More

    ದುಷ್ಕೃತ್ಯದಿಂದ ನೆಮ್ಮದಿ ಹಾಳು: ಯುಗಾದಿಯಂದೇ ದರ್ಶನ್​ ಬಗ್ಗೆ ಸ್ವಾಮೀಜಿ ನುಡಿದಿದ್ದ ಭವಿಷ್ಯ ನಿಜವಾಯ್ತು!

    ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಗೆಳತಿ ಪವಿತ್ರಾ ಗೌಡ ಹಾಗೂ ಸಹಚರರು ಅರೆಸ್ಟ್​ ಆಗಿರುವುದು ಇಡೀ ರಾಜ್ಯಕ್ಕೆ ಗೊತ್ತಿದೆ. ಡಿ-ಗ್ಯಾಂಗ್​ನ ಕೃತ್ಯ ತಿಳಿದು ಎಲ್ಲರು ಶಾಕ್​ ಆಗಿದ್ದಾರೆ. ಸ್ಟಾರ್​ ನಟನೊಬ್ಬ ಇಂತಹ ಹೇಯ ಕೃತ್ಯ ಎಸಗಿದ್ದಾನೆ ಎಂಬುದನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಸದ್ಯ ಈ ಪ್ರಕರಣ ರಾಜ್ಯದೆಲ್ಲೆಡೆ ಭಾರಿ ಚರ್ಚೆಯಾಗುತ್ತಿದೆ. ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದಕ್ಕೆ ರೇಣುಕಾಸ್ವಾಮಿಯ ಕೊಲೆ ನಡೆದಿದೆ ಎನ್ನಲಾಗಿದೆ. ಇದರಲ್ಲಿ ದರ್ಶನ್​ ಕೈವಾಡವಿರುವ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ.

    ನಟ ದರ್ಶನ್​ ಒಂದರ ಹಿಂದೆ ಒಂದಂತೆ ಸಾಕಷ್ಟು ವಿವಾದಗಳಲ್ಲಿ ಸಿಲುಕಿಕೊಳ್ಳುತ್ತಿದ್ದಾರೆ. ಹೀಗಾಗಿ ಅವರ ಗ್ರಹಚಾರ ಸರಿಯಿಲ್ಲ ಎಂಬ ಮಾತುಗಳು ಸಹ ಕೇಳಿಬರುತ್ತಿವೆ. ಇದರ ಬೆನ್ನಲ್ಲೇ ಈ ಹಿಂದೆ ಸಿದ್ದಲಿಂಗೇಶ್ವರ ಗದ್ದುಗೆ ಮಠದ(ಕಾಲಜ್ಞಾನ ಮಠ) ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದ ಭವಿಷ್ಯ ಕೊಲೆ ಪ್ರಕರಣದಲ್ಲಿ ದರ್ಶನ್​ ಬಂಧನದ ಬಳಿಕ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ.

    ಹಿಂದುಗಳ ಹೊಸ ವರ್ಷ ಯುಗಾದಿ ಹಬ್ಬದ ಸಂದರ್ಭದಲ್ಲಿ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿಯವರು 11 ಪುಟಗಳಲ್ಲಿ ಇಡೀ ವರ್ಷದಲ್ಲಿ ಘಟಿಸಬಹುದಾದ ಘಟನೆಗಳ ಬಗ್ಗೆ ಭವಿಷ್ಯವನ್ನು ನುಡಿದ್ದರು. ಇದರಲ್ಲಿ ನಟ ದರ್ಶನ್ ಅವರ ಬಗ್ಗೆಯೂ ಭವಿಷ್ಯ ನುಡಿಯಲಾಗಿತ್ತು. ದರ್ಶನ್​ ಗ್ರಹಗತಿ ಸರಿಯಿಲ್ಲ, ಸಾಕಷ್ಟು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಹೇಳಿದ್ದರು. ಇದೀಗ ದರ್ಶನ್​ ಬಂಧನವಾಗಿದ್ದು, ಸ್ವಾಮೀಜಿ ಭವಿಷ್ಯ ಮತ್ತೊಮ್ಮೆ ಸದ್ದು ಮಾಡುತ್ತಿದೆ.

    ಸ್ವಾಮೀಜಿ ನುಡಿದಿದ್ದ ಭವಿಷ್ಯವೇನು?
    ನಮ್ಮ ಕರ್ನಾಟಕದ ಖ್ಯಾತ ನಟರಾದ ಚಾಲೆಂಜಿಗ್ ಸ್ಟಾರ್ ದರ್ಶನ್ ರವರು ಬಹಳ ಕಷ್ಟದಿಂದ ಮೇಲೆ ಬಂದಿರುವವರು. ಅವರ ಪ್ರತಿಭೆ ಹಾಗೂ ಅವರು ಪಡೆದಿರುವ ಪ್ರಸಿದ್ದಿ ನಮ್ಮೆಲ್ಲರಿಗೂ ಸಂತೋಷದಾಯಕವಾದ ಮತ್ತು ಹೆಮ್ಮೆಯ ವಿಷಯವಾಗಿದೆ. ಆದರೆ ಈ ವರ್ಷ ಅವರಿಗೆ ಅನೇಕ ರೀತಿಯಿಂದ ಶತ್ರುಗಳ ತೊಂದರೆ, ಅನಾರೋಗ್ಯ ಬಾಧೆ, ಮಾನಹಾನಿಗಳು ಹಾಗೂ ಅನೇಕ ರೀತಿಯ ದುಷ್ಕೃತ್ಯಗಳ ಪ್ರಯೋಗದಿಂದ ನೆಮ್ಮದಿ ಹಾಳಾಗುತ್ತದೆ. ಆದ್ದರಿಂದ ಎಚ್ಚರಿಕೆ ವಹಿಸುವುದು ಅತ್ಯವಶ್ಯಕವಾಗಿದೆ ಮತ್ತು ನಿಮ್ಮ ರಕ್ಷಣಾವಲಯವನ್ನು ಹೆಚ್ಚು ಮಾಡುವುದು ಸೂಕ್ತ ಎಂದು ಸ್ವಾಮೀಜಿ ಭವಿಷ್ಯ ನುಡಿದಿದ್ದರು.

    ಕಾಟೇರ ಸಿನಿಮಾ ಯಶಸ್ಸಿನ ಬಳಿಕ ಉಮಾಪತಿ ಗೌಡ ಹಾಗೂ ದರ್ಶನ್​ ನಡುವಿನ ಕಿತ್ತಾಟ ಮತ್ತು ದರ್ಶನ್​ ಹುಟ್ಟುಹಬ್ಬದ ಸಂದರ್ಭದಲ್ಲಿ ಪತ್ನಿ ವಿಜಯಲಕ್ಷ್ಮೀ ಹಾಗೂ ಗೆಳತಿ ಪವಿತ್ರಾ ಗೌಡ ನಡುವಿನ ಮಾತಿನ ಸಮರದಿಂದ ಹಿಡಿದು ಇಂದು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್​ ಬಂಧನವಾಗಿದ್ದು, ಅವರ ಖ್ಯಾತಿ ಮಣ್ಣು ಪಾಲಾಗಿದೆ. ದರ್ಶನ್​ ವಿರುದ್ಧ ರಾಜ್ಯಾದ್ಯಂತ ಭಾರೀ ಟೀಕೆಗಳು ವ್ಯಕ್ತವಾಗುತ್ತಿವೆ. ಒಟ್ಟಾರೆ ದರ್ಶನ್​ ಅವರ ಗೌರವ ಹಾಗೂ ಪ್ರತಿಷ್ಠೆಗೆ ಭಾರಿ ಪೆಟ್ಟು ಬಿದ್ದಿದೆ. ಅನೇಕ ತಪ್ಪುಗಳಾದಾಗ ಎಚ್ಚೆತ್ತುಕೊಳ್ಳದೇ ತಪ್ಪು ಮೇಲೆ ತಪ್ಪು ಮಾಡಿ, ಕೊನೆಗೆ ಕಠಿಣ ಪ್ರಕರಣದಲ್ಲಿ ದರ್ಶನ್​ ಸಿಲುಕಿಕೊಂಡಿದ್ದಾರೆ. ಮೊದಲೇ ಎಚ್ಚೆತ್ತುಕೊಂಡಿದ್ದರೆ ಇಂದು ಈ ಪರಿಸ್ಥಿತಿ ದರ್ಶನ್​ಗೆ ಬರುತ್ತಿರಲಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.

    ಏನಿದು ರೇಣುಕಸ್ವಾಮಿ ಕೊಲೆ ಪ್ರಕರಣ?
    ಫೆಬ್ರವರಿ 27ರಿಂದ ಪವಿತ್ರಾ ಗೌಡಗೆ ರೇಣುಕಸ್ವಾಮಿ ಅಶ್ಲೀಲವಾಗಿ ಮೆಸೇಜ್ ಶುರು ಮಾಡಿದ್ದರು. ಅಕೌಂಟ್‌ ಬ್ಲಾಕ್‌ ಮಾಡಿದ್ದರೂ ಹೊಸ ಅಕೌಂಟ್‌ನಿಂದ ಮತ್ತದೇ ಮಸೇಜ್ ಕಳುಹಿಸುತ್ತಿದ್ದ. ಕಳೆದ ಶುಕ್ರವಾರ ಮರ್ಮಾಂಗದ ಫೋಟೋ ಕಳುಹಿಸಿ ‘ದರ್ಶನ್​ಗಿಂತ ನಾನೇನು ಕಡಿಮೆ ಬಾ’ ಎಂದು ಹೇಳಿದ್ದ. ಈ ರೀತಿಯ ಟಾರ್ಚರ್‌ ಸಹಿಸಿಕೊಳ್ಳಲಾಗದೇ ಪವಿತ್ರಾ ಅವರು ತಮ್ಮ ಮನೆಗೆಲಸದವ ಪವನ್​ಗೆ ಹೇಳಿದ್ದರು. ಈ ವಿಚಾರ ದರ್ಶನ್​ಗೆ ತಿಳಿದಿದೆ. ರೇಣುಕಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಣ ಮಾಡಿ ಕರೆದುಕೊಂಡು ಬಂದು ಶೆಡ್​ನಲ್ಲಿ ಇರಿಸಿಕೊಂಡು ಹಲ್ಲೆ ಮಾಡಿದ್ದ ದರ್ಶನ್ ಮತ್ತು ಗ್ಯಾಂಗ್​, ಹಲ್ಲೆಯಿಂದ ರೇಣುಕಸ್ವಾಮಿ ನಿಧನ ಹೊಂದಿದ ಬಳಿಕ ಆತಂಕಗೊಂಡು, ಶವವನ್ನು ಸಾಗಿಸುವ ದಾರಿ ಹುಡುಕಿದೆ. ಆಗ ಬೇರೆ ಗ್ಯಾಂಗ್ ಒಂದನ್ನು ಕರೆಸಿ ಅವರಿಗೆ ಶವ ಒಪ್ಪಿಸಿ, ಅದನ್ನು ವಿಲೇವಾರಿ ಮಾಡುವಂತೆ ಹೇಳಿ ಅವರಿಗೆ 30 ಲಕ್ಷ ರೂಪಾಯಿ ಹಣ ನೀಡಿದ್ದಾರೆ. ಈ ಹಣವನ್ನು ದರ್ಶನ್ ಅವರೇ ನೀಡಿದ್ದಾರೆ ಎನ್ನಲಾಗುತ್ತಿದೆ.

    ಹಣ ಪಡೆದ ಮತ್ತೊಂದು ಗ್ಯಾಂಗ್ ರೇಣುಕಸ್ವಾಮಿಯ ಶವವನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಮನಹಳ್ಳಿ ಮೋರಿಗೆ ಬಿಸಾಡಿ ಹೋಗಿದ್ದಾರೆ. ಶವ ದೊರೆತ ಬಳಿಕ ತಾವೇ ಕೊಲೆ ಮಾಡಿರುವುದಾಗಿ ಹೇಳಿ ಠಾಣೆಗೆ ಒಪ್ಪಿಕೊಂಡಿದ್ದಾರೆ. ಕೊಲೆ ಮಾಡಲು ಹಣಕಾಸಿನ ವಿಚಾರವೇ ಕಾರಣ ಎಂದು ಹೇಳಿದ್ದಾರೆ. ಆದರೆ ಒಬ್ಬೊಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆ ಮಾಡಿದಾಗ ಅವರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಿದೆ. ಬಳಿಕ ಪೊಲೀಸರು ತಮ್ಮದೇ ಶೈಲಿಯಲ್ಲಿ ವಿಚಾರಣೆ ಮಾಡಿದಾಗ ನಿಜಾಂಶ ಬಯಲಾಗಿದೆ. ಹಣ ಪಡೆದು ಶವ ವಿಲೇವಾರಿ ಜವಾಬ್ದಾರಿ ಹೊತ್ತಿದ್ದ ಗ್ಯಾಂಗ್, ದರ್ಶನ್​ರ ಆಪ್ತನೊಟ್ಟಿಗೆ ಸಂಪರ್ಕದಲ್ಲಿತ್ತಂತೆ. ಶವ ವಿಲೇವಾರಿ ಹಾಗೂ ಕೊಲೆಯ ಆರೋಪ ಹೊರಲೆಂದು ಮುಂಚಿತವಾಗಿಯೇ 30 ಲಕ್ಷ ರೂಪಾಯಿ ಹಣವನ್ನು ದರ್ಶನ್ ಅವರಿಂದ ಈ ಗ್ಯಾಂಗ್ ಪಡೆದಿತ್ತು ಎನ್ನಲಾಗಿದೆ.

    ಒಂದು ಕಾಲದ ಕುಚಿಕು ಗೆಳೆಯನ ಪತ್ನಿಗೆ ಮಧ್ಯರಾತ್ರಿಯಲ್ಲಿ ವಾಯ್ಸ್​ ಮೆಸೇಜ್ ಕಳುಹಿಸಿದ್ದ! ದಚ್ಚು​ ವಿರುದ್ಧ ಗಂಭೀರ ಆರೋಪ

    ದರ್ಶನ್​ ಬಗ್ಗೆ ಹೇಳಲಾಗದ ಅಸಹ್ಯಕರ ಸಂಗತಿಗಳಿವೆ, ಅವು ಕೂಡ ಹೊರಬರಲಿವೆ! ಭಾವನಾ ಬೆಳಗೆರೆ ಸ್ಫೋಟಕ ಹೇಳಿಕೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts