More

    ಮೊಸಳೆಯೊಂದಿಗೆ ಕಾದಾಡಿ ಕೈ ಕಳೆದುಕೊಂಡ ಬಾಲಕನೊಂದಿಗೆ ವೈದ್ಯರ ಅಮಾನವೀಯ ವರ್ತನೆ; ವಿಡಿಯೋ ವೈರಲ್

    ಲಖನೌ: ಆಘಾತಕಾರಿ ಘಟನೆಯೊಂದರಲ್ಲಿ ಮೊಸಳೆ ದಾಳಿಗೆ ತುತ್ತಾಗು ಕೈ ಕಳೆದುಕೊಂಡ ಬಾಲಕನಿಗೆ ವೈದ್ಯರು ಬೆಂಚ್​ ಮೇಲೆ ಮಲಗಿಸಿ ಚಿಕಿತ್ಸೆ ನೀಡಿರುವ ಅಮಾನವೀಯ ಘಟನೆ ಉತ್ತರಪ್ರದೇಶದ ಲಖೀಂಪುರ್​ ಖೇರಿ ಜಿಲ್ಲೆಯಲ್ಲಿ ನಡೆದಿದೆ.

    ಆಸ್ಪತ್ರೆಯ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ರಾಜ್ಯ ಸರ್ಕಾರದ ವಿರುದ್ಧ ಜನ ಕಿಡಿಕಾರಿದ್ದಾರೆ. ಈ ಘಟನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಬಾಲಕನನ್ನು ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.

    ಸಂಕಿತ್​ ಕುಮಾರ್​ (11) ತನ್ನ ತಾಯಿಯೊಂದಿಗೆ ದನಗಳಿಗೆ ಮೇವು ತರಲು ಗ್ರಾಮದ ಹೊರವಲಯದಲ್ಲಿರುವ ಕೆರೆಯ ಬಳಿ ಹೋಗಿದ್ದ. ಈ ವೇಳೆ ಮೊಸಳೆ ಆತನ ಮೇಲೆ ದಾಳಿ ಮಾಡಿದ್ದು, ಇದನ್ನು ನೋಡಿದ ಆತನ ತಾಯಿ ಜೋರಾಗಿ ಕೂಗಿಕೊಂಡಿದ್ದಾರೆ. ಬಳಿಕ ಅಲ್ಲೇ ಇದ್ದ ಕೋಲಿನಿಂದ ಮೊಸಳೆಯನ್ನು ಹೊಡೆದಿದ್ದಾರೆ ತಾಯಿಯ ಕೂಗಾಟ ಕೇಳಿ ಸ್ಥಳಕ್ಕೆ ಬಂದ ಗ್ರಾಮಸ್ಥರು ಮೊಸಳೆಯ ದವಡೆಯಿಂದ ಬಾಲಕನನ್ನು ರಕ್ಷಿಸಿದ್ದು, ಅಷ್ಟರಲ್ಲಾಗಲೇ ಅವನ ಕೈಯನ್ನು ಮೊಸಳೆ ತಿಂದುಕೊಂಡಿತ್ತು. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಆತನಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುವ ಬದಲು ಬೆಂಚ್ ಮೇಲೆ ಮಲಗಿಸಿ ಚಿಕಿತ್ಸೆ ನೀಡಿದ್ದಾರೆ.

    ಇದನ್ನೂ ಓದಿ: ವಿಶ್ವಕಪ್​ ಎಂದರೆ ಆರ್​ಸಿಬಿ ಪರ ಆಡಿದಂತಲ್ಲಾ; ಕೊಹ್ಲಿ ಪ್ರದರ್ಶನದ ಕುರಿತು ಟೀಕಿಸಿದ ಪಾಕ್​ ಮಾಜಿ ನಾಯಕ

    ಈ ಕುರಿತು ಪ್ರತಿಕ್ರಿಯಿಸಿರುವ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು, ಬಾಲಕ ಕೆರೆಯ ಬಳಿ ಹೋಗಿದ್ದಾಗ ಆತನ ಮೇಲೆ ಮೊಸಳೆ ದಾಳಿ ಮಾಡಿದೆ. ಬಾಲಕ ಮೊಸಳೆಯೊಂದಿಗೆ ಹೋರಾಡಿದ್ದು ತನ್ನ ಕೈಯನ್ನು ಕಳೆದುಕೊಂಡಿದ್ದಾನೆ. ಬಾಲಕನ ಸ್ಥಿತಿಯನ್ನು ನೋಡಿದ ಗ್ರಾಮಸ್ಥರು ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಆತನಿಗೆ ಬೆಂಚ್​ ಮೇಲೆ ಮಲಗಿಸಿ ಚಿಕಿತ್ಸೆ ನೀಡಿದ್ದು, ಇದು ನಮ್ಮ ಗಮನಕ್ಕೆ ಬಂದಿದೆ.

    ವಿಚಾರ ತಿಳಿದ ಕೂಡಲೇ ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ನಿರ್ಲಕ್ಷ್ಯ ತೋರಿದ ವೈದ್ಯರು ಹಾಗೂ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈ ಸಂಬಂಧ ತನಿಖೆಗೆ ಆದೇಶಿಸಲಾಗಿದ್ದು, ವರದಿ ಆಧರಿಸಿ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಸಿನಿಮಾ

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_sticky', [[320, 50], [300, 50]], 'div-gpt-ad- 1719903699617-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_sticky --> <div id='div-gpt-ad-1719903699617-0' style='min-width: 300px; min-height: 50px;'> <script> googletag.cmd.push(function() { googletag.display('div-gpt-ad-1719903699617-0'); }); </script> </div>

    ಲೈಫ್‌ಸ್ಟೈಲ್

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_AP_300x250', [[300, 50], [250, 250], [300, 250], [200, 200]], 'div-gpt-ad-1719903811902-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_AP_300x250 --> <div id='div-gpt-ad-1719903811902-0' style='min-width: 200px; min-height: 50px;'> <script> googletag.cmd.push(function() { googletag.display('div-gpt-ad-1719903811902-0'); }); </script> </div>

    ಟೆಕ್ನಾಲಜಿ

    Latest Posts