ ರೇಣುಕಸ್ವಾಮಿ ನಿಧನ ಹೊಂದಿದ ಬಳಿಕ ಆತಂಕಗೊಂಡು, ಶವವನ್ನು ಸಾಗಿಸುವ ದಾರಿ ಹುಡುಕಿದೆ. ಆಗ ಬೇರೆ ಗ್ಯಾಂಗ್ ಒಂದನ್ನು ಕರೆಸಿ ಅವರಿಗೆ ಶವ ಒಪ್ಪಿಸಿ, ಅದನ್ನು ವಿಲೇವಾರಿ ಮಾಡುವಂತೆ ಹೇಳಿ ಅವರಿಗೆ 30 ಲಕ್ಷ ರೂಪಾಯಿ ಹಣ ನೀಡಿದ್ದಾರೆ. ಈ ಹಣವನ್ನು ದರ್ಶನ್ ಅವರೇ ನೀಡಿದ್ದಾರೆ ಎನ್ನಲಾಗುತ್ತಿದೆ.

    ಹಣ ಪಡೆದ ಮತ್ತೊಂದು ಗ್ಯಾಂಗ್ ರೇಣುಕಾ ಸ್ವಾಮಿಯ ಶವವನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಮನಹಳ್ಳಿ ಮೋರಿಗೆ ಬಿಸಾಡಿ ಹೋಗಿದ್ದಾರೆ. ಶವ ದೊರೆತ ಬಳಿಕ ತಾವೇ ಕೊಲೆ ಮಾಡಿರುವುದಾಗಿ ಹೇಳಿ ಠಾಣೆಗೆ ಒಪ್ಪಿಕೊಂಡಿದ್ದಾರೆ. ಕೊಲೆ ಮಾಡಲು ಹಣಕಾಸಿನ ವಿಚಾರವೇ ಕಾರಣ ಎಂದು ಹೇಳಿದ್ದಾರೆ. ಆದರೆ ಒಬ್ಬೊಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆ ಮಾಡಿದಾಗ ಅವರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಿದೆ. ಬಳಿಕ ಪೊಲೀಸರು ತಮ್ಮದೇ ಶೈಲಿಯಲ್ಲಿ ವಿಚಾರಣೆ ಮಾಡಿದಾಗ ನಿಜಾಂಶ ಬಯಲಾಗಿದೆ. ಹಣ ಪಡೆದು ಶವ ವಿಲೇವಾರಿ ಜವಾಬ್ದಾರಿ ಹೊತ್ತಿದ್ದ ಗ್ಯಾಂಗ್, ದರ್ಶನ್​ರ ಆಪ್ತನೊಟ್ಟಿಗೆ ಸಂಪರ್ಕದಲ್ಲಿತ್ತಂತೆ. ಶವ ವಿಲೇವಾರಿ ಹಾಗೂ ಕೊಲೆಯ ಆರೋಪ ಹೊರಲೆಂದು ಮುಂಚಿತವಾಗಿಯೇ 30 ಲಕ್ಷ ರೂಪಾಯಿ ಹಣವನ್ನು ದರ್ಶನ್ ಅವರಿಂದ ಈ ಗ್ಯಾಂಗ್ ಪಡೆದಿತ್ತು ಎನ್ನಲಾಗಿದೆ.

    ಕೊಲೆ ಪ್ರಕರಣದಲ್ಲಿ ದರ್ಶನ್​ ಬಂಧನ: ನಟ ಶಿವರಾಜ್​ಕುಮಾರ್​ ವಿರುದ್ಧ ಪ್ರಶಾಂತ್​ ಸಂಬರಗಿ ಆಕ್ರೋಶ

    ನೀನೊಬ್ಬಳೇ ಬಾ ಏಕಾಂತದಲ್ಲಿ ಭೇಟಿಯಾಗೋಣ… ಖ್ಯಾತ ನಟನ ಮುಖವಾಡ ಕಳಚಿದ ಇಶಾ ಕೊಪ್ಪಿಕರ್!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts